Vikramaditya Singh : ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಮತ್ತೊಬ್ಬ ನಾಯಕ

 ಜಮ್ಮು ಮತ್ತು ಕಾಶ್ಮೀರದ ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷ ವಿಫಲವಾಗಿದೆ ಎಂದು ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ್ದಾರೆ. ವಿಕ್ರಮಾದಿತ್ಯ ಸಿಂಗ್ ಅವರು ಮಹಾರಾಜ ಹರಿ ಸಿಂಗ್ ಅವರ ಮೊಮ್ಮಗ ಮತ್ತು ಅವರ ತಂದೆ ಕರಣ್ ಸಿಂಗ್ ಅವರು ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದರು.

Written by - Channabasava A Kashinakunti | Last Updated : Mar 22, 2022, 09:55 PM IST
  • ಜಮ್ಮು ಮತ್ತು ಕಾಶ್ಮೀರದ ರಾಜ ವಿಕ್ರಮಾದಿತ್ಯ ಸಿಂಗ್
  • ವಿಕ್ರಮಾದಿತ್ಯ ಸಿಂಗ್ ಇಂದು ಪಕ್ಷಕ್ಕೆ ರಾಜೀನಾಮೆ
  • ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ
Vikramaditya Singh : ಕಾಂಗ್ರೆಸ್‌ಗೆ ರಾಜೀನಾಮೆ ನೀಡಿದ ಮತ್ತೊಬ್ಬ ನಾಯಕ title=

ನವದೆಹಲಿ : ಕಾಂಗ್ರೆಸ್‌ನ ನಾಯಕ ಮತ್ತು ಜಮ್ಮು ಮತ್ತು ಕಾಶ್ಮೀರದ ರಾಜ ವಿಕ್ರಮಾದಿತ್ಯ ಸಿಂಗ್ ಇಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.  ಜಮ್ಮು ಮತ್ತು ಕಾಶ್ಮೀರದ ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಲು ಕಾಂಗ್ರೆಸ್ ಪಕ್ಷ ವಿಫಲವಾಗಿದೆ ಎಂದು ತಮ್ಮ ರಾಜೀನಾಮೆಗೆ ಕಾರಣ ತಿಳಿಸಿದ್ದಾರೆ. ವಿಕ್ರಮಾದಿತ್ಯ ಸಿಂಗ್ ಅವರು ಮಹಾರಾಜ ಹರಿ ಸಿಂಗ್ ಅವರ ಮೊಮ್ಮಗ ಮತ್ತು ಅವರ ತಂದೆ ಕರಣ್ ಸಿಂಗ್ ಅವರು ಯುಪಿಎ ಸರ್ಕಾರದಲ್ಲಿ ಸಚಿವರಾಗಿದ್ದರು.

ಸೋನಿಯಾ ಗಾಂಧಿಗೆ ರಾಜೀನಾಮೆ, ಫೇಸ್‌ಬುಕ್‌ನಲ್ಲಿ ಶೇರ್ 

ವಿಕ್ರಮಾದಿತ್ಯ ಸಿಂಗ್(Vikramaditya Singh) ತಮ್ಮ ರಾಜೀನಾಮೆ ಕುರಿತು ಫೇಸ್ ಬುಕ್ ನಲ್ಲಿ ಮಾಹಿತಿ ನೀಡಿದ್ದಾರೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ, ಜಮ್ಮು ಮತ್ತು ಕಾಶ್ಮೀರದ ಪರಿಸ್ಥಿತಿಯನ್ನು ಕಾಂಗ್ರೆಸ್ ಪಕ್ಷಕ್ಕೆ ಅರ್ಥ ಮಾಡಿಕೊಂಡಿಲ್ಲ. ನಾನು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತೇನೆ. ಜಮ್ಮು ಮತ್ತು ಕಾಶ್ಮೀರದ ಪ್ರಮುಖ ವಿಷಯಗಳ ಬಗ್ಗೆ ರಾಷ್ಟ್ರೀಯ ಹಿತಾಸಕ್ತಿಯ ಬಗ್ಗೆ ನನ್ನ ನಿಲುವು ಕಾಂಗ್ರೆಸ್ ಪಕ್ಷದೊಂದಿಗೆ ಹೊಂದಿಕೆಯಾಗುವುದಿಲ್ಲ. ಪಕ್ಷವು ನೆಲದ ವಾಸ್ತವದಿಂದ ದೂರವಿದೆ.

