ರವಿಬೆಳಗೆರೆ ಜಾಮೀನು ರದ್ದು ಪಡಿಸಲು ಹೈಕೋರ್ಟ್ ನಕಾರ

ಪತ್ರಕರ್ತ ರವಿ ಬೆಳಗೆರೆಗೆ ನೀಡಿದ್ದ ಜಾಮೀನನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ.   

Last Updated : Jun 28, 2018, 08:20 PM IST
ರವಿಬೆಳಗೆರೆ ಜಾಮೀನು ರದ್ದು ಪಡಿಸಲು ಹೈಕೋರ್ಟ್ ನಕಾರ title=

ಬೆಂಗಳೂರು: ಪತ್ರಕರ್ತ ರವಿ ಬೆಳಗೆರೆಗೆ ನೀಡಿದ್ದ ಜಾಮೀನನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. 

ಪತ್ರಕರ್ತ ಹಾಗೂ ಸ್ನೇಹಿತ ಸುನಿಲ್ ಹೆಗ್ಗರವಳ್ಳಿ ಹತ್ಯೆಗೆ ಸುಪಾರಿ ನೀಡಿದ್ದ ಆರೋಪ ಎದುರಿಸುತ್ತಿರುವ ರವಿ ಬೆಳಗೆರೆ ಅವರಿಗೆ ಬೆಂಗಳೂರಿನ ಎಸಿಎಂಎಂ ನ್ಯಾಯಾಲಯ ವಿಚಾರಣೆ ನಡೆಸಿ ಜಾಮೀನು ನೀಡಿತ್ತು. ಆದರೆ ಇದನ್ನು ಪ್ರಶ್ನಿಸಿ ಸರ್ಕಾರೀ ವಕೀಲರು ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆದರೆ, ಗುರುವಾರ ಇ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಆರೋಪಿಯು ನ್ಯಾಯಾಲಯ ವಿಧಿಸಿದ್ದ ಯಾವುದೇ ಷರತ್ತುಗಳನ್ನು ಉಲ್ಲಂಘಿಸದ ಹಿನ್ನೆಲೆಯಲ್ಲಿ ಜಾಮೀನು ರದ್ದು ಪಡಿಸಲು ಸಾಧ್ಯವಿಲ್ಲ ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿದೆ. 

ಪತ್ರಕರ್ತ ಸುನಿಲ್ ಹೆಗ್ಗರವಳ್ಳಿಯನ್ನು ಕೊಲ್ಲಲು 30 ಲಕ್ಷ ರೂ. ಸುಪಾರಿ ನೀಡಿದ ಆರೋಪದ ಮೇಲೆ ಡಿಸೆಂಬರ್ 7, 2017ರಂದು ಪತ್ರಕರ್ತ ರವಿ ಬೆಳಗೆರೆಯನ್ನು ಬೆಂಗಳೂರಿನ ಪದ್ಮನಾಭನಗರದ ಕಚೇರಿಯಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣ ಸಂಬಂಧ ಈಗಾಗಲೇ ಪೊಲೀಸರು ಆರೋಪಪಟ್ಟಿ ಸಲ್ಲಿಸಿದ್ದು, ತನಿಖೆ ಪ್ರಗತಿಯಲ್ಲಿದೆ. 

Trending News