'ಮನೆಗೆ ಹೋಗಿ ಅಡುಗೆ ಮಾಡಿ' ಸಂಸದೆ ಸುಪ್ರಿಯಾ ಸುಳೆಗೆ ಬಿಜೆಪಿ ನಾಯಕನ ವ್ಯಂಗ್ಯ

ಈಗ ಮಹಾರಾಷ್ಟ್ರದ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುಪ್ರಿಯಾ ಸುಳೆ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡುವ ಮೂಲಕ ಈಗ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

Written by - Zee Kannada News Desk | Last Updated : May 26, 2022, 04:52 PM IST
  • ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಸಂಪರ್ಕಿಸಿದ್ದೇನೆ, ಆದರೆ ಹೆಚ್ಚಿನ ವಿವರಗಳು ಇದುವರೆಗೂ ಸಿಕ್ಕಿಲ್ಲ ಎಂದು ಸುಳೆ ಹೇಳಿದರು.
  • "ಮಧ್ಯಪ್ರದೇಶದ ಮುಖ್ಯಮಂತ್ರಿ ದೆಹಲಿಗೆ ಬಂದು ಭೇಟಿಯಾದರು, ಆದರೆ ಮುಂದಿನ ಎರಡು ದಿನಗಳಲ್ಲಿ ಇದ್ದಕ್ಕಿದ್ದಂತೆ ಏನಾಯಿತು ಎಂದು ನನಗೆ ತಿಳಿದಿಲ್ಲ ಮತ್ತು ನಂತರ ಅವರು ಒಬಿಸಿ ಮೀಸಲಾತಿಗೆ ಚಾಲನೆ ನೀಡಿದರು", ಎಂದು ಅವರು ಹೇಳಿದರು.
 'ಮನೆಗೆ ಹೋಗಿ ಅಡುಗೆ ಮಾಡಿ'  ಸಂಸದೆ ಸುಪ್ರಿಯಾ ಸುಳೆಗೆ ಬಿಜೆಪಿ ನಾಯಕನ ವ್ಯಂಗ್ಯ title=

ನವದೆಹಲಿ: ಈಗ ಮಹಾರಾಷ್ಟ್ರದ ಬಿಜೆಪಿ ಮುಖ್ಯಸ್ಥ ಚಂದ್ರಕಾಂತ್ ಪಾಟೀಲ್ ಅವರು ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುಪ್ರಿಯಾ ಸುಳೆ ಅವರನ್ನು ಗುರಿಯಾಗಿಸಿಕೊಂಡು ಹೇಳಿಕೆ ನೀಡುವ ಮೂಲಕ ಈಗ ಮಹಿಳೆಯರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ಮಹಾರಾಷ್ಟ್ರದಲ್ಲಿ ನಡೆದ ಪ್ರತಿಭಟನೆಯಲ್ಲಿ ಒಬಿಸಿ ಮೀಸಲಾತಿ ಕುರಿತು ಚರ್ಚೆ ನಡೆಸುತ್ತಿದ್ದಾಗ ಪಾಟೀಲ್ ಅವರು, ನಿಮಗೆ ರಾಜಕೀಯ ಅರ್ಥವಾಗದಿದ್ದರೆ ಮನೆಗೆ ಹೋಗಿ ಅಡುಗೆ ಮಾಡಿ ಎಂದು ಸುಪ್ರೀಯಾ ಸುಳೆ ವಿರುದ್ಧ ಕಿಡಿ ಕಾರಿದ್ದಾರೆ.

