ವಿಕ್ರಾಂತ್ ರೋಣ ಸಿನಿಮಾಗಾಗಿ ಇಡೀ ಭಾರತೀಯ ಚಿತ್ರರಂಗವೇ ಕಾತುರದಿಂದ ಕಾಯುತ್ತಿದೆ. ಕಿಚ್ಚ ಸುದೀಪ್ (Kiccha Sudeep) ಅಭಿನಯದ ಈ ಚಿತ್ರದ ಟೀಸರ್ ಹಾಗೂ ಪೋಸ್ಟರ್ಗಳು ಫ್ಯಾನ್ಸ್‌ಗಿದ್ದ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿವೆ.
ಕೊರೊನಾ (Corona) ಕಾರಣದಿಂದಾಗಿ ಫೆಬ್ರವರಿಯಲ್ಲಿ ತೆರೆಕಾಣಬೇಕಿದ್ದ ಸಿನಿಮಾ ರಿಲೀಸ್ ಡೇಟ್ ಮುಂದೂಡಲ್ಪಟ್ಟಿತು. ಆದರೆ ಚಿತ್ರತಂಡ ಮಾತ್ರ ನಿರಂತರವಾಗಿ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿದೆ. ಇಂದು (ಮಾರ್ಚ್ 29) ಚಿತ್ರತಂಡ ಹೊಸ ಅಪ್ಡೇಟ್ ನೀಡಿದೆ.
ಇದನ್ನೂ ಓದಿ: Oscars 2022 Update: ಆಸ್ಕರ್ ಪ್ರಶಸ್ತಿಗಳ ಘೋಷಣೆ, Will Smith ಹಾಗೂ Jessica Chastain ಅತ್ಯುತ್ತಮ ನಟ, ನಟಿ ಪ್ರಶಸ್ತಿ
ನಿರ್ದೇಶಕ ಅನೂಪ್ ಭಂಡಾರಿ (Anoop Bhandari) ಈ ಬಗ್ಗೆ ಟ್ವೀಟ್ ಮಾಡಿದ್ದು, ಯುಗಾದಿಗೆ ಕಿಚ್ಚನ ಅಭಿಮಾನಿಗಳಿಗೆ ಸಂತಸದ ಸುದ್ದಿ ನೀಡಿದೆ. ಏಪ್ರಿಲ್ 2ರಂದು ಬೆಳಗ್ಗೆ 9.55ಕ್ಕೆ ವಿಕ್ರಾಂತ್ ರೋಣ (Vikrant Rona) ರಿಲೀಸ್ ಟೀಸರ್ ಬಿಡುಗಡೆಯಾಗುತ್ತದೆ ಎಂದು ತಿಳಿಸಿದ್ದಾರೆ.
Announcing the arrival of the Devil! #VikrantRonaReleaseTeaser at 9:55 AM on Apr 2nd. #VikrantRona @KicchaSudeep @nirupbhandari @neethaofficial@Asli_Jacqueline @JackManjunath @shaliniartss @Alankar_Pandian @ZeeStudios_ pic.twitter.com/0OY1dBuAh4
— Anup Bhandari (@anupsbhandari) March 29, 2022
ಜಾಕ್ ಮಂಜು (Jack Manju) ನಿರ್ಮಾಣ ಮಾಡುತ್ತಿರುವ ವಿಕ್ರಾಂತ್ ರೋಣ (Vikrant Rona) ಚಿತ್ರದಲ್ಲಿ ಬಾಲಿವುಡ್ ಬೆಡಗಿ ಜಾಕ್ವೆಲಿನ್ ಫೆರ್ನಾಂಡಿಸ್ (Jacqueline Fernandez) ಕೂಡ ಕಾಣಿಸಿಕೊಂಡಿದ್ದಾರೆ. ಈ ಚಿತ್ರಕ್ಕೆ ಬಿ.ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದು, ವಿಲಿಯಂ ಡೇವಿಡ್ ಕ್ಯಾಮೆರಾ ಕಣ್ಣಲ್ಲಿ ಸೆರೆಯಾಗಿದೆ.
ಈ ಸಿನಿಮಾವನ್ನ ಅನೂಪ್ ಭಂಡಾರಿ (Anoop Bhandari) ನಿರ್ದೇಶಿಸಿದ್ದು, ನಟ ಕಿಚ್ಚ ಸುದೀಪ್ ಈವರೆಗೂ ಮಾಡಿರುವ ಸಿನಿಮಾಗಳಿಗಿಂತ ಕೊಂಚ ಭಿನ್ನವಾಗಿದೆ. ಬಹುತೇಕ ಕಥೆ ಕಾಡಿನಲ್ಲೇ ಸಾಗುವುದರಿಂದ ಅದ್ದೂರಿ ಕಾಡಿನ ಸೆಟ್ ಹಾಕಿ ಚಿತ್ರೀಕರಣ ಮಾಡಲಾಗಿದೆ. ಅರಣ್ಯದ ಸನ್ನಿವೇಶಗಳನ್ನು ಚಿತ್ರೀಕರಿಸಲು ಹೈದರಾಬಾದ್‌ನಲ್ಲಿ ಬೃಹತ್ ಕಾಡಿನ ಸೆಟ್ ಹಾಕಲಾಗಿತ್ತು ಎಂದು ತಿಳಿದುಬಂದಿದೆ.
ಇದನ್ನೂ ಓದಿ: Stalker: ಮಾರ್ಚ್ 31ಕ್ಕೆ ‘ಸ್ಟಾಕರ್’ ಸಿನಿಮಾ ಬಿಡುಗಡೆ
ಹೈದರಾಬಾದ್, ಬೆಂಗಳೂರು, ಕೇರಳ ಭಾಗದಲ್ಲಿ ವಿಕ್ರಾಂತ್ ರೋಣ ಚಿತ್ರೀಕರಣ ಮಾಡಲಾಗಿದೆ. ಸುದೀಪ್ ವಿಕ್ರಾಂತ್ ರೋಣ ಪಾತ್ರಕ್ಕೆ ಜೀವ ತುಂಬಿದ್ದು, ಇದೊಂದು ರೆಟ್ರೋ (Retro) ಕಾಲದ ಕಥೆಯನ್ನು ಒಳಗೊಂಡಿದೆ ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.