ಬೆಂಗಳೂರು: ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸಚಿವರು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಪಠ್ಯಪುಸ್ತಕ ಪರಿಷ್ಕರಣೆ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ #WhoAreHindus ಹ್ಯಾಶ್ ಟ್ಯಾಗ್ ಬಳಸಿ ಭಾನುವಾರ ಸರಣಿ ಟ್ವೀಟ್ ಮಾಡಿರುವ ಅವರು ಬಿಜೆಪಿ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ‘ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ. ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ’ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ ಬಿ.ಸಿ.ನಾಗೇಶ್ ಅವರೇ? ಎಂದು ಪ್ರಶ್ನಿಸಿದ್ದಾರೆ.
ಹಿಂದೂ ಭಾವನೆಗೆ ಧಕ್ಕೆಯಾಗಿದ್ದಕ್ಕೆ ಪಠ್ಯಪರಿಷ್ಕರಣೆ ಮಾಡಲಾಗಿದೆ ಎಂದು ಶಿಕ್ಷಣ ಸಚಿವ @BCNagesh_bjp ಅಸಲಿ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಈ ಹಿಂದೂಗಳು ಯಾರು? ಎನ್ನುವುದನ್ನು ಸನ್ಮಾನ್ಯ ಸಚಿವರು ಬಹಿರಂಗ ಪಡಿಸಿ, ಯಾವುದರಿಂದ ಯಾರ ಭಾವನೆಗೆ ಧಕ್ಕೆಯಾಗಿದೆ ಎನ್ನುವುದನ್ನು ಸ್ಪಷ್ಟಪಡಿಸಬೇಕು. 1/6#WhoAreHindus
— Siddaramaiah (@siddaramaiah) June 5, 2022
'ಪರಿಷ್ಕೃತ ಪಠ್ಯದಲ್ಲಿ ಬಸವಣ್ಣ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣಗುರು, ಕುವೆಂಪು ಸೇರಿದಂತೆ ಹಲವು ಮಹನೀಯರ ವ್ಯಕ್ತಿತ್ವವನ್ನು ಕಡೆಗಣಿಸಲಾಗಿದೆ, ಇವರನ್ನು ಪರಿಷ್ಕೃತ ಸಮಿತಿಯ ಕಿಡಿಗೇಡಿ ಅಧ್ಯಕ್ಷ ತುಚ್ಛೀಕರಿಸಿದ್ದಾನೆ’ ಎಂದು ಪ್ರತಿಭಟಿಸುತ್ತಿರುವವರು ಅನ್ಯಧರ್ಮೀಯರಲ್ಲ, ಹಿಂದೂಗಳೇ ಅಲ್ವಾ @BCNagesh_bjp? 2/6#WhoAreHindus
— Siddaramaiah (@siddaramaiah) June 5, 2022
ಇದನ್ನೂ ಓದಿ: Textbook Revision Row: ‘ಸಂವಿಧಾನ ಶಿಲ್ಪಿ’ ಬಿರುದು ತೆಗೆದು ಡಾ.ಬಿ.ಆರ್.ಅಂಬೇಡ್ಕರ್ಗೆ ಅವಮಾನ
‘ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲಾ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ ಬಿ.ಸಿ.ನಾಗೇಶ್? ಬಸವಣ್ಣ ಮತ್ತು ಬಿ.ಆರ್.ಅಂಬೇಡ್ಕರ್ ಅವರನ್ನು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ? ಹಾಗೆಂದು ಹೇಳಿಬಿಡಿ ಬಿ.ಸಿ.ನಾಗೇಶ್?’ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಪಠ್ಯ ಪರಿಷ್ಕರಣಾ ಸಮಿತಿಯಲ್ಲಿ ದಲಿತ ಮತ್ತು ಹಿಂದುಳಿದ ಜಾತಿಗಳ ವಿದ್ವಾಂಸರಿಗೆ ಪ್ರಾತಿನಿಧ್ಯವೇ ನೀಡಿಲ್ಲವಲ್ಲಾ? ಶಿಕ್ಷಣ ಸಚಿವರು ಕಾಳಜಿ ತೋರುತ್ತಿರುವ ಹಿಂದೂಗಳ ವ್ಯಾಖ್ಯಾನದಲ್ಲಿ ಈ ಸಮುದಾಯಗಳು ಸೇರಿಕೊಳ್ಳುವುದಿಲ್ಲವೇ? ಈ ಕಾರಣಕ್ಕಾಗಿ ಅವರಿಗೆ ಪ್ರಾತಿನಿಧ್ಯ ನೀಡಿಲ್ಲವೇ @BCNagesh_bjp? 3/6#WhoAreHindus
— Siddaramaiah (@siddaramaiah) June 5, 2022
ಬಸವಣ್ಣ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಿಂದೂ ಧರ್ಮವನ್ನು ತ್ಯಜಿಸಿದ ಕಾರಣಕ್ಕೆ ಅವರನ್ನು ನಿರ್ಲಕ್ಷಿಸಲಾಯಿತೇ? ಅವಮಾನ ಮಾಡಲಾಯಿತೇ? ನಾರಾಯಣ ಗುರು, ಪೆರಿಯಾರ್, ಕುವೆಂಪು ಅವರು ಹಿಂದೂ ಧರ್ಮದ ದೋಷಗಳನ್ನು ಎತ್ತಿತೋರಿಸಿದ್ದಕ್ಕಾಗಿ ನಿರ್ಲಕ್ಷ್ಯ ಮಾಡಲಾಯಿತೇ?
