ಅಣ್ಣಾವ್ರ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಶಾಲಾ ಮಕ್ಕಳಿಗೆ ಪುಸ್ತಕ ವಿತರಿಸಿದ್ದಾರೆ. ರಾಜ್ 94ನೇ ಹುಟ್ಟು ಹಬ್ಬ ಹಿನ್ನೆಲೆಯಲ್ಲಿ ಬೆಂಗಳೂರಿನ ಭಾರತಿನಗರ ಸಿಟಿಜನ್ ಫೋರಂ ಕಾರ್ಯಕ್ರಮ ಆಯೋಜನೆ ಮಾಡಿತ್ತು. ಸದಾಶಿವನಗರದ ಪುನೀತ್ ನಿವಾಸದಲ್ಲಿ ನಡೆದ ಕಾರ್ಯಕ್ಕೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಕೈ ಜೋಡಿಸಿದ್ದರು.