ಜೆಡಿಎಸ್ ಮಿಶನ್ 123 ಅಲ್ಲ, ಅದು ಮಿಶನ್ 1+2+3!: ಬಿಜೆಪಿ ವ್ಯಂಗ್ಯ

'ಜನತಾ ಜಲಧಾರೆ' ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಶುರುವಾಗಿದೆ ಎಂಬ ಮಾಜಿ ಸಿಎ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.

Written by - Zee Kannada News Desk | Last Updated : May 18, 2022, 02:02 PM IST
  • ಜನತಾ ಪರಿವಾರ ಎಂದರೆ ಈಗ ಎಚ್.ಡಿ.ದೇವೇಗೌಡ & ಸನ್ಸ್‌ ಪ್ರೈವೇಟ್ ಲಿಮಿಟೆಡ್‌ ಎಂಬಂತಾಗಿದೆ
  • ಭಾರತಕ್ಕೆ ನೆಹರು ಕುಟುಂಬವಾದದ ಪಿತಾಮಹರಾದರೆ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಆದ್ಯ ಪಿತಾಮಹ
  • #LuckyDipCmHDK ಅವರು ಕುಟುಂಬವಾದದ ಬಹುದೊಡ್ಡ ಫಲಾನುಭವಿ ಎಂದು ಟೀಕಿಸಿದ ಬಿಜೆಪಿ
ಜೆಡಿಎಸ್ ಮಿಶನ್ 123 ಅಲ್ಲ, ಅದು ಮಿಶನ್ 1+2+3!: ಬಿಜೆಪಿ ವ್ಯಂಗ್ಯ   title=
ಜೆಡಿಎಸ್ ಕುಟುಂಬ ರಾಜಕಾರಣದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಜೆಡಿಎಸ್‌ ಪಕ್ಷ ಹೇಳಿಕೊಳ್ಳುತ್ತಿರುವ ಮಿಶನ್‌ 123 ವಾಸ್ತವದಲ್ಲಿ ಮಿಶನ್‌ 123 ಅಲ್ಲ, ಅದು ಮಿಶನ್ 1+2+3! ಎಂದು ಬಿಜೆಪಿ ವ್ಯಂಗ್ಯವಾಡಿದೆ. ಜನತಾ ಜಲಧಾರೆ ಕಾರ್ಯಕ್ರಮದ ಮೂಲಕ 2023ರ ವಿಧಾನಸಭೆ ಚುನಾವಣೆಯ ಮಿಷನ್ 123 ಯುದ್ಧ ಶುರುವಾಗಿದೆ ಎಂಬ ಮಾಜಿ ಸಿಎ ಎಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ.

‘ಜನತಾ ಪರಿವಾರ ಎಂದರೆ ಈಗ ದೇವೇಗೌಡ & ಸನ್ಸ್‌ ಪ್ರೈವೇಟ್ ಲಿಮಿಟೆಡ್‌ ಎಂಬಂತಾಗಿದೆ. ಭಾರತಕ್ಕೆ ನೆಹರು ಕುಟುಂಬವಾದದ ಪಿತಾಮಹರಾದರೆ, ಕರ್ನಾಟಕಕ್ಕೆ ದೇವೇಗೌಡರೇ ಕುಟುಂಬವಾದದ ಆದ್ಯ ಪಿತಾಮಹ. ಮಾಜಿ #LuckyDipCmHDK ಅವರು ಕುಟುಂಬವಾದದ ಬಹುದೊಡ್ಡ ಫಲಾನುಭವಿ’ ಎಂದು ಕುಟುಕಿದೆ.

ಇದನ್ನೂ ಓದಿ: ಮಾಜಿ ಪ್ರಧಾನಿ H.D Devegowdaರಿಗೆ ಹುಟ್ಟುಹಬ್ಬದ ಸಂಭ್ರಮ: ʼಮಣ್ಣಿನ ಮಗʼನಿಗೆ 90ರ ಹರೆಯ...!

‘123 ಕ್ಷೇತ್ರದಲ್ಲಿ ಗೆಲುವು ಸಾಧಿಸುವ ಗುರಿ ಹೊಂದಿದ್ದೇವೆ ಎಂದು ಬೀಗುವ ಮಾಜಿ #LuckyDipCmHDK ಅವರೇ, 123 ಕ್ಷೇತ್ರಗಳಿಗೆ ನಿಮ್ಮ ಪಕ್ಷದಿಂದ ಅಭ್ಯರ್ಥಿಗಳು ಸಿಗಬಹುದೇ? ನಿಮ್ಮ ವಂಶಾಡಳಿತದಿಂದ ಬೇಸತ್ತು ವಲಸೆ ಹೋಗುವವರ ಸಂಖ್ಯೆಯೇ‌ ಇದರ ಕಾಲು ಭಾಗದಷ್ಟಿದೆ. ಹೀಗಿರುವಾಗ ಜೆಡಿಎಸ್‌ ನಾಮಾವಶೇಷವಾಗುವುದರಲ್ಲಿ ಸಂಶಯವಿದೆಯೇ?’ ಎಂದು ಪ್ರಶ್ನಿಸಿದೆ.

‘ಮಾಜಿ #LuckyDipCmHDK ಅವರೇ, ನಿಮ್ಮ ಪಂಚರತ್ನ ಕಾರ್ಯಕ್ರಮಕ್ಕೆ ಶುಭವಾಗಲಿ. ಆದರೆ ಜೆಡಿಎಸ್ ಪಕ್ಷದ ಪಂಚರತ್ನ ಎಂದರೆ ಜನ ಬೇರೆಯದೇ ಮಾತನಾಡುತ್ತಾರೆ. ದೇವೇಗೌಡ, ರೇವಣ್ಣ, ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಮತ್ತು ನಿಖಿಲ್ ಕುಮಾರಸ್ವಾಮಿ. ಇವರೇ ಜೆಡಿಎಸ್ ಪಂಚರತ್ನಗಳು. ಐದು ಕ್ಷೇತ್ರದ ಗೆಲುವೇ ಪಂಚರತ್ನ ಯೋಜನೆಯೇ?’ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ: ಜಿ.ಟಿ.ದೇವೇಗೌಡ ನಿವಾಸಕ್ಕೆ ಎಚ್‌ಡಿಕೆ ಭೇಟಿ: ಮೊಮ್ಮಗಳ ನಿಧನಕ್ಕೆ ಸಾಂತ್ವನ

‘ಜೆಡಿಎಸ್‌ ಪಕ್ಷ ಹೇಳಿಕೊಳ್ಳುತ್ತಿರುವ ಮಿಶನ್‌ 123 ವಾಸ್ತವದಲ್ಲಿ ಮಿಶನ್‌ 123 ಅಲ್ಲ, ಅದು ಮಿಶನ್ 1+2+3! 1) ದೇವೇಗೌಡ, 2) ಕುಮಾರ ಸ್ವಾಮಿ, ರೇವಣ್ಣ ಮತ್ತು 3) ಅನಿತಾ, ಪ್ರಜ್ವಲ್‌, ಸೂರಜ್. 1+2+3=6, ಅಂದರೆ ದೇವೇಗೌಡ ಕುಟುಂಬದ ಗೆಲುವೇ ಪಕ್ಷದ ಗೆಲುವೇ? ಇದು ಕುಟುಂಬವಾದ ಅಲ್ಲದೆ ಮತ್ತೇನು? #LuckyDipCmHDK?’ ಎಂದು ಬಿಜೆಪಿ ವ್ಯಂಗ್ಯವಾಗಿ ಪ್ರಶ್ನಿಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News