ಬೆಂಗಳೂರು : ಸಿಲಿಕಾನ್ ಸಿಟಿಯ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೊದಲು ಪೊಲೀಸ್ ಆಯುಕ್ತರಾಗಿದ್ದ ಕಮಲ್ ಪಂತ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ಸರ್ಕಾರ ವರ್ಗಾವಣೆ ಮಾಡಿದೆ.
ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್ಟೇಬಲ್(ಕೆಎಸ್ಆರ್ಪಿ) ಡೈರೆಕ್ಟರ್ ಜೆನೆರಲ್ ಆಫ್ ಪೊಲೀಸ್ (ಪೊಲೀಸ್ ಮಹಾನಿರ್ದೇಶಕರು) ಮತ್ತು ಇನ್ಸ್ಪೆಕ್ಟರ ಜೆನೆರಲ್ ಎಡಿಜಿಪಿ ಆಗಿದ್ದ ಅಲೋಕ್ಕುಮಾರ್ ಅವರನ್ನು ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ ಪ್ರಭಾರ್ ಆಗಿದ್ದ ಆರ್. ಹಿತೇಂದ್ರ ಅವರನ್ನು ವರ್ಗಾಯಿಸಲಾಗಿದೆ.
ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಎಂಎನ್ ಅನುಚೇತ್ ಅವರನ್ನು ಸಿಐಡಿಗೆ ವರ್ಗಾಯಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.