ಬೀಜಿಂಗ್: 133 ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಚೀನಾದ ವಿಮಾನವೊಂದು ಪತನ(China Plane Crash)ವಾಗಿದೆ ಎಂದು ವರದಿಯಾಗಿದೆ. ಚೀನಾದ ಈಸ್ಟರ್ನ್ ಪ್ಯಾಸೆಂಜರ್ ಜೆಟ್(China Eastern Airline) ನೈಋತ್ಯ ಚೀನಾದ ಅಜ್ಞಾತ ಸ್ಥಳದಲ್ಲಿ ಪತನಗೊಂಡಿರುವುದಾಗಿ ತಿಳಿದುಬಂದಿದೆ.
ಇದನ್ನೂ ಓದಿ: ಕಾಗದದ ಕೊರತೆಯಿಂದ ಶಾಲಾ ಪರೀಕ್ಷೆಗಳನ್ನು ರದ್ದುಗೊಳಿಸಿದ ಶ್ರೀಲಂಕಾ..!
ಈ ವಿಮಾನ ಪತನ ದುರಂತದಲ್ಲಿ ಆಗಿರುವ ಸಾವು-ನೋವುಗಳ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿ ತಿಳಿದುಬಂದಿಲ್ಲವೆಂದು ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಬೋಯಿಂಗ್ 737 ವಿಮಾನ(Boeing 737)ವು ಗುವಾಂಗ್ಕ್ಸಿ ಪ್ರದೇಶದ ವುಝೌ ನಗರದ ಸಮೀಪವಿರುವ ಗ್ರಾಮಾಂತರ ಪ್ರದೇಶದಲ್ಲಿ ಪತನಗೊಂಡಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Russia Ukraine War: ಉಕ್ರೇನ್ ಮೇಲೆ ಕಿಂಜಾಲ್ ಹೈಪರ್ಸಾನಿಕ್ ಕ್ಷಿಪಣಿ ಪ್ರಯೋಗಿಸಿದ ರಷ್ಯಾ
ವಿಮಾನ ಪತನ(Plane Crash)ವಾಗುವ ವೇಳೆ ಪರ್ವತದ ಬಳಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದ್ದು, ರಕ್ಷಣಾ ತಂಡಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಲಾಗಿದೆ. ಅಪಘಾತಕ್ಕೀಡಾಗಿರುವ ಜೆಟ್ ಬೋಯಿಂಗ್ 737 ವಿಮಾನವಾಗಿದ್ದು, ಘಟನೆಯಲ್ಲಿ ಸಾವನ್ನಪ್ಪಿದವರು, ಗಾಯಗೊಂಡವರ ಸಂಖ್ಯೆಯ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದುಬರಬೇಕಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.