ನವದೆಹಲಿ: ಅಲ್-ಖೈದಾ ಭಯೋತ್ಪಾದಕ ಒಸಾಮಾ ಬಿನ್ ಲಾಡೆನ್ ನನ್ನು ವಿಶ್ವದ ಅತ್ಯುತ್ತಮ ಜೂನಿಯರ್ ಇಂಜಿನಿಯರ್ ಎಂದು ಬಣ್ಣಿಸುವ ಚಿತ್ರವನ್ನು ತನ್ನ ಕಚೇರಿಯಲ್ಲಿ ಹಾಕಿದ್ದಕ್ಕಾಗಿ ಸರ್ಕಾರಿ ವಿದ್ಯುತ್ ವಿತರಣಾ ಕಂಪನಿಯ ಅಧಿಕಾರಿಯನ್ನು ಬುಧವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣಾಂಚಲ್ ವಿದ್ಯುತ್ ವಿತ್ರನ್ ನಿಗಮ್ ಲಿಮಿಟೆಡ್ (DVVNL) ನ ಉಪವಿಭಾಗಾಧಿಕಾರಿ (SDO)ರವೀಂದ್ರ ಪ್ರಕಾಶ್ ಗೌತಮ್ ಅವರು ತಮ್ಮ ಕಚೇರಿಯಲ್ಲಿ ಬಿನ್ ಲಾಡೆನ್ ಚಿತ್ರವನ್ನು ಇರಿಸಿ, ಅದರ ಕೆಳಗೆ "ಗೌರವಾನ್ವಿತ ಒಸಾಮಾ ಬಿನ್ ಲಾಡೆನ್, ವಿಶ್ವದ ಅತ್ಯುತ್ತಮ ಜೂನಿಯರ್ ಇಂಜಿನಿಯರ್" ಎಂದು ಬರೆದುಕೊಂಡಿದ್ದರು.ಈ ಚಿತ್ರವು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ, ಹಿರಿಯ ಜಿಲ್ಲಾ ಅಧಿಕಾರಿಗಳು ಗಮನ ಸೆಳೆದು ಎಸ್ಡಿಒ ಅವರನ್ನು ಅಮಾನತುಗೊಳಿಸುವಂತೆ ಆದೇಶಿಸಿದರು.
ಡಿವಿವಿಎನ್ಎಲ್ನ ವ್ಯವಸ್ಥಾಪಕ ನಿರ್ದೇಶಕರು ಘಟನೆಯ ತನಿಖೆಯ ನಂತರ ಎಸ್ಡಿಒ ರವೀಂದ್ರ ಪ್ರಕಾಶ್ ಗೌತಮ್ ಅವರನ್ನು ಅಮಾನತುಗೊಳಿಸಿದ್ದಾರೆ ಎಂದು ಫರೂಕಾಬಾದ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಸಂಜಯ್ ಕುಮಾರ್ ಸಿಂಗ್ ಹೇಳಿದ್ದಾರೆ.
ಇನ್ನೊಂದೆಡೆಗೆ ಅಮಾನತುಗೊಂಡಿರುವ ಅಧಿಕಾರಿ ತನ್ನ ಕೃತ್ಯವನ್ನು ಸಮರ್ಥಿಸಿಕೊಂಡಿದ್ಡು.'ಯಾರಾದರೂ ಮಾದರಿಯಾಗಬಹುದು, ಒಸಾಮಾ ಅವರು ವಿಶ್ವದ ಅತ್ಯುತ್ತಮ ಜೂನಿಯರ್ ಇಂಜಿನಿಯರ್ ಆಗಿದ್ದರು.ಈ ಚಿತ್ರವನ್ನು ತೆಗೆದುಹಾಕಿರಬಹುದು, ಆದರೆ ನನ್ನ ಬಳಿ ಹಲವಾರು ಪ್ರತಿಗಳಿವೆ ಎಂದು ಅವರು ಹೇಳಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