ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿಗೆ 14ದಿನ ಜೈಲು ಶಿಕ್ಷೆ ನೀಡಿದ ಕೋರ್ಟ್‌

ಬಾಗಲಕೋಟೆಯ ಗುಳೇದಗುಡ್ಡ ತಾಲೂಕಿನ ಲಿಂಗಾಪುರ ನಿವಾಸಿ ಮಂಜುನಾಥ್‌ (21) ಎಂಬಾತ ಮೊಬೈಲ್‌ ನಂಬರ್‌ ಕೊಟ್ಟು ಸಿಕ್ಕಿಹಾಕಿಕೊಂಡ ಕಿರಾತಕ.

Written by - Bhavishya Shetty | Last Updated : Apr 24, 2022, 04:27 PM IST
  • ಮಹಾರಾಷ್ಟ್ರದಲ್ಲಿ ಹನುಮಾನ್‌ ಚಾಲೀಸಾ ವಿವಾದ
  • ರಾಣಾ ದಂಪತಿಗೆ 14ದಿನ ಜೈಲು ಶಿಕ್ಷೆ
  • ಬಾಂದ್ರಾ ಮ್ಯಾಜಿಸ್ಟ್ರೇಟ್ ಆದೇಶ
ಹನುಮಾನ್ ಚಾಲೀಸಾ ವಿವಾದ: ರಾಣಾ ದಂಪತಿಗೆ 14ದಿನ ಜೈಲು ಶಿಕ್ಷೆ ನೀಡಿದ ಕೋರ್ಟ್‌ title=
Rana Couple

ಮುಂಬೈ: ಮಹಾರಾಷ್ಟ್ರದ ಬಾಂದ್ರಾದಲ್ಲಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನಿವಾಸ ‘ಮಾತೋಶ್ರೀ’ ಮುಂಭಾಗ ಹನುಮಾನ್ ಚಾಲೀಸಾವನ್ನು ಪಠಿಸುವುದಾಗಿ ಹೇಳಿಕೆ ನೀಡಿದ್ದ ಪಕ್ಷೇತರ ಶಾಸಕ ರವಿ ರಾಣಾ ಮತ್ತು ಅವರ ಪತ್ನಿ, ಸಂಸದೆ ನವನೀತ್ ರಾಣಾ ವಿರುದ್ಧ ಮುಂಬೈ ಪೊಲೀಸರು ದೇಶದ್ರೋಹ ಪ್ರಕರಣ ದಾಖಲಿಸಿದ್ದಾರೆ. ಜೊತೆಗೆ ಬಾಂದ್ರಾ ಮ್ಯಾಜಿಸ್ಟ್ರೇಟ್ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನ ಶಿಕ್ಷೆ ವಿಧಿಸಿದೆ.

ಈ ಸಂಬಂಧ ಮಾತನಾಡಿದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಪ್ರದೀಪ್ ಘಾರಟ್, ರಾಣಾ ದಂಪತಿಯ ಜಾಮೀನು ಅರ್ಜಿ ತುರ್ತು ವಿಚಾರಣೆ ಮಾಡಲು ನ್ಯಾಯಾಲಯ ನಿರಾಕರಿಸಿದೆ. ಏಪ್ರಿಲ್‌ 29ರ ಶುಕ್ರವಾರದಂದು ಮುಂದಿನ ವಿಚಾರಣೆ ಕೈಗೊಳ್ಳಲಿದೆ ಎಂದು ತಿಳಿಸಿದರು.

ಇದನ್ನು ಓದಿ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಬಾಲಕಿಗೆ ಫೋನ್‌ ನಂಬರ್‌ ಕೊಟ್ಟ ಕಿರಾತಕ: ಮುಂದಾಗಿದ್ದೇನು ಗೊತ್ತಾ?

