ಬೆಂಗಳೂರು: ಮತಾಂತರ ನಿಷೇಧ ಮಸೂದೆ ರಾಜ್ಯ ಸಚಿವ ಸಂಪುಟ ಸುಗ್ರೀವಾಜ್ಞೆ ಅಂಗೀಕರಿಸಿದ್ದು, ಮುಂದಿನ ವಿಧಾನಸಭೆ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಕರ್ನಾಟಕ ಗೃಹ ಸಚಿವ ಆರಗ ಜ್ಞಾನೇಂದ್ರ ಗುರುವಾರ ಹೇಳಿದ್ದಾರೆ. ಅಲ್ಲಿಯವರೆಗೆ ಸುಗ್ರೀವಾಜ್ಞೆ ಜಾರಿಯಲ್ಲಿರುತ್ತದೆ ಎಂದು ಅವರು ಹೇಳಿದರು.
ಇದನ್ನೂ ಓದಿ: DKS v/s Ramya: ‘ನೀನೇ ಸಾಕಿದಾ ಗಿಣಿ ಹದ್ದಾಗಿ ಕುಕ್ಕಿತಲ್ಲೋ...!’
ಕರ್ನಾಟಕ ಕ್ಯಾಬಿನೆಟ್ ಮತಾಂತರ ನಿಷೇಧ ಮಸೂದೆಗೆ ಅನುಮೋದನೆ ನೀಡಿದೆ. ಅದನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು. ಅಲ್ಲಿಯವರೆಗೆ ಸುಗ್ರೀವಾಜ್ಞೆ ಜಾರಿಯಲ್ಲಿರುತ್ತದೆ ಎಂದು ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಸಂಪುಟ ಸಭೆ ಆರಂಭಕ್ಕೂ ಮುನ್ನ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸುಗ್ರೀವಾಜ್ಞೆ ಮೂಲಕ ಈ ಕ್ರಮವನ್ನು ತಮ್ಮ ಸರ್ಕಾರ ಜಾರಿಗೆ ತರಲಿದೆ ಎಂದು ಹೇಳಿದ್ದರು.
2021ರ ಡಿಸೆಂಬರ್‌ನಲ್ಲಿ ಬೆಳಗಾವಿಯಲ್ಲಿ ನಡೆದ ವಿಧಾನಮಂಡಲ ಅಧಿವೇಶನದಲ್ಲಿ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ (ಮತಾಂತರ ನಿಷೇಧ) ಮಸೂದೆಯನ್ನು ಸಿದ್ಧಪಡಿಸಲಾಗಿತ್ತು. ವಿಧಾನಸಭೆಯ ಒಪ್ಪಿಗೆ ದೊರಕಿದ್ದ ಮಸೂದೆಯನ್ನು ವಿಧಾನಪರಿಷತ್‌ನಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲು ಸರ್ಕಾರಕ್ಕೆ ಸಾಧ್ಯವಾಗಿರಲಿಲ್ಲ. ಈಗ ಸುಗ್ರೀವಾಜ್ಞೆ ಮೂಲಕ ಅದನ್ನು ಜಾರಿಗೊಳಿಸಲು ತೀರ್ಮಾನಿಸಿದೆ.
ಇದನ್ನೂ ಓದಿ: Makeup Tips: ನಿಮ್ಮ ಕಣ್ಣುಗಳನ್ನು ಸುಂದರಗೊಳಿಸಲು ಈ ರೀತಿಯ ಮೇಕಪ್ ಬಳಸಿ
ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರವಾಗಿ ಮತಾಂತರ ಮಾಡುವುದನ್ನು ತಡೆಯುವುಕ್ಕಾಗಿ ಮತಾಂತರ ನಿಷೇಧ ಮಸೂದೆಯನ್ನು ರಚಿಸಲಾಗಿದೆ. ಆಮಿಷ, ಪ್ರಲೋಭನೆ, ಉದ್ಯೋಗ, ಉಚಿತ ಶಿಕ್ಷಣ, ನಗದು, ಮದುವೆಯಾಗುವುದಾಗಿ ವಾಗ್ಧಾನ, ಉತ್ತಮ ಜೀವನ ಶೈಲಿಯ ಭರವಸೆ, ದೈವಿಕ ಅಸಂತೋಷ, ಒತ್ತಾಯ, ವಂಚನೆ ಮೂಲಕ ಮತಾಂತರ ಮಾಡುವುದಕ್ಕೆ ಈ ಮಸೂದೆಯ ಪ್ರಕಾರ ನಿಷೇಧವಿದೆ. ಒಂದು ಧರ್ಮದ ಆಚರಣೆಗಳ ಅವಹೇಳನ ಮಾಡುವುದನ್ನೂ ಆಮಿಷ ಎಂದೇ ಪರಿಗಣಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.