ಮೈಸೂರು: ಡಾ. ಪುನೀತ್ ರಾಜ್‍ಕುಮಾರ್(Puneeth Rajkumar)... ಈ ಹೆಸರು ಪ್ರತಿಯೊಬ್ಬರ ಉಸಿರು. ‘ಅಪ್ಪು’ ಮಾಡಿದ ಸಾಧನೆಗೆ ಇದೀಗ ಡಾಕ್ಟರೇಟ್ ನೀಡಿ ಗೌರವಿಸಲಾಗಿದೆ. ಈ ಮೂಲಕ ‘ಕರುನಾಡ ರತ್ನ’ವನ್ನು ಮತ್ತೊಮ್ಮೆ ನೆನೆಯಲಾಗಿದೆ.
ಮೈಸೂರು ವಿವಿ 102ನೇ ಘಟಿಕೋತ್ಸವ(102nd Convocation of University of Mysore)ದಲ್ಲಿ ನಟ ಪುನೀತ್ ರಾಜ್‍ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ‘ಅಪ್ಪು’ ಪತ್ನಿ ಅಶ್ವಿನಿಯವರು ಗೌರವ ಡಾಕ್ಟರೇಟ್ ಪ್ರಶಸ್ತಿ ಸ್ವೀಕರಿಸಿದರು. ಮೈಸೂರು ವಿವಿಯಿಂದ ಪುನೀತ್ ರಾಜ್‍ಕುಮಾರ್ ಗೆ ಮರಣೋತ್ತರ ಗೌರವ ಡಾಕ್ಟರೇಟ್(Doctorate) ಪದವಿ ಪ್ರದಾನ ವೇಳೆ ಇಡೀ ಡಾ.ರಾಜ್ ಕುಮಾರ್ ಕುಟುಂಬವೇ ಹಾಜರಿತ್ತು. ಈ ವೇಳೆ ಪ್ರತಿಯೊಬ್ಬರೂ ಭಾವುಕರಾಗಿ ಅಗಲಿದ ‘ಕರುನಾಡ ರತ್ನ’ವನ್ನು ನೆನೆದರು. ಗಣ್ಯರ ಸಾಲಿನಲ್ಲಿ ಕುಳಿತುಕೊಂಡಿದ್ದ ಪುನೀತ್ ರಾಜ್‍ಕುಮಾರ್ ಸಹೋದರಿಯರು, ‘ಅಪ್ಪು’ ಪರವಾಗಿ ಅವರ ಪತ್ನಿ ಅಶ್ವಿನಿ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡುವಾಗ ಕಣ್ಣಲ್ಲಿ ನೀರು ತುಂಬಿಕೊಂಡಿದ್ದರು.
ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ಡಾಕ್ಟರೇಟ್
ಡಾ.ರಾಜ್ ಕುಟುಂಬದಿಂದ 2 ಚಿನ್ನದ ಪದಕ
On behalf of our family, friends & fans, It is an honour to receive the Doctorate for Shri Puneeth Rajkumar. I sincerely thank University of Mysore for their love & regards.
