ಪೇರಲ ಎಲೆಗಳ ಪ್ರಯೋಜನಗಳು: ಸೀಬೆ ಹಣ್ಣು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ ಎಂದು ಹೇಳಲಾಗುತ್ತದೆ. ಏಕೆಂದರೆ ಇದು ಜೀರ್ಣಕ್ರಿಯೆ ಮತ್ತು ಇತರ ಅನೇಕ ಸಮಸ್ಯೆಗಳನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ಇದನ್ನು ಪೇರಲ ಹಣ್ಣು ಎಂತಲೂ ಕರೆಯಲಾಗುತ್ತದೆ. ಕೇವಲ ಪೇರಲ ಹಣ್ಣು ಮಾತ್ರವಲ್ಲ ಪೇರಲ ಎಲೆಗಳು ಕೂಡ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರ ಸೇವನೆಯಿಂದ ನಾವು ಹಲವು ರೀತಿಯ ಅರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು ಎನ್ನಲಾಗುತ್ತದೆ.
ಸೀಬೆ ಎಲೆಗಳಿಂದ ಸಿಗುವ ಪ್ರಯೋಜನಗಳಿವು:
ಸೀಬೆ ಎಲೆಗಳಲ್ಲಿ ಅಂದರೆ ಪೇರಲ ಎಲೆಗಳಲ್ಲಿ ಹಲವಾರು ಔಷಧೀಯ ಗುಣಗಳು ಕಂಡುಬರುತ್ತವೆ, ಇದನ್ನು ದೇಹಕ್ಕೆ ಪ್ರಯೋಜನಕಾರಿ ಎನ್ನಲಾಗಿದೆ. ಈ ಎಲೆಯ ಪ್ರಯೋಜನಗಳು ಮತ್ತು ಅದನ್ನು ಹೇಗೆ ಬಳಸುವುದು ಎಂದು ತಿಳಿಯಿರಿ.
1. ತೂಕ ನಷ್ಟದಲ್ಲಿ ಸಹಾಯಕವಾಗಿದೆ:
ಸಂಕೀರ್ಣ ಪಿಷ್ಟವನ್ನು ಸಕ್ಕರೆಯಾಗಿ ಪರಿವರ್ತಿಸಿದಾಗ, ತೂಕ ಹೆಚ್ಚಾಗುವುದು ಪ್ರಾರಂಭವಾಗುತ್ತದೆ, ಪೇರಲ ಎಲೆಗಳು ಈ ಪ್ರಕ್ರಿಯೆಯನ್ನು ನಿಲ್ಲಿಸಲು ಸಹಾಯ ಮಾಡುತ್ತದೆ, ಇದು ತೂಕ ನಷ್ಟಕ್ಕೆ ಕಾರಣವಾಗುತ್ತದೆ. ಅಲ್ಲದೆ, ಈ ಎಲೆಗಳು ಕಾರ್ಬೋಹೈಡ್ರೇಟ್ಗಳನ್ನು ಕಡಿಮೆ ಮಾಡುವ ಶಕ್ತಿಯನ್ನು ಹೊಂದಿವೆ, ಆದ್ದರಿಂದ ಇದನ್ನು ತಿನ್ನುವುದರಿಂದ ಬೊಜ್ಜು ದೂರವಾಗುತ್ತದೆ.
ಇದನ್ನೂ ಓದಿ- Coffee Side Effects: ಕಾಫಿ ಪ್ರಿಯರೇ... ಬೆಳಗ್ಗೆ ಎದ್ದ ತಕ್ಷಣ ಕಾಫಿ ಕುಡಿದ್ರೆ ಅಪಾಯ ಕಟ್ಟಿಟ್ಟಬುತ್ತಿ!
2. ಅತಿಸಾರದಿಂದ ಮುಕ್ತಿ:
ಪೇರಲ ಎಲೆಗಳು ಅತಿಸಾರದ ಸಮಸ್ಯೆಯಲ್ಲಿ ಬಹಳ ಸಹಾಯಕವಾಗಿದೆ ಎಂದು ಸಾಬೀತುಪಡಿಸಬಹುದು. ಇದಕ್ಕೆ ಅರ್ಧ ಕಪ್ ಅಕ್ಕಿ ಹಿಟ್ಟನ್ನು ಒಂದು ಲೋಟ ನೀರಿನಲ್ಲಿ ಕುದಿಸಿ ದಿನಕ್ಕೆರಡು ಬಾರಿ ಕುಡಿದರೆ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು ಎನ್ನಲಾಗುತ್ತದೆ.
3. ಕೊಲೆಸ್ಟ್ರಾಲ್ ಮಟ್ಟ ಕಡಿಮೆ ಇರುತ್ತದೆ:
ಹೆಚ್ಚು ಎಣ್ಣೆಯುಕ್ತ ಆಹಾರವನ್ನು ಸೇವಿಸುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಬಹುದು. ಕೊಲೆಸ್ಟ್ರಾಲ್ ಸಮಸ್ಯೆಯಿಂದ ಬಳಸುತ್ತಿರುವವರಿಗೆ ಪೇರಲ ಎಲೆಗಳ ಚಹಾ ಪ್ರಯೋಜನಕಾರಿ ಆಗಿದೆ. ಪೇರಲ ಎಲೆಗಳ ಚಹಾವನ್ನು ನಿರಂತರವಾಗಿ ಕುಡಿಯುವುದರಿಂದ ಇದರಿಂದ ಪರಿಹಾರ ಪಡೆಯಬಹುದು.
4. ಕೂದಲಿಗೆ ಒಳ್ಳೆಯದು:
ಪೇರಲ ಎಲೆಗಳಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ, ಇದು ಕೂದಲಿನ ಬೆಳವಣಿಗೆಯನ್ನು ಸುಧಾರಿಸುತ್ತದೆ. ಪೇರಲದ ಎಲೆಗಳನ್ನು ಅರೆದು ತಲೆಗೆ ಹಚ್ಚಿದರೆ ಕೂದಲು ರೇಷ್ಮೆಯಂತಹ ಹೊಳೆಯುವ ಕೂದಲು ನಿಮ್ಮದಾಗಲಿದೆ.
ಇದನ್ನೂ ಓದಿ- ಹೈ ಕೊಲೆಸ್ಟ್ರಾಲ್ ನಿಯಂತ್ರಿಸಲು ಈ ನೈಸರ್ಗಿಕ ವಿಧಾನಗಳನ್ನೊಮ್ಮೆ ಟ್ರೈ ಮಾಡಿ...
5. ಮಧುಮೇಹದಲ್ಲಿ ಪ್ರಯೋಜನಕಾರಿ:
ಪೇರಲ ಎಲೆಗಳಿಂದ ತಯಾರಿಸಿದ ಚಹಾವು ಆಲ್ಫಾ-ಗ್ಲುಕೋಸಿಡೇಸ್ ಕಿಣ್ವದ ಚಟುವಟಿಕೆಯನ್ನು ಕಡಿಮೆ ಮಾಡುವ ಮೂಲಕ ಮಧುಮೇಹ ರೋಗಿಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಮಾಂತ್ರಿಕವಾಗಿ ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದಕ್ಕಾಗಿ, ಸುಮಾರು 3 ತಿಂಗಳ ಕಾಲ ಪ್ರತಿದಿನ ಈ ಎಲೆಯ ಚಹಾವನ್ನು ಕುಡಿಯುವಂತೆ ಸಲಹೆ ನೀಡಲಾಗುತ್ತದೆ.
ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.