MI vs LSG: ಕನ್ನಡಿಗ ಕೆ.ಎಲ್ ರಾಹುಲ್ ಆರ್ಭಟಕ್ಕೆ ಸಚಿನ್, ಸೆಹ್ವಾಗ್ ದಾಖಲೆ ಧೂಳಿಪಟ

ಬ್ರಬೋರ್ನ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಅವರು ಕೇವಲ 56 ಎಸೆತಗಳಲ್ಲಿ ಮೂರನೇ ಐಪಿಎಲ್ ಶತಕವನ್ನು ಗಳಿಸಿದರು.ಟೈಮಲ್ ಮಿಲ್ಸ್ ಅವರ ಎಸೆತದಲ್ಲಿ ಬೌಂಡರಿ ಗಳಿಸುವ ಮೂಲಕ ಶತಕವನ್ನು ಗಳಿಸಿದರು.ಅವರ ಈ ಭರ್ಜರಿ ಇನಿಂಗ್ಸ್ ನಲ್ಲಿ ಬರೋಬ್ಬರಿ ಒಂಬತ್ತು ಬೌಂಡರಿ ಹಾಗೂ ಐದು ಸಿಕ್ಸರ್ ಗಳನ್ನು ಸಿಡಿಸಿದರು.

Written by - Zee Kannada News Desk | Last Updated : Apr 16, 2022, 08:53 PM IST
  • ಈಗ ಅವರ ಈ ಇನಿಂಗ್ಸ್ ನಿಂದ ಹೊಸ ದಾಖಲೆಯನ್ನು ಕೆ.ಎಲ್ ರಾಹುಲ್ ನಿರ್ಮಿಸಿದ್ದಾರೆ.
  • ವಿರಾಟ್ ಕೊಹ್ಲಿ ನಂತರ ಐಪಿಎಲ್‌ನಲ್ಲಿ ನಾಯಕನಾಗಿ ಬಹು ಶತಕಗಳನ್ನು ಗಳಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು,
 MI vs LSG: ಕನ್ನಡಿಗ ಕೆ.ಎಲ್ ರಾಹುಲ್ ಆರ್ಭಟಕ್ಕೆ ಸಚಿನ್, ಸೆಹ್ವಾಗ್ ದಾಖಲೆ ಧೂಳಿಪಟ  title=

ಮುಂಬೈ: ಬ್ರಬೋರ್ನ್ ಸ್ಟೇಡಿಯಂನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕ ಕೆಎಲ್ ರಾಹುಲ್ ಅವರು ಕೇವಲ 56 ಎಸೆತಗಳಲ್ಲಿ ಮೂರನೇ ಐಪಿಎಲ್ ಶತಕವನ್ನು ಗಳಿಸಿದರು.ಟೈಮಲ್ ಮಿಲ್ಸ್ ಅವರ ಎಸೆತದಲ್ಲಿ ಬೌಂಡರಿ ಗಳಿಸುವ ಮೂಲಕ ಶತಕವನ್ನು ಗಳಿಸಿದರು.ಅವರ ಈ ಭರ್ಜರಿ ಇನಿಂಗ್ಸ್ ನಲ್ಲಿ ಬರೋಬ್ಬರಿ ಒಂಬತ್ತು ಬೌಂಡರಿ ಹಾಗೂ ಐದು ಸಿಕ್ಸರ್ ಗಳನ್ನು ಸಿಡಿಸಿದರು.

ಇದನ್ನೂ ಓದಿ: ಐಪಿಎಲ್ 2022 ಗೆ ಇರುವ ವಿಮಾ ಪಾಲಿಸಿ ಎಷ್ಟು ಗೊತ್ತಾ?

ಈಗ ಅವರ ಈ ಭರ್ಜರಿ ಇನಿಂಗ್ಸ್ ನಿಂದ ಹೊಸ ದಾಖಲೆಯನ್ನು ಕೆ.ಎಲ್ ರಾಹುಲ್ ನಿರ್ಮಿಸಿದ್ದಾರೆ.ವಿರಾಟ್ ಕೊಹ್ಲಿ ನಂತರ ಐಪಿಎಲ್‌ನಲ್ಲಿ ನಾಯಕನಾಗಿ ಬಹು ಶತಕಗಳನ್ನು ಗಳಿಸಿದ ಎರಡನೇ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾದರು, ಇದುವರೆಗೆ ವಿರಾಟ್ ಕೊಹ್ಲಿ ಅವರು ಐದು ಶತಕಗಳನ್ನು ಗಳಿಸಿದ್ದಾರೆ.

.

ಇದನ್ನೂ ಓದಿ: KKR : ಟೀಂ ಇಂಡಿಯಾದ ಅಲ್ಲದೆ ಐಪಿಎಲ್ ನಿಂದಲು ಈ ಆಟಗಾರ ಔಟ್ : ಅಪಾಯದಲ್ಲಿ ವೃತ್ತಿಜೀವನ

ಇದೀಗ ನಾಯಕನಾಗಿ ರಾಹುಲ್ ಎರಡು ಶತಕಗಳಿಸುವ ಮೂಲಕ ಆಡಮ್ ಗಿಲ್‌ಕ್ರಿಸ್ಟ್, ಸಂಜು ಸ್ಯಾಮ್ಸನ್, ಸಚಿನ್ ತೆಂಡೂಲ್ಕರ್ ಮತ್ತು ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಈ ಆಟಗಾರರೆಲ್ಲಾ ತಲಾ ಒಂದು ಶತಕವನ್ನು ಗಳಿಸಿದ್ದಾರೆ.ಇನ್ನೊಂದು ವಿಶೇಷವೆಂದರೆ ಕೆ.ಎಲ್ ರಾಹುಲ್ ತಮ್ಮ 100 ನೇ ಐಪಿಎಲ್ ಪಂದ್ಯದಲ್ಲಿ ಶತಕವನ್ನು ಗಳಿಸಿದ್ದಾರೆ.ಆ ಮೂಲಕ ಈ ಸಾಧನೆ ಮಾಡಿದ ಮೊದಲ ಆಟಗಾರ ಎನ್ನುವ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಅಷ್ಟೇ ಅಲ್ಲದೆ ಐಪಿಎಲ್ ನಲ್ಲಿ ಮೂರು ಅಜೇಯ ಶತಕಗಳನ್ನು ಗಳಿಸಿದ ಏಕೈಕ ಭಾರತೀಯ ಆಟಗಾರ ಎನ್ನುವ ಹೆಗ್ಗಳಿಕೆಯೂ ಅವರದ್ದಾಗಿದೆ. ಈ ಹಿಂದೆ ಅವರು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 132* ಮತ್ತು ಮುಂಬೈ ಇಂಡಿಯನ್ಸ್ ವಿರುದ್ಧ 100* ರನ್ ಗಳಿಸಿದ್ದಾರೆ.ಈ ಹಿಂದೆ ಪಂಜಾಬ್ ಕಿಂಗ್ಸ್ ಅನ್ನು ಮುನ್ನಡೆಸುತ್ತಿದ್ದ ರಾಹುಲ್, ಈ ವರ್ಷ ತಮ್ಮ ನೆಲೆಯನ್ನು ಲಕ್ನೋ ತಂಡಕ್ಕೆ ಸೇರ್ಪಡೆಯಾಗಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

 

 

Trending News