"ಈ ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆ": ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 2 ದಿನಗಳಲ್ಲಿ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿ, ಈಶಾನ್ಯ ಬಂಗಾಳ ಕೊಲ್ಲಿ, ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ರಾಜ್ಯಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ ಎಂದು ಐಎಂಡಿ ಬಿಡುಗಡೆಗೊಳಿಸಿದ ವರದಿಯಲ್ಲಿ ತಿಳಿಸಿದೆ.

Written by - Bhavishya Shetty | Last Updated : Jun 2, 2022, 02:57 PM IST
  • ಕೆಲವೇ ದಿನಗಳಲ್ಲಿ ಭಾರೀ ಮಳೆ ಮುನ್ಸೂಚನೆ
  • ಹವಾಮಾನ ಇಲಾಖೆಯಿಂದ ಮಾಹಿತಿ
  • ಉತ್ತರ ಭಾರತದಲ್ಲಿ ಜೂನ್‌ ಅಂತ್ಯದ ವೇಳೆಗೆ ಮಳೆಯಾಗುವ ಸಾಧ್ಯತೆ
"ಈ ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆ": ಹವಾಮಾನ ಇಲಾಖೆ ಮುನ್ಸೂಚನೆ  title=
Heavy Rain

ನವದೆಹಲಿ: ಇನ್ನು ಕೆಲ ದಿನಗಳಲ್ಲಿ ನೈರುತ್ಯ ಮುಂಗಾರು ಅಪ್ಪಳಿಸಲಿದ್ದು, ಕೆಲ ರಾಜ್ಯಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನೈಋತ್ಯ ಮಾನ್ಸೂನ್ ಕೇರಳ, ತಮಿಳುನಾಡು ಮತ್ತು ಕರ್ನಾಟಕದ ಭಾಗಗಳಲ್ಲಿ ಅಬ್ಬರಿಸಲಿದೆ. ಆದರೆ ಉತ್ತರ ಭಾರತದಲ್ಲಿ ಮೊದಲ ಮಾನ್ಸೂನ್ ಮಳೆ ಸುರಿಯುವುದು ಜೂನ್ ಅಂತ್ಯದ ವೇಳೆಗೆ ಎಂದು ಹೇಳಲಾಗುತ್ತಿದೆ. 

ಇದನ್ನು ಓದಿ: 16 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ಬ್ಯಾನ್ ಮಾಡಿದ WhatsApp!

"ಮಧ್ಯ ಅರೇಬಿಯನ್ ಸಮುದ್ರದ ಕೆಲವು ಭಾಗಗಳು, ಕರ್ನಾಟಕದ ಕೆಲವು ಭಾಗಗಳು, ಕೊಂಕಣ ಮತ್ತು ಗೋವಾದ ಕೆಲವು ಭಾಗಗಳು, ತಮಿಳುನಾಡಿನ ಕೆಲವು ಭಾಗಗಳು, ನೈಋತ್ಯ ಬಂಗಾಳ ಕೊಲ್ಲಿಯ ಉಳಿದ ಭಾಗಗಳು, ಇನ್ನೂ ಕೆಲವು ಭಾಗಗಳಲ್ಲಿ ನೈಋತ್ಯ ಮಾನ್ಸೂನ್ ಮತ್ತಷ್ಟು ಅಬ್ಬರಿಸಲಿದೆ ಎಂದು ಮುನ್ಸೂಚನೆ ನೀಡಿದೆ. ಮುಂದಿನ 2 ದಿನಗಳಲ್ಲಿ ಪಶ್ಚಿಮ ಮಧ್ಯ ಬಂಗಾಳ ಕೊಲ್ಲಿ, ಈಶಾನ್ಯ ಬಂಗಾಳ ಕೊಲ್ಲಿ, ಈಶಾನ್ಯ ರಾಜ್ಯಗಳು, ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ರಾಜ್ಯಗಳಲ್ಲೂ ಗುಡುಗು ಸಹಿತ ಮಳೆಯಾಗಲಿದೆ" ಎಂದು ಐಎಂಡಿ ಬಿಡುಗಡೆಗೊಳಿಸಿದ ವರದಿಯಲ್ಲಿ ತಿಳಿಸಿದೆ.

ಇದನ್ನು ಓದಿಸಿಲಿಕಾನ್ ಸಿಟಿಯಲ್ಲಿ ಖತರ್ನಾಕ್ ಮೊಬೈಲ್-ಬೈಕ್ ಕಳ್ಳ ಅರೆಸ್ಟ್!

ಭಾರತದ ಮಳೆಯಾಶ್ರಿತ ಕೃಷಿ ಪ್ರದೇಶವು ಈ ಮಾನ್ಸೂನ್ ಋತುವಿನಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆಯನ್ನು ಸ್ವೀಕರಿಸಲಿದೆ ಎಂದು ಹವಾಮಾನ ಕಚೇರಿ ತಿಳಿಸಿದೆ. ದೇಶದ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮತ್ತು ಉತ್ತಮಕ್ಕಿಂತ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಸುದ್ದಿಗಾರರಿಗೆ ತಿಳಿಸಿದ್ದಾರೆ. 

 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News