ಈ ಹೇಳಿಕೆ ನೀಡಿರುವ ಬೆನ್ನಲ್ಲೇ ಈಗ ಸಾಮಾಜಿಕ ಮಾಧ್ಯಮದಲ್ಲಿ ಚಂದ್ರಕಾಂತ್ ಪಾಟೀಲ್ ವಿರುದ್ಧ ತೀವ್ರ ಅಕ್ರೋಶ ವ್ಯಕ್ತವಾಗಿದೆ.ಮೀಸಲಾತಿ ವಿಚಾರವಾಗಿ ಪ್ರತಿಕ್ರಿಯಿಸುತ್ತಾ ಸುಪ್ರೀಯಾ ಸುಳೆ ಅವರು ಒಬಿಸಿ ಮೀಸಲಾತಿಗಾಗಿ ಮಹಾರಾಷ್ಟ್ರದ ಹೋರಾಟವನ್ನು ಮಧ್ಯಪ್ರದೇಶದೊಂದಿಗೆ ಹೋಲಿಸಿದರು, ಅಷ್ಟೇ ಅಲ್ಲದೆ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿಗೆ ಗ್ರೀನ್ ಸಿಗ್ನಲ್ ನೀಡುವ ಸುಪ್ರೀಂಕೋರ್ಟ್ ತೀರ್ಪನ್ನು ಅವರು ನಂತರ ಪ್ರಶ್ನಿಸಿದ್ದರು.

ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಸಂಪರ್ಕಿಸಿದ್ದೇನೆ, ಆದರೆ ಹೆಚ್ಚಿನ ವಿವರಗಳು ಇದುವರೆಗೂ ಸಿಕ್ಕಿಲ್ಲ ಎಂದು ಸುಳೆ ಹೇಳಿದರು."ಮಧ್ಯಪ್ರದೇಶದ ಮುಖ್ಯಮಂತ್ರಿ ದೆಹಲಿಗೆ ಬಂದು ಭೇಟಿಯಾದರು, ಆದರೆ ಮುಂದಿನ ಎರಡು ದಿನಗಳಲ್ಲಿ ಇದ್ದಕ್ಕಿದ್ದಂತೆ ಏನಾಯಿತು ಎಂದು ನನಗೆ ತಿಳಿದಿಲ್ಲ ಮತ್ತು ನಂತರ ಅವರು ಒಬಿಸಿ ಮೀಸಲಾತಿಗೆ ಚಾಲನೆ ನೀಡಿದರು", ಎಂದು ಅವರು ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್, “ನೀವೇಕೆ ರಾಜಕೀಯದಲ್ಲಿದ್ದೀರಿ? ಸುಮ್ಮನೆ ಮನೆಗೆ ಹೋಗಿ ಅಡುಗೆ ಮಾಡಿ. ದೆಹಲಿಗೆ ಅಥವಾ ಸ್ಮಶಾನಕ್ಕೆ ಹೋಗಿ, ಆದರೆ ನಮಗೆ ಒಬಿಸಿ ಮೀಸಲಾತಿಯನ್ನು ತನ್ನಿ, ನೀವು ಸಂಸದರಾಗಿಯೂ ಮುಖ್ಯಮಂತ್ರಿ ಭೇಟಿ ಮಾಡಲು ಅಪಾಯಿಂಟ್‌ಮೆಂಟ್ ಪಡೆಯುವುದು ಹೇಗೆ ಎಂದು ನಿಮಗೆ ತಿಳಿದಿಲ್ಲದಿದ್ದರೆ ಹೇಗೆ? ಎಂದು ಅವರು ವ್ಯಂಗ್ಯವಾಡಿದರು.

ಇದಾದ ಬೆನ್ನಲ್ಲೇ ಎನ್ಸಿಪಿ ಪಾಟೀಲ್ ಅವರ ವಿರುದ್ಧ ಕಿಡಿ ಕಾರಿದೆ.ಅವರು ಚಪಾತಿಗಳನ್ನು ಮಾಡುವುದರ ಮೂಲಕ ತಮ್ಮ ಹೆಂಡತಿಗೆ ಮನೆಯಲ್ಲಿ ಸಹಾಯ ಮಾಡಬಹುದು' ಎಂದು ಹೇಳಿದೆ.ಇನ್ನೊಂದೆಡೆಗೆ ಸುಪ್ರೀಯಾ ಸಹೋದರ ಅಜಿತ್ ಪವಾರ್ ಪ್ರತಿಕ್ರಿಯಿಸುತ್ತಾ ಅವರು ಹಾಗೆ ಮಾತನಾಡಲು ಅರ್ಹರಲ್ಲ. ನನ್ನ ತಂಗಿಯ ಬಗ್ಗೆ ಆ ರೀತಿ ಮಾತನಾಡುವ ಹಕ್ಕು ಆತನಿಗಿಲ್ಲ' ಎಂದರು.

 ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News