IPL 2022, SRH vs LSG: ಇಂದು ಹೈದರಾಬಾದ್ & ಲಕ್ನೋ ಸೆಣಸಾಟ, ಯಾರಿಗೆ ಗೆಲುವು..?

ಕೇನ್ ವಿಲಿಯಮ್ಸನ್ ನೇತೃತ್ವದ ಸನ್ ರೈಸರ್ಸ್‍ ಹೈದರಾಬಾದ್ ತಂಡ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗಗಳಲ್ಲೂ ಸುಧಾರಿಸಿಕೊಳ್ಳುವುದು ಅಗತ್ಯವಾಗಿದೆ.

Last Updated : Apr 4, 2022, 04:05 PM IST
  • ಇಂದು ಲಕ್ನೋ ಸೂಪರ್ ಜೈಂಟ್ಸ್ vs ಸನ್ ರೈಸರ್ಸ್ ಹೈದರಾಬಾದ್ ಸೆಣಸಾಟ
  • ಮತ್ತೊಂದು ಗೆಲುವಿನ ವಿಶ್ವಾಸದಲ್ಲಿರುವ ಕನ್ನಡಿಗ ಕೆ.ಎಲ್.ರಾಹುಲ್ ಪಡೆ
  • ಗೆಲುವಿನ ಖಾತೆ ತೆರೆಯುವ ಉತ್ಸಾಹದಲ್ಲಿರುವ ಕೇನ್ ವಿಲಿಯಮ್ಸನ್ ಬಳಗ
IPL 2022, SRH vs LSG: ಇಂದು ಹೈದರಾಬಾದ್ & ಲಕ್ನೋ ಸೆಣಸಾಟ, ಯಾರಿಗೆ ಗೆಲುವು..?   title=
ಗೆಲುವಿನ ವಿಶ್ವಾಸದಲ್ಲಿ ಕೆ.ಎಲ್.ರಾಹುಲ್ ಪಡೆ

ನವದೆಹಲಿ: 15ನೇ ಆವೃತ್ತಿಯ ಐಪಿಎಲ್ ಟೂರ್ನಿ(Indian Premier League 2022)ಯ 12ನೇ ಪಂದ್ಯದಲ್ಲಿ ಇಂದು ಲಕ್ನೋ ಸೂಪರ್ ಜೈಂಟ್ಸ್ ಮತ್ತು ಸನ್‍ರೈಸರ್ಸ್‍ ಹೈದರಾಬಾದ್(SRH vs LSG) ಸೆಣಸಾಟ ನಡೆಸಲಿವೆ. ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿಯಲ್ಲಿ ಇಂದು ಸಂಜೆ 7.30ಕ್ಕೆ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಯಾರು ಗೆಲುವು ಸಾಧಿಸುತ್ತಾರೆ ಅನ್ನೋ ಕುತೂಹಲ ಮೂಡಿದೆ.

ಕನ್ನಡಿಗ ಕೆ.ಎಲ್.ರಾಹುಲ್(KL Rahul) ನೇತೃತ್ವದ ಲಕ್ನೋ ತನ್ನ ಮೊದಲ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧ ಸೋಲು ಕಂಡಿತ್ತು. 2ನೇ ಪಂದ್ಯದಲ್ಲಿ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿ ಐಪಿಎಲ್ ಟೂರ್ನಿಯಲ್ಲಿ ಗೆಲುವಿನ ಖಾತೆ ತೆರೆದಿದೆ. ಸೋಮವಾರ ನಡೆಯಲಿರುವ ಪಂದ್ಯದಲ್ಲಿ ಹೈದರಾಬಾದ್ ವಿರುದ್ಧ ರಾಹುಲ್ ಪಡೆ ಗೆಲುವಿನ ವಿಶ್ವಾಸದಲ್ಲಿದೆ.

