2nd PUC Result date : ಈ ದಿನದಂದು ಹೊರಬೀಳಲಿದೆ ದ್ವಿತೀಯ ಪಿಯುಸಿ ಫಲಿತಾಂಶ

2nd PUC Result date : ಯಾವುದೇ ಅಡೆತಡೆಯಿಲ್ಲದೆ ದ್ವಿತೀಯ ಪಿಯು ಪರೀಕ್ಷೆಯು ಮುಕ್ತಾಯವಾಗಿದೆ. ಮುಂದಿನ ವಾರದಲ್ಲಿ ಮೌಲ್ಯಮಾಪನ ಪ್ರಾರಂಭವಾಗಲಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್   ಸ್ಪಷ್ಟಪಡಿಸಿದ್ದಾರೆ.

Written by - Ranjitha R K | Last Updated : May 20, 2022, 01:19 PM IST
  • ಯಾವಾಗ ಹೊರಬೀಳಲಿದೆ ದ್ವಿತೀಯ ಪಿಯುಸಿ ಫಲಿತಾಂಶ
  • ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಘೋಷಣೆ
  • ಈ ಲಿಂಕ್ ಮೂಲಕ ಪರಿಶೀಲಿಸಿಕೊಳ್ಳಿ ನಿಮ್ಮ ಫಲಿತಾಂಶ
 2nd PUC Result date : ಈ ದಿನದಂದು ಹೊರಬೀಳಲಿದೆ ದ್ವಿತೀಯ ಪಿಯುಸಿ  ಫಲಿತಾಂಶ  title=
2nd PUC Result date (file photo)

ಬೆಂಗಳೂರು : 2nd PUC Result date : ನಿನ್ನೆಯಷ್ಟೇ ಎಸ್.ಎಸ್.ಎಲ್.ಸಿ  ಫಲಿತಾಂಶ ಹೊರ ಬಿದ್ದಿದೆ. ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಜೂನ್ ಮೂರನೇ ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್  ತಿಳಿಸಿದ್ದಾರೆ. ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯು ಮುಂದಿನ ವಾರ ಪ್ರಾರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ. 

ಯಾವುದೇ ಅಡೆತಡೆಯಿಲ್ಲದೆ ದ್ವಿತೀಯ ಪಿಯು ಪರೀಕ್ಷೆಯು ಮುಕ್ತಾಯವಾಗಿದೆ. ಮುಂದಿನ ವಾರದಲ್ಲಿ ಮೌಲ್ಯಮಾಪನ ಪ್ರಾರಂಭವಾಗಲಿದೆ ಎಂದು  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್   ಸ್ಪಷ್ಟಪಡಿಸಿದ್ದಾರೆ. ಇನ್ನು ಜೂನ್ ಮೂರನೇ ವಾರದಲ್ಲಿ ಫಲಿತಾಂಶವನ್ನು  ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ. ಫಲಿತಾಂಶಗಳು ಪ್ರಕಟವಾದ ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ pue.karnataka.gov.in ಮತ್ತು karresults.nic.in ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು.

ಇದನ್ನೂ ಓದಿ : ಪುಸ್ತಕ ಬಹುಮಾನಕ್ಕಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಅರ್ಜಿ ಆಹ್ವಾನ

ಏಪ್ರಿಲ್ 22 ರಿಂದ  ಮೇ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ವರ್ಷ ಆಫ್‌ಲೈನ್‌ನಲ್ಲಿ ಪರೀಕ್ಷೆ ನಡೆದಿದ್ದು, 6,84,255 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ. 

 

 ದ್ವಿತೀಯ ಪಿಯುಸಿ ಫಲಿತಾಂಶ 2022 ಅನ್ನು ಪರಿಶೀಲಿಸುವುದು ಹೇಗೆ  ? 
1. ಅಧಿಕೃತ ವೆಬ್‌ಸೈಟ್‌ಗಳಿಗೆ  pue.karnataka.gov.in ಮತ್ತು karresults.nic.inಗೆ ಹೋಗಿ. 
2.  ದ್ವಿತೀಯ PUC ಫಲಿತಾಂಶ 2022 ಲಿಂಕ್ ಅನ್ನು ಕ್ಲಿಕ್ ಮಾಡಿ
3. ಅಗತ್ಯವಿರುವ ವಿವರಗಳನ್ನು ಇಲ್ಲಿ ಭರ್ತಿ ಮಾಡಿ.
4. ಇಷ್ಟಾದ ಮೇಲೆ ಸ್ಕ್ರೀನ್ ಮೇಲೆ ಫಲಿತಾಂಶ ಕಾಣಿಸುತ್ತದೆ
5. ಅಗತ್ಯವಿದ್ದರೆ ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಬಹುದು.

ಇದನ್ನೂ ಓದಿ : ರಾಜ್ಯದಲ್ಲಿ 4 ದಿನ ವರುಣಾರ್ಭಟ: ರಾಜಧಾನಿಯಲ್ಲಿ ಕಟ್ಟೆಚ್ಚರ

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News