ರಾಣಾ ದಂಪತಿ ಪರ ವಕೀಲ ರಿಜ್ವಾನ್ ಮರ್ಚೆಂಟ್ ಪೊಲೀಸರು ದಾಖಲಿಸಿರುವ ಪ್ರಕರಣ 'ಸುಳ್ಳು' ಎಂದು ವಾದಿಸಿದ್ದಾರೆ. ಒತ್ತಡದಲ್ಲಿ ಪೊಲೀಸರು ಸುಳ್ಳು ಪ್ರಕರಣ ದಾಖಲಿಸಿದ್ದಾರೆ. ಈ ಪ್ರಕರಣ ಆಧಾರ ರಹಿತ ಮತ್ತು ದಂಪತಿ ಯಾವುದೇ ರೀತಿಯ ಕಾನೂನು ಉಲ್ಲಂಘನೆ ಮಾಡಿಲ್ಲ ಎಂದು ಹೇಳಿದರು.

ಇನ್ನು ನ್ಯಾಯಾಲಯದ ತೀರ್ಪಿನ ನಂತರ, ದಂಪತಿ ನಿರಾಶೆಯಿಂದ ಹೊರಬಂದಿದ್ದಾರೆ. ನವನೀತ್ ರಾಣಾ ಅವರನ್ನು ಬೈಕುಲ್ಲಾ ಮಹಿಳಾ ಜೈಲಿಗೆ ಮತ್ತು ರವಿ ರಾಣಾರನ್ನು ಆರ್ಥರ್ ರಸ್ತೆಯಲ್ಲಿರುವ ಸೆಂಟ್ರಲ್ ಜೈಲಿಗೆ ಕರೆದೊಯ್ಯುವ ಸಾಧ್ಯತೆಯಿದೆ. 

ಇದನ್ನು ಓದಿ: PUC Result 2022: ಜೂನ್ ಕೊನೇ ವಾರದಲ್ಲಿ ಪಿಯುಸಿ ಪರೀಕ್ಷೆ ಫಲಿತಾಂಶ ಫಿಕ್ಸ್

ಘಟನೆ ಹಿನ್ನೆಲೆ: 
ಮುಂಬೈನ ಬಾಂದ್ರಾದಲ್ಲಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ನಿವಾಸ ʼಮಾತೋಶ್ರೀʼಯ ಮುಂಭಾಗದಲ್ಲಿ ಶನಿವಾರ ಬೆಳಗ್ಗೆ 9ಕ್ಕೆ ಹನುಮಾನ್ ಚಾಲೀಸಾ ಪಠಿಸುವುದಾಗಿ ರಾಣಾ ದಂಪತಿ ಶುಕ್ರವಾರ ಹೇಳಿಕೆ ನೀಡಿದ್ದರು. ರಾಣಾ ದಂಪತಿಯ ಈ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಶಿವಸೇನೆ ಕಾರ್ಯಕರ್ತರು ಬೆಳಗ್ಗೆಯಿಂದಲೇ ‘ಮಾತೋಶ್ರೀ’ ಬಳಿ ಜಮಾಯಿಸಿದ್ದರು. ಮತ್ತೊಂದು ಗುಂಪು ರಾಣಾ ದಂಪತಿ ನಿವಾಸದ ಮುಂದೆ ಪ್ರತಿಭಟನೆ ನಡೆಸಿತ್ತು. ಆ ಬಳಿಕ ಹನುಮಾನ್ ಚಾಲೀಸಾವನ್ನು ಪಠಿಸುವ ನಿರ್ಧಾರವನ್ನು ರಾಣಾ ದಂಪತಿ ಕೈಬಿಟ್ಟಿದ್ದರು. ಇನ್ನು ಈ ಬಳಿಕ ವಿವಿಧ ಸಮುದಾಯಗಳು ಹಾಗೂ ಗುಂಪುಗಳ ನಡುವೆ ದ್ವೇಷವನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ರಾಣಾ ದಂಪತಿಯನ್ನು ಖಾರ್‌ ಉಪನಗರದಲ್ಲಿರುವ ಅವರ ನಿವಾಸದಿಂದ ಬಿಗಿ ಭದ್ರತೆಯಲ್ಲಿ ಕರೆದುಕೊಂಡು ಹೋಗಲಾಗಿತ್ತು. ಇನ್ನು ಸಂಜೆ ವೇಳೆಗೆ ಪೊಲೀಸರು ಬಂಧಿಸಿದ್ದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News