ಇದನ್ನೂ ಓದಿ: ICC Womens World Cup 2022: ಇಂಗ್ಲೆಂಡ್ ಮಣಿಸಿ 7ನೇ ಬಾರಿ ವಿಶ್ವ ಚಾಂಪಿಯನ್ ಆದ ಆಸ್ಟ್ರೇಲಿಯಾ

ಬ್ಯಾಟಿಂಗ್ ಮತ್ತು ಬೌಲಿಂಗ್ ನಲ್ಲಿ ಬಲಿಷ್ಠವಾಗಿರುವ ಲಕ್ನೋ(Lucknow Super Giants) ಕಳೆದ ಪಂದ್ಯದಲ್ಲಿ ಬೃಹತ್ ರನ್ ಚೇಸ್ ಮಾಡಿ ಚೆನ್ನೈಗೆ ಸೋಲಿನ ರುಚಿ ತೋರಿಸಿತ್ತು. ನಾಯಕ ಕೆ.ಎಲ್.ರಾಹುಲ್, ಕ್ವಿಂಟನ್ ಡಿ ಕಾಕ್, ಮನೀಶ್ ಪಾಂಡೆ, ಎವಿನ್ ಲೂಯಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ ಮುಂತಾದವರು ಲಕ್ನೋ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಬಲ ತುಂಬಲಿದ್ದಾರೆ. ಲಕ್ನೋ ತಂಡದ ಬೌಲಿಂಗ್ ವಿಭಾಗ ದುರ್ಬಲವಾಗಿದ್ದರೂ ಕಳೆದ ಪಂದ್ಯದಲ್ಲಿ ತೋರಿದ ಪ್ರದರ್ಶನ ಗಮನಿಸಿದರೆ ರಾಹುಲ್ ಪಡೆ ಯಾವುದೇ ಹಂತದಲ್ಲಿ ಗೆಲುವು ಸಾಧಿಸುವ ಸಾಮರ್ಥ್ಯವನ್ನು ಹೊಂದಿರುವುದು ಸ್ಪಷ್ಟವಾಗುತ್ತದೆ. ಹೀಗಾಗಿ ಹೈದರಾಬಾದ್ ನೀಡುವ ಸವಾಲಿನ ಮೇಲೆ ಪಂದ್ಯದ ಫಲಿತಾಂಶ ನಿರ್ಧಾರವಾಗಲಿದೆ.

ಇನ್ನು ಆಡಿದ ಮೊದಲ ಪಂದ್ಯದಲ್ಲಿ ಸೋಲು ಕಂಡು ಪಾಯಿಂಟ್ಸ್ ಪಟ್ಟಿಯಲ್ಲಿ ಕೊನೆ ಸ್ಥಾನದಲ್ಲಿರುವ ಕೇನ್ ವಿಲಿಯಮ್ಸನ್(Kane Williamson) ನೇತೃತ್ವದ ಹೈದರಾಬಾದ್(Sunrisers Hyderabad)ತಂಡಕ್ಕೆ ಈ ಪಂದ್ಯ ತುಂಬಾ ಮಹತ್ವದ್ದಾಗಿದೆ. ಬಲಿಷ್ಠ ರಾಜಸ್ಥಾನ್ ರಾಯಲ್ಸ್ ಎದುರು ಹೀನಾಯ ಸೋಲು ಕಂಡಿದ್ದ ಹೈದರಾಬಾದ್‍ಗೆ ಗೆಲುವಿನ ಖಾತೆ ತೆರೆಯುವ ವಿಶ್ವಾಸದಲ್ಲಿದೆ. ಬ್ಯಾಟಿಂಗ್-ಬೌಲಿಂಗ್ ಸೇರಿದಂತೆ ಎಲ್ಲಾ ವಿಭಾಗಗಳಲ್ಲಿಯೂ ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಹೈದರಾಬಾದ್‍ಗೆ ಗೆಲುವು ಸಿಗಬಹದು. ಹೀಗಾಗಿ ವಿಲಿಯಮ್ಸನ್ ಯಾವ ರೀತಿಯ ತಂತ್ರವನ್ನು ಮಾಡುತ್ತಾರೆ ಅನ್ನೋದರ ಮೇಲೆ ಪಂದ್ಯದ ಫಲಿತಾಂಶವು ನಿರ್ಧಾರವಾಗಲಿದೆ.  

ಇದನ್ನೂ ಓದಿ: ಸತತ 3 ಸೋಲಿನಿಂದ ಐಪಿಎಲ್ ನಲ್ಲಿ ಇತಿಹಾಸ ನಿರ್ಮಿಸಿದ CSK ತಂಡ!

