Diabetes: ಇದು ಬೇಸಿಗೆ ಕಾಲ, ಹೀಗಾಗಿ ಇದೀಗ ಎಲ್ಲರೂ ಮಾವಿನ ಹಣ್ಣನ್ನು ತಿನ್ನಲು ಪ್ರಾರಂಭಿಸಿರಬೇಕು, ಆದರೆ ಇದರ ಎಲೆಗಳು ಮಧುಮೇಹ ರೋಗಿಗಳಿಗೆ ತುಂಬಾ ಉಪಯುಕ್ತವಾಗಿದೆ ಎಂದು ನಿಮಗೆ ತಿಳಿದಿದೆಯಾ? ಇದು ಹೇಗೆ ಸಾಧ್ಯ ಎಂದು ನೀವೂ ಯೋಚಿಸುತ್ತಿರಬೇಕು. ಆದರೆ ಇದು ನಿಜ, ರಕ್ತದಲ್ಲಿನ ಸಕ್ಕರೆ ಪ್ರಮಾಣ ನಿಯಂತ್ರಿಸಲು ಈ ಹಣ್ಣಿನ ಎಲೆಗಳನ್ನು ಹೇಗೆ ಬಳಸುವುದು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ. ಆದರೆ, ಗಂಭೀರ ರೋಗ ಲಕ್ಷಣಗಳನ್ನು ಹೊಂದಿರುವವರು ಮಾವಿನ ಎಲೆಗಳನ್ನು ಸೇವಿಸುವ ಮೊದಲು ಒಮ್ಮೆ ತಮ್ಮ ವೈದ್ಯರನ್ನು ಸಂಪರ್ಕಿಸಬೇಕು.
ಮಾವಿನ ಎಲೆಗಳನ್ನು ಈ ರೀತಿ ಬಳಸಿ
ಮೊದಲನೆಯದಾಗಿ 10-15 ಮಾವಿನ ಎಲೆಗಳನ್ನು ತೆಗೆದುಕೊಳ್ಳಬೇಕು, ನಂತರ ಅದನ್ನು ನೀರಿನಲ್ಲಿ ಸರಿಯಾಗಿ ಕುದಿಸಬೇಕು. ರಾತ್ರಿಯಿಡೀ ಎಲೆಗಳನ್ನು ಹಾಗೆಯೇ ಬಿಡಿ. ಬೆಳಗ್ಗೆ ಈ ನೀರನ್ನು ಸೋಸಿಕೊಂಡು ಸೇವಿಸಿ. ಖಾಲಿ ಹೊಟ್ಟೆಯಲ್ಲಿ ನೀವು ಸೇವಿಸುತ್ತಿರುವಿರಿ ಎಂಬುದನ್ನು ನೆನಪಿನಲ್ಲಿಡಿ. ಇದನ್ನು ನಿಯಮಿತವಾಗಿ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ.
ಇದನ್ನೂ ಓದಿ-Health Tips: ವೀಳ್ಯದೆಲೆ ತಿನ್ನೋದ್ರಿಂದ ಆರೋಗ್ಯಕ್ಕೆಷ್ಟು ಪ್ರಯೋಜನ..?
ಮಾವಿನ ಎಲೆಗಳಿಂದಲೂ ಈ ಲಾಭಗಳು ಸಿಗಲಿವೆ
ಮಾವಿನ ಎಲೆಗಳಲ್ಲಿ ಪೆಕ್ಟಿನ್, ವಿಟಮಿನ್ ಸಿ ಮತ್ತು ಫೈಬರ್ ಹೇರಳ ಪ್ರಮಾಣದಲ್ಲಿ ಕಂಡುಬರುತ್ತವೆ. ಇದು ಮಧುಮೇಹ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಅಂದರೆ ಅಧಿಕ ಕೊಲೆಸ್ಟ್ರಾಲ್ ಸಮಸ್ಯೆ ಇರುವವರು ಕೂಡ ಇದನ್ನು ಸೇವಿಸಬಹುದು. ಇದೇ ವೇಳೆ, ತೂಕ ಇಳಿಸಿಕೊಳ್ಳಲು ಬಯಸುವ ಜನರು ಕೂಡ ಇದನ್ನು ಪ್ರಯತ್ನಿಸಬಹುದು. ಈ ಕಾರಣದಿಂದಾಗಿ, ನಿಮ್ಮ ತೂಕವು ವೇಗವಾಗಿ ಕಡಿಮೆಯಾಗಲು ಪ್ರಾರಂಭಿಸುತ್ತದೆ. ದೃಷ್ಟಿ ಕಡಿಮೆ ಇರುವವರು ಕೂಡ ಮಾವಿನ ಎಲೆಗಳನ್ನು ಸೇವಿಸಬಹುದು. ಇದರ ಸೇವನೆಯು ದೃಷ್ಟಿದೋಷವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.
ಇದನ್ನೂ ಓದಿ-Omicron Update: ಹೈದ್ರಾಬಾದ್ ನಲ್ಲಿ ದೇಶದ ಮೊದಲ ಒಮಿಕ್ರಾನ್ ಸಬ್ ವೇರಿಯಂಟ್ ಬಿಎ.4 ಪ್ರಕರಣ ಪತ್ತೆ ದೃಢ
(Disclaimer: ಈ ಲೇಖನದಲ್ಲಿ ನೀಡಲಾಗಿರುವ ಮಾಹಿತಿ ಸಾಮಾನ್ಯ ಜ್ಞಾನ ಹಾಗೂ ಮನೆಮದ್ದು ಮಾಹಿತಿಯನ್ನು ಆಧರಿಸಿದೆ. ಅನುಸರಿಸುವ ಮುನ್ನ ನುರಿತ ವೈದ್ಯರ ಸಲಹೆಯನ್ನು ಪಡೆದುಕೊಳ್ಳಿ. ಜೀ ಕನ್ನಡ ನ್ಯೂಸ್ ಈ ಮಾಹಿತಿಯನ್ನು ಪುಷ್ಠಿಕರಿಸುವುದಿಲ್ಲ)
ಇದನ್ನೂ ನೋಡಿ-
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.