PM Kisan : ಕೇಂದ್ರ ಸರ್ಕಾರದ ಈ ಘೋಷಣೆಯಿಂದ ಎಲ್ಲಾ ರೈತರಿಗೂ ಆಗಲಿದೆ ಲಾಭ

ಪಿಎಂ ಕಿಸಾನ್ ಯೋಜನೆಯ ಪ್ರಯೋಜನ ಹೆಚ್ಚಿನ ಸಂಖ್ಯೆಯ ರೈತರಿಗೆ ಸಿಗುವಂತಾಗಲು ಕೇಂದ್ರ ಸರ್ಕಾರವು ಈಗ ಕಡ್ಡಾಯ eKYC ಗಡುವನ್ನು ವಿಸ್ತರಿಸಿದೆ. ಈ ಮಾಹಿತಿಯನ್ನು ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ನೀಡಲಾಗಿದೆ. 

Written by - Ranjitha R K | Last Updated : Jun 4, 2022, 02:35 PM IST
  • ಪಿಎಂ ಕಿಸಾನ್ ಯೋಜನೆಯ ಪ್ರಯೋಜನ ಹೆಚ್ಚಿನ ಸಂಖ್ಯೆಯ ರೈತರಿಗೆ ಸಿಗುವಂತಾಗಲು ಕೇಂದ್ರ ಸರ್ಕಾರವು ಈಗ ಕಡ್ಡಾಯ eKYC ಗಡುವನ್ನು ವಿಸ್ತರಿಸಿದೆ. ಈ ಮಾಹಿತಿಯನ್ನು ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ನೀಡಲಾಗಿದೆ.
PM Kisan : ಕೇಂದ್ರ ಸರ್ಕಾರದ ಈ ಘೋಷಣೆಯಿಂದ ಎಲ್ಲಾ ರೈತರಿಗೂ ಆಗಲಿದೆ ಲಾಭ  title=
PM Kisan Scheme ( file photo)

ಬೆಂಗಳೂರು : ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಈಗ 11 ನೇ ಕಂತು ರೈತರಿಗೆ ನೀಡಲಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಲ್ಲಿ 2021 ರಲ್ಲಿ, ಕೇಂದ್ರ ಸರ್ಕಾರವು ದೊಡ್ಡ ಬದಲಾವಣೆಯನ್ನು ಮಾಡಿದೆ. ಈ ಬದಲಾವಣೆಯ ಪ್ರಕಾರ, ರೈತರು ಇ-ಕೆವೈಸಿ ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಇದರ ಅರ್ಥ ಈಗ ರೈತರು ಹೊಸ ನಿಯಮದೊಂದಿಗೆ ಮುಂದಿನ ಕಂತಿಗೆ ಅರ್ಜಿ ಸಲ್ಲಿಸಬೇಕು. 

ಕೇಂದ್ರ ಸರ್ಕಾರದ ಘೋಷಣೆ : 
ಪಿಎಂ ಕಿಸಾನ್ ಯೋಜನೆಯ ಪ್ರಯೋಜನ ಹೆಚ್ಚಿನ ಸಂಖ್ಯೆಯ ರೈತರಿಗೆ ಸಿಗುವಂತಾಗಲು ಕೇಂದ್ರ ಸರ್ಕಾರವು ಈಗ ಕಡ್ಡಾಯ eKYC ಗಡುವನ್ನು ವಿಸ್ತರಿಸಿದೆ. ಈ ಮಾಹಿತಿಯನ್ನು ಪಿಎಂ ಕಿಸಾನ್ ಪೋರ್ಟಲ್ ನಲ್ಲಿ ನೀಡಲಾಗಿದೆ. ಪಿಎಂ ಕಿಸಾನ್ ವೆಬ್‌ಸೈಟ್‌ನಲ್ಲಿನ ಫ್ಲಾಶ್ ಪ್ರಕಾರ, 'ಎಲ್ಲಾ PMKISAN ಫಲಾನುಭವಿಗಳಿಗೆ eKYC ಪೂರ್ಣಗೊಳಿಸುವ ಗಡುವನ್ನು ಜುಲೈ 31 2022 ರವರೆಗೆ ವಿಸ್ತರಿಸಲಾಗಿದೆ. 

ಇದನ್ನೂ ಓದಿ : Indian Railways Rule: ಈಗ ನೀವು ಟಿಕೆಟ್ ಇಲ್ಲದೆ ರೈಲಿನಲ್ಲಿ ಪ್ರಯಾಣಿಸಬಹುದು, ಹೇಗೆ ಗೊತ್ತಾ!

