ರಾಸಾಯನಿಕ ತಯಾರಿಕಾ ಘಟಕದಲ್ಲಿ ಬೆಂಕಿ: ಆಂಧ್ರಪ್ರದೇಶದ ಪೋರಸ್ ಲ್ಯಾಬ್ಸ್ ಲಿಮಿಟೆಡ್‌ನಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದು, 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿರುವ ಕೆಮಿಕಲ್ ಮ್ಯಾನುಫ್ಯಾಕ್ಚರಿಂಗ್ ಘಟಕದಲ್ಲಿ ಬುಧವಾರ ತಡರಾತ್ರಿ ಭಾರಿ ಬೆಂಕಿ ಕಾಣಿಸಿಕೊಂಡಿದ್ದು, ಘಟನೆಯಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ರಾಸಾಯನಿಕ ತಯಾರಿಕಾ ಘಟಕದಲ್ಲಿ ಸಂಭವಿಸಿದ ಈ ಅಪಘಾತದಲ್ಲಿ 11 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ವಿಜಯವಾಡದ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ- Raj Thackeray: ಥಾಣೆ ರ್‍ಯಾಲಿಯಲ್ಲಿ ಕತ್ತಿ ಹಿಡಿದಿದ್ದ ರಾಜ್ ಠಾಕ್ರೆ ಸೇರಿ ಮೂವರ ವಿರುದ್ಧ ಪ್ರಕರಣ
ಬಲಿಯಾದವರಲ್ಲಿ ಹೆಚ್ಚಿನವರು ಬಿಹಾರದ ನಿವಾಸಿಗಳು:
17 ಕಾರ್ಮಿಕರು ಕೆಲಸ ಮಾಡುತ್ತಿದ್ದ ಕೆಮಿಕಲ್ ಫ್ಯಾಕ್ಟರಿಯ ಎರಡು ಮಹಡಿಗಳಿಗೆ ಬೆಂಕಿ ಆವರಿಸಿದೆ. ಅಪಘಾತದಲ್ಲಿ ಸಾವನ್ನಪ್ಪಿದವರಲ್ಲಿ ಹೆಚ್ಚಿನವರು ಬಿಹಾರದ ನಿವಾಸಿಗಳಾಗಿದ್ದು, ಪಶ್ಚಿಮ ಗೋದಾವರಿ ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿರುವ ಪೋರಸ್ ಲ್ಯಾಬ್ಸ್ ಪ್ರೈವೇಟ್ ಲಿಮಿಟೆಡ್‌ನಲ್ಲಿ ರಾತ್ರಿ ಪಾಳಿಯಲ್ಲಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ- 7th Pay Commission : ಕೇಂದ್ರ ನೌಕರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ ನಿಮಗೆ ಬಿಗ್ ರಿಲೀಫ್!
ಬೆಂಕಿಗೆ ಕಾರಣ ತಿಳಿದುಬಂದಿಲ್ಲ:
ಪಶ್ಚಿಮ ಗೋದಾವರಿ ಜಿಲ್ಲಾ ಎಸ್ಪಿ ರಾಹುಲ್ ದೇವ್ ಶರ್ಮಾ ಮಾತನಾಡಿ, 'ಪಾಲಿಮರ್ ತಯಾರಿಸುವ ಪೋರಸ್ ಕೆಮಿಕಲ್ ಫ್ಯಾಕ್ಟರಿಯಲ್ಲಿ ಬುಧವಾರ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿ ಅನಾಹುತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ. ಗ್ಯಾಸ್ ಪೈಪ್‌ಲೈನ್‌ನಲ್ಲಿ ಸೋರಿಕೆ ಅಥವಾ ಒಡೆಯುವಿಕೆಯಿಂದ ಈ ಘಟನೆ ಸಂಭವಿಸಬಹುದು. ಬೆಂಕಿ ಹೊತ್ತಿಕೊಂಡ ಬಳಿಕ ಭಾರೀ ಪ್ರಮಾಣದಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಅದನ್ನು ಹತೋಟಿಗೆ ತರಲಾಗಿದೆ. ನಾವು ಎರಡು ಶವಗಳನ್ನು ಹೊರತೆಗೆದಿದ್ದೇವೆ, ಮೊದಲ ಮಹಡಿಯಿಂದ ಇನ್ನೂ ನಾಲ್ವರನ್ನು ಹೊರತೆಗೆಯಬೇಕಾಗಿದೆ. 11 ಗಾಯಾಳುಗಳನ್ನು ವಿಜಯವಾಡದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.