ಬೆಂಗಳೂರು: ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಎಸ್.ಆರ್.ಪಾಟೀಲ್ ಅವರು ರಾಜೀನಾಮೆ ಸಲ್ಲಿಸಿದ್ದಾರೆ.
ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಹೀನಾಯ ಸೋಲನ್ನು ಅನುಭವಿಸಿದ ಹಿನ್ನಲೆಯಲ್ಲಿ ಅದ್ರ ನೈತಿಕ ಹೊಣೆ ಹೊತ್ತು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. ರಾಜೀನಾಮೆ ಪತ್ರವನ್ನು ಮೇ 25 ರಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರಿಗೆ ಇಮೇಲ್ ಮೂಲಕ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಕುರಿತಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ ಆರ್ ಪಾಟೀಲ್ " ಕಾರ್ಯಾಧ್ಯಕ್ಷ ಸ್ಥಾನ ಕೊಡಿ ಎಂದು ನಾನು ಆಗ್ರಹಿಸಿರಲಿಲ್ಲ ಆದರೆ ಕೊಟ್ಟಂತಹ ಹುದ್ದೆಯನ್ನು ನಿಷ್ಠೆಯಿಂದ ನಿಭಾಯಿಸಿದ್ದೇನೆ ಎಂದು ತಿಳಿಸಿದರು. ಡಾ. ಜಿ.ಪರಮೇಶ್ವರ್ ಅವರು ಮೂರನೇ ಬಾರಿಗೆ ಕೆಪಿಸಿಸಿ ಅಧ್ಯಕ್ಷರನ್ನಾಗಿ ಆಯ್ಕೆಯಾದ ಸಂದರ್ಭದಲ್ಲಿ ಎಸ್.ಆರ್. ಪಾಟೀಲ್ ಮತ್ತು ದಿನೇಶ್ ಗುಂಡೂರಾವ್ ಅವರನ್ನು ಕೆಪಿಸಿಸಿ ಕಾರ್ಯಾಧ್ಯಕ್ಷರನ್ನಾಗಿ ನೇಮಿಸಲಾಗಿತ್ತು. ದಿನೇಶ್ ಗುಂಡೂರಾವ್ ಅವರಿಗೆ ದಕ್ಷಿಣ ಕರ್ನಾಟಕದ ಹೊಣೆ ನೀಡಿದ್ದರೆ, ಎಸ್.ಆರ್. ಪಾಟೀಲ್ ಅವರಿಗೆ ಉತ್ತರ ಕರ್ನಾಟಕದ ಹೊಣೆ ನೀಡಲಾಗಿತ್ತು.
ಆದರೆ ಇನ್ನೊಂದೆಡೆ ಅವರು ಅವರು ಸಚಿವ ಸ್ಥಾನ ಆಕಾಂಕ್ಷಿಯಾಗಿದ್ದರು ಆದರೆ ಕಾಂಗ್ರೆಸ್ ನಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ನಿಯಮ ವಿರುವ ಕಾರಣಕ್ಕೆ ಸಚಿವ ಸ್ಥಾನ ಪಡೆಯಲು ಅವರು ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ಎನ್ನಲಾಗುತ್ತಿದೆ.