ಶ್ರೀ ಪುನೀತ್ ರಾಜ್‍ಕುಮಾರ್ ಅವರಿಗೆ ಗೌರವಾನ್ವಿತ ಡಾಕ್ಟರೇಟ್ ನೀಡಿದ ಮೈಸೂರು ವಿಶ್ವವಿದ್ಯಾನಿಲಯಕ್ಕೆ ನನ್ನ ವಂದನೆಗಳು. pic.twitter.com/ZMGsjEMfV7
— Ashwini Puneeth Rajkumar (@ashwinipuneet) March 22, 2022
ಈ ವಿಶೇಷ ಸಂದರ್ಭದಲ್ಲಿ ವರನಟ ಡಾ.ರಾಜ್ ಕುಮಾರ್ ಕುಟುಂಬದಿಂದ 2 ಚಿನ್ನದ ಪದಕ(Gold Medals)ಘೋಷಣೆ ಮಾಡಲಾಯಿತು. ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರಿಂದ ಎರಡು ಬಂಗಾರದ ಪದಕ ಘೋಷಣೆ ಮಾಡಿದ್ದು, ಬಿಸಿನೆಸ್ ಮ್ಯಾನೆಜ್‌ಮೆಂಟ್ ಮತ್ತು ಲಲಿತಾಕಲಾ ವಿಭಾಗಕ್ಕೆ 1 ಚಿನ್ನದ ಪದಕ ಘೋಷಣೆಯಾಗಿದೆ. ಪಾರ್ವತಮ್ಮ ರಾಜ್‍ಕುಮಾರ್ ಹೆಸರಿನಲ್ಲಿ ಬಿಸಿನೆಸ್ ಮ್ಯಾನೆಜ್‌ಮೆಂಟ್ ವಿಭಾಗಕ್ಕೆ ಚಿನ್ನದ ಪದಕ ಮತ್ತು ಪುನೀತ್ ರಾಜ್‍ಕುಮಾರ್ ಹೆಸರಿನಲ್ಲಿ ಲಲಿತಾಕಲಾ ವಿಭಾಗಕ್ಕೆ ಚಿನ್ನದ ಪದಕ ನೀಡಲಾಗಿದ್ದು, 2 ಚಿನ್ನದ ಪದಕವನ್ನು ಅಶ್ವಿನಿ ಪುನೀತ್ ರಾಜ್‍ಕುಮಾರ್ ಅವರೇ ವಿತರಿಸಲಿದ್ದಾರೆ.
ಇನ್ನು ಮೈಸೂರು ವಿವಿ ಘಟಿಕೋತ್ಸವ(Mysore University Convocation)ದಲ್ಲಿ ನಟ ರಾಘವೇಂದ್ರ ರಾಜ್‍ಕುಮಾರ್ ಮಾತನಾಡಿ, ‘ಜೀವನ ಒಂದು ಚಕ್ರ ಇದ್ದಂತೆ. ನಮ್ಮ ತಂದೆಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಿದ್ರು. ಇಂದು ನನ್ನ ತಮ್ಮನಿಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದೆ. ನನಗೆ ಇದು ವೇದಿಕೆ ರೀತಿ ಕಾಣಿಸುತ್ತಿಲ್ಲ, ಸರಸ್ವತಿಯ ಮಂದಿರ ತರ ಕಾಣ್ತಿದೆ. ನಿಮ್ಮ ಕೆಲಸವನ್ನು ಶ್ರದ್ಧೆಯಿಂದ ಮಾಡಿದ್ರೆ ಪ್ರಶಸ್ತಿಗಳು ಹುಡುಕಿ ಬರುತ್ತವೇ ಎಂದು ಪುನೀತ್ ಯಾವಾಗಲೂ ಹೇಳ್ತಿದ್ದ. ಹೂವಿನಿಂದ ನಾರು ಸ್ವರ್ಗ ಸೇರಿದಂತೆ ನನ್ನ ತಮ್ಮನಿಂದ ನಾನು ಸ್ವರ್ಗ ನೋಡುತ್ತಿದ್ದೇನೆ. ಈ ಗೌರವ ಡಾಕ್ಟರೇಟ್ ನಮ್ಮ ಕುಟುಂಬದ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ. ಅಶ್ವಿನಿ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಮಾಜಿಕ ಸೇವೆ ಮುಂದುವರೆಸುತ್ತೇವೆ’ ಎಂದು ಹೇಳಿದರು.
ಇದನ್ನೂ ಓದಿ: Valimai: ಬಾಕ್ಸ್ ಆಫೀಸ್ ಧೂಳಿಪಟ ಮಾಡಿದ ‘ವಲಿಮೈ’ ZEE5 ಒಟಿಟಿಗೆ ಎಂಟ್ರಿ..!
ಕರುನಾಡಿನ ‘ಅಪ್ಪು’ ಇನ್ಮುಂದೆ ಡಾ.ಪುನೀತ್ ರಾಜ್‍ಕುಮಾರ್(Dr Puneeth Rajkumar). ನಮ್ಮ ನಿಮ್ಮೆಲ್ಲರ ಪ್ರೀತಿಯ ‘ಅಪ್ಪು’ಗೆ ಡಾಕ್ಷರೇಟ್ ಗೌರವ ಸಿಕ್ಕಿರೋದು ಅಭಿಮಾನಿಗಳಿಗೆ ಸಂತಸ ಕೊಟ್ಟಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.