ನಿಕೋಲಸ್ ಪೂರನ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮರ್ಕ್ರಂ, ಅಬ್ದುಲ್ ಸಮದ್, ರೊಮಾರಿಯೋ ಶೆಫರ್ಡ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಟಿ.ನಟರಾಜನ್, ಶ್ರೇಯಸ್ ಗೋಪಾಲ್ ಮುಂತಾದ ಉತ್ತಮ ಆಟಗಾರರು ಹೈದರಾಬಾದ್ ತಂಡದಲ್ಲಿದ್ದು, ಪ್ರತಿಯೊಬ್ಬರೂ ಗೆಲುವಿಗಾಗಿ ತಮ್ಮದೇಯಾದ ಕಾಣಿಕೆ ನೀಡಬೇಕಾಗಿದೆ.

ಎರಡೂ ತಂಡಗಳ ಸ್ಕ್ವಾಡ್ ಈ ರೀತಿ ಇದೆ:

ಲಕ್ನೋ ಸೂಪರ್ ಜೈಂಟ್ಸ್: ಕೆ.ಎಲ್.ರಾಹುಲ್, ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಮನೀಶ್ ಪಾಂಡೆ, ಎವಿನ್ ಲೂಯಿಸ್, ದೀಪಕ್ ಹೂಡಾ, ಆಯುಷ್ ಬಡೋನಿ, ಕೃನಾಲ್ ಪಾಂಡ್ಯ, ದುಷ್ಮಂತ ಚಮೀರಾ, ಆಂಡ್ರ್ಯೂ ಟೈ, ರವಿ ಬಿಷ್ಣೋಯ್, ಅವೇಶ್ ಖಾನ್, ಶಹಬಾಜ್ ನದೀಮ್, ಕೃಷ್ಣಪ್ಪ ಗೌತಮ್, ಅಂಕಿತ್ ರಾಜ್‌ಪೂತ್, ಮೊಹ್ಸಿನ್ ಖಾನ್, ಕರಣ್ ಶರ್ಮಾ, ಮಯಾಂಕ್ ಯಾದವ್, ಕೈಲ್ ಮೇಯರ್ಸ್, ಮನನ್ ವೋಹ್ರಾ

ಸನ್‌ರೈಸರ್ಸ್ ಹೈದರಾಬಾದ್: ಕೇನ್ ವಿಲಿಯಮ್ಸನ್ (ನಾಯಕ), ನಿಕೋಲಸ್ ಪೂರನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ಏಡೆನ್ ಮರ್ಕ್ರಂ, ಅಬ್ದುಲ್ ಸಮದ್, ರೊಮಾರಿಯೋ ಶೆಫರ್ಡ್, ವಾಷಿಂಗ್ಟನ್ ಸುಂದರ್, ಭುವನೇಶ್ವರ್ ಕುಮಾರ್, ಟಿ.ನಟರಾಜನ್, ಉಮ್ರಾನ್ ಮಲಿಕ್, ಶ್ರೇಯಸ್ ಗೋಪಾಲ್, ಜಗದೀಶ ಸುಚಿತ್, ಜಿ.ಶಶಾಂಕ್ ಸಿಂಗ್, ರವಿಕುಮಾರ್ ಸಮರ್ಥ್, ವಿಷ್ಣು ವಿನೋದ್, ಪ್ರಿಯಂ ಗರ್ಗ್, ಕಾರ್ತಿಕ್ ತ್ಯಾಗಿ, ಫಜಲ್ಹಕ್ ಫಾರೂಕಿ, ಮಾರ್ಕೊ ಜಾನ್ಸೆನ್, ಸೌರಭ್ ದುಬೆ

ಐಪಿಎಲ್‌ ಪಂದ್ಯ: 12

ಲಕ್ನೋ ಸೂಪರ್ ಜೈಂಟ್ಸ್ vs ಸನ್‌ರೈಸರ್ಸ್ ಹೈದರಾಬಾದ್

ದಿನಾಂಕ: ಏಪ್ರಿಲ್ 04, ಸೋಮವಾರ

ಸ್ಥಳ: ಮುಂಬೈನ ಡಾ. ಡಿವೈ ಪಾಟೀಲ್ ಸ್ಪೋರ್ಟ್ಸ್ ಅಕಾಡೆಮಿ

ಸಮಯ: ಸಂಜೆ 7.30ಕ್ಕೆ

========================================================================================

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News