ಬೆಂಗಳೂರು : ಗುಣಮಟ್ಟದ ಹೆಲ್ಮೆಟ್ ಧರಿಸೋಣ, ಪ್ರಾಣ ಉಳಿಸೋಣ ಅಭಿಯಾನಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಚಾಲನೆ ನೀಡಿದರು.
ಇಂದು ಬೆಂಗಳೂರು ಸಂಚಾರ ಪೋಲಿಸರು ಈ ಅಭಿಯಾನವನ್ನು ಪುನೀತ್ ರಾಜಕುಮಾರ್(Puneeth Rajkumar) ಗೆ ಸರ್ಮಪಣೆ ಮಾಡಿದರು. ನಗರದ ಇನ್ ಫ್ಯಾಂಟ್ರಿ ರಸ್ತೆಯ ಸಂಚಾರ ನಿರ್ವಹಣಾ ಕೇಂದ್ರದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಅಶ್ವಿನಿ ಪುನೀತ್ ರಾಜ್ಕುಮಾರ್ ಅವರು ಚಾಲನೆ ನೀಡಿದರು.
ಬೆಂಗಳೂರು ನಗರ ಪೊಲೀಸ್ ವತಿಯಿಂದ ಕರ್ನಾಟಕ ರತ್ನ ಶ್ರೀ ಪುನೀತ್ ರಾಜ್ ಕುಮಾರ್ ರವರಿಗೆ ಗೌರವಪೂರ್ವಕ ಶ್ರದ್ಧಾಂಜಲಿ.
ಉತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಿ, ಸುರಕ್ಷಿತವಾಗಿ ವಾಹನ ಚಲಾಯಿಸಿ. ಮತ್ತು ಕಡ್ಡಾಯವಾಗಿ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸಿ. #SafetyFirst #FollowTrafficRules @CPBlr @KamalPantIPS @jointcptraffic pic.twitter.com/KH5cc5YBnR
— BengaluruCityPolice (@BlrCityPolice) March 16, 2022
ಇದನ್ನೂ ಓದಿ : ಕಾಶ್ಮೀರಿ ಹಿಂದೂಗಳ ಹತ್ಯಾಕಾಂಡ ನಡೆಸಿದವರಿಗೆ ಕಾಂಗ್ರೆಸ್ ಹತ್ತಿರವಾಗಿತ್ತು: ಬಿಜೆಪಿ
ಕಾರ್ಯಕ್ರಮದಲ್ಲಿ ಪೋಲಿಸ್ ಕಮೀಷನರ್ ಕಮಲ್ ಪಂತ್(Kamal Pant), ಬೆಂಗಳೂರು ಸಂಚಾರ ವಿಭಾಗದ ಜಂಟಿ ಪೋಲಿಸ್ ಆಯುಕ್ತ ಡಾ.ಬಿ.ಆರ್ .ರವಿಕಾಂತೇಗೌಡ ಭಾಗಿಯಾಗಿದ್ದರು. ಸಾರ್ವಜನಿಕರಿಗೆ ಸಾಂಕೇತಿಕವಾಗಿ ಗುಣಮಟ್ಟದ ಹೆಲ್ಮೆಟ್ ವಿತರಣೆ ಮಾಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.