ಮಲ್ಟಿಫ್ಲೆಕ್ಸ್ ಗಳಲ್ಲಿ ಕನ್ನಡ ಚಲನಚಿತ್ರ ಪ್ರಸಾರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ ಸರ್ಕಾರ

                       

Last Updated : Nov 3, 2017, 12:52 PM IST
ಮಲ್ಟಿಫ್ಲೆಕ್ಸ್ ಗಳಲ್ಲಿ ಕನ್ನಡ ಚಲನಚಿತ್ರ ಪ್ರಸಾರ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದ ಸರ್ಕಾರ title=

ಮಲ್ಟಿಫ್ಲೆಕ್ಸ್ ಗಳಲ್ಲಿ ಕನ್ನಡ ಚಲನಚಿತ್ರ ಪ್ರಸಾರ ಕಡ್ಡಾಯಗೊಳಿಸಿ ಆದೇಶ ಹೊರಡಿಸುವ ಮೂಲಕ ಮೊನ್ನೆಯಷ್ಟೇ ಕನ್ನಡ ರಾಜ್ಯೋತ್ಸವ ಆಚರಿಸಿರುವ ಕನ್ನಡ ಜನತೆಗೆ ಕರ್ನಾಟಕ ಸರ್ಕಾರ ಉಡುಗೊರೆಯೊಂದನ್ನು ನೀಡಿದೆ. 

ಕನ್ನಡ ಚಿತ್ರಗಳ ಅಭಿಮಾನಿಗಳಿಗೆ ಅನುಕೂಲ ಮಾಡಿಕೊಡುವ ಹಾಗೂ ಕನ್ನಡ ಚಿತ್ರಗಳಿಗೆ ಹೆಚ್ಚು ಚಿತ್ರಮಂದಿರಗಳು ದೊರಕುವಂತೆ ಮಾಡಲು ಇಂತಹ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

 

ಈ ಹಿಂದೆ ಮಲ್ಟಿಫ್ಲೆಕ್ಸ್ ಗಳಲ್ಲಿ ಟಿಕೇಟ್ ದರವನ್ನು ರೂ. 200 ಕ್ಕೆ ನಿಗದಿಮಾಡಿ ಸರ್ಕಾರ ಆದೇಶ ಹೊರಡಿಸಿತ್ತು.

Trending News