ಇ-ಕೆವೈಸಿ ಇಲ್ಲದೆ ಯೋಜನೆಯ ಹಣ ಲಭ್ಯವಾಗುವುದಿಲ್ಲ :
ಇ-ಕೆವೈಸಿ ಮಾಡಿಸದೆ ಹೋದರೆ ಮುಂದಿನ ಕಂತು ನಿಮ್ಮ ಖಾತೆಗೆ ಬರುವುದು ಸಾಧ್ಯವಾಗುವುದಿಲ್ಲ. ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 11ನೇ ಕಂತು ಕೂಡ ಬಿಡುಗಡೆಯಾಗಿದೆ. ಆಧಾರ್ ಆಧಾರಿತ OTP ದೃಢೀಕರಣಕ್ಕಾಗಿ, ರೈತರು ಕಿಸಾನ್ ಕಾರ್ನರ್‌ನಲ್ಲಿ ಇ-ಕೆವೈಸಿ ಆಯ್ಕೆಯನ್ನು ಕ್ಲಿಕ್ ಮಾಡಬೇಕಾಗುತ್ತದೆ ಎಂದು ಪಿಎಂ ಕಿಸಾನ್ ಪೋರ್ಟಲ್‌ನಲ್ಲಿ ತಿಳಿಸಲಾಗಿದೆ. ಬಯೋಮೆಟ್ರಿಕ್ ದೃಢೀಕರಣಕ್ಕಾಗಿ ಹತ್ತಿರದ ಸಿಎಸ್‌ಸಿ ಕೇಂದ್ರಕ್ಕೆ ಭೇಟಿ ನೀಡಬೇಕು. ನಿಮ್ಮ ಮೊಬೈಲ್, ಕಂಪ್ಯೂಟರ್ ಅಥವಾ ಲ್ಯಾಪ್‌ಟಾಪ್‌ನಿಂದಲೂ ನೀವು ಮನೆಯಲ್ಲಿ ಕುಳಿತು ಈ ಕೆಲಸವನ್ನು ಮಾಡಬಹುದು.
ಅದರ ಪ್ರಕ್ರಿಯೆಗಳು ಹೀಗಿವೆ : 

1. ಇದಕ್ಕಾಗಿ, ನೀವು ಮೊದಲು https://pmkisan.gov.in/ ಪೋರ್ಟಲ್‌ಗೆ ಹೋಗಿ.
2. ಬಲಭಾಗದಲ್ಲಿರುವ ಟ್ಯಾಬ್ ಗಳಲ್ಲಿ ಇ-ಕೆವೈಸಿ ಬರೆದಿರುವುದನ್ನು ಕಾಣಬಹುದು. ಅದರ ಮೇಲೆ ಕ್ಲಿಕ್ ಮಾಡಿ.

ಇದನ್ನೂ ಓದಿ : Arecanut Today: ಹೆಚ್ಚಿದ ಬೇಡಿಕೆ, ಅಡಿಕೆ ಧಾರಣೆಯಲ್ಲಿ ಮತ್ತೆ ಏರಿಕೆ

ಇದರ ಹೊರತಾಗಿ, ನಿಮ್ಮ ಕಂತಿನ ಸ್ಥಿತಿಯನ್ನು ನೀವು ಸುಲಭವಾಗಿ ಪರಿಶೀಲಿಸಬಹುದು. 
ನಿಮ್ಮ ಕಂತಿನ ಸ್ಟೇಟಸ್ ಹೀಗೆ ಪರಿಶೀಲಿಸಿ :
1. ನಿಮ್ಮ ಕಂತಿನ ಸ್ಥಿತಿಯನ್ನು ನೋಡಲು, ನೀವು ಮೊದಲು PM ಕಿಸಾನ್ ವೆಬ್‌ಸೈಟ್‌ಗೆ ಹೋಗಿ.
2. ಈಗ ಬಲಭಾಗದಲ್ಲಿರುವ Farmers Corner ಮೇಲೆ ಕ್ಲಿಕ್ ಮಾಡಿ.
3. ಇದರ ನಂತರ Beneficiary Status ಆಯ್ಕೆಯ ಮೇಲೆ ಕ್ಲಿಕ್ ಮಾಡಿ.
4. ಈಗ ಹೊಸ ಪುಟ ತೆರೆದುಕೊಳ್ಳುತ್ತದೆ.
5. ಇಲ್ಲಿ ನೀವು ನಿಮ್ಮ ಆಧಾರ್ ಸಂಖ್ಯೆ, ಮೊಬೈಲ್ ಸಂಖ್ಯೆಯನ್ನು ನಮೂದಿಸಿ.
6. ಇದರ ನಂತರ ನೀವು ನಿಮ್ಮಸ್ಟೇಟಸ್ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆಯುತ್ತೀರಿ.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News