ಹಾಗೆಂದು ಹೇಳಿಬಿಡಿ @BCNagesh_bjp? 4/6#WhoAreHindus— Siddaramaiah (@siddaramaiah) June 5, 2022
‘ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ ಬಿ.ಸಿ.ನಾಗೇಶ್?’ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: PSI Recruitment Scam: ಗೃಹಸಚಿವ ಆರಗ ಜ್ಞಾನೇಂದ್ರಗೆ 8 ಎಂಎಲ್ಎಗಳಿಂದ ಪತ್ರ
ಈ ದೇಶದ ಬಡವರಲ್ಲಿ ಬಹುಸಂಖ್ಯೆಯಲ್ಲಿರುವುದು ಹಿಂದೂ ಧರ್ಮದ ದಲಿತರು ಮತ್ತು ಹಿಂದುಳಿದ ಜಾತಿಗಳು. ಸರ್ಕಾರಿ ಶಾಲೆಗಳಲ್ಲಿ ಈ ಮಕ್ಕಳ ಸಂಖ್ಯೆಯೇ ಹೆಚ್ಚು. ಬುದ್ಧ, ಬಸವ, ಅಂಬೇಡ್ಕರ್, ಸಾವಿತ್ರಿಬಾಯಿ ಪುಲೆ, ನಾರಾಯಣ ಗುರು, ಕುವೆಂಪು ಅವರಿಗೆ ಆಗಿರುವ ಅವಮಾನದಿಂದ ಈ ಮಕ್ಕಳ ಭಾವನೆಗೂ ಧಕ್ಕೆಯಾಗಿದೆಯಲ್ವಾ @BCNagesh_bjp? 5/6#WhoAreHindus
— Siddaramaiah (@siddaramaiah) June 5, 2022
ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರುವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ @BCNagesh_bjp. 6/6#WhoAreHindus
— Siddaramaiah (@siddaramaiah) June 5, 2022
‘ವಿಕೃತ ಮನಸ್ಸಿನ ಕಿಡಿಗೇಡಿ ಅಧ್ಯಕ್ಷ ತಯಾರಿಸಿರುವ ಪರಿಷ್ಕೃತ ಪಠ್ಯದಿಂದ ಬಹುಸಂಖ್ಯಾತ ಹಿಂದೂಗಳ ಮನಸ್ಸಿಗೆ ಮಾತ್ರವಲ್ಲ, ರಾಜ್ಯದ ಆರುವರೆ ಕೋಟಿ ಕನ್ನಡಿಗರ ಮನಸ್ಸಿಗೆ ಘಾಸಿಯಾಗಿದೆ. ಕನ್ನಡಿಗರ ಸಹನೆಯನ್ನು ಪರೀಕ್ಷಿಸಲು ಹೋಗಬೇಡಿ, ಮೊದಲು ಈ ಪರಿಷ್ಕೃತ ಪಠ್ಯವನ್ನು ಕಸದ ಬುಟ್ಟಿಗೆ ಎಸೆಯಿರಿ’ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ಗೆ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.