ಇದನ್ನೂ ಓದಿ : ಮಹಾ ಸಿಎಂ ಉದ್ಧವ್ ಠಾಕ್ರೆ ಸೋದರ ಮಾವನ ಆಸ್ತಿ ಜಪ್ತಿ ಮಾಡಿದ ED

ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ

ಪೋಸ್ಟ್ ಜೊತೆಗೆ ಸೋನಿಯಾ ಗಾಂಧಿ(Sonia Gandhi) ಅವರಿಗೆ ಬರೆದ ಪತ್ರದ ಪ್ರತಿಯನ್ನೂ ಹಂಚಿಕೊಂಡಿದ್ದಾರೆ. ಶ್ರೀಮತಿ ಸೋನಿಯಾ ಗಾಂಧಿ, ನಾನು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಜನರ ಭಾವನೆಗಳು ಮತ್ತು ಆಕಾಂಕ್ಷೆಗಳನ್ನು ಅನುಭವಿಸಲು ಮತ್ತು ವ್ಯಕ್ತಪಡಿಸಲು ಕಾಂಗ್ರೆಸ್‌ಗೆ ಸಾಧ್ಯವಾಗುತ್ತಿಲ್ಲ ಎಂದು ನಾನು ನಂಬುತ್ತೇನೆ.

 

ಕಾಶ್ಮೀರಿ ಹಿಂದೂಗಳ ಸಮಸ್ಯೆ

ವಿಕ್ರಮಾದಿತ್ಯ ಸಿಂಗ್ ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರ(Jammu and Kashmir)ದಿಂದ ಹಿಂದೂಗಳ ವಲಸೆಯ ಬಗ್ಗೆ  ಧ್ವನಿ ಎತ್ತಿದ್ದಾರೆ. ಕಾಶ್ಮೀರಿ ಹಿಂದೂಗಳ ನಿರ್ಗಮನದ ವಿಷಯವನ್ನು ಪ್ರಸ್ತಾಪಿಸಿದ ಅವರು, ಕಾಶ್ಮೀರದಲ್ಲಿ ಹಿಂದೂಗಳ ಹತ್ಯಾಕಾಂಡ ನಡೆಯುತ್ತಿದೆ ಎಂದು ಹೇಳಿದರು. ಕಾಶ್ಮೀರ, ದೋಡಾ, ಭದೇರ್ವಾ ಮತ್ತು ಕಿಶ್ತ್ವಾರ್‌ನ ಹಿಂದೂಗಳನ್ನು ಕೊಂದು ಅವರ ಮಾತೃಭೂಮಿಯಿಂದ ಹೊರಹಾಕಲಾಯಿತು ಎಂದು ಅವರು ಬರೆದಿದ್ದಾರೆ. ನಾನು 1989 ರಲ್ಲಿ ಶ್ರೀನಗರದಲ್ಲಿದ್ದೆ ಮತ್ತು ಆ ಭೀಕರ ಅಪಘಾತದ ನಂತರ ನನ್ನ ಕುಟುಂಬವು ತುಂಬಲಾರದ ನಷ್ಟವನ್ನು ಅನುಭವಿಸಿತುಈ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : Gold Reserves: ಜಗತ್ತಿನಲ್ಲಿ ಅತಿಹೆಚ್ಚು ಚಿನ್ನ ಹೊಂದಿರುವ ಟಾಪ್ 10 ದೇಶಗಳು

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News