Chikkamagaluru: ಆನೆದಂತ ಮಾರಾಟಕ್ಕೆ ಯತ್ನ, ಐವರ ಬಂಧನ

ಬಂಧಿತರನ್ನು ಜೂನ್ 18ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಿ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‍ಸಿ ಕೋರ್ಟ್ ಆದೇಶ ನೀಡಿದೆ.

Written by - Zee Kannada News Desk | Last Updated : Jun 8, 2022, 01:41 PM IST
  • ಆನೆ ದಂತಗಳನ್ನು ಮಾರಾಟಕ್ಕೆ ಯತ್ನಿಸಿದ್ದ ಐವರ ಬಂಧನ
  • ಚಿಕ್ಕಮಗಳೂರು ಅರಣ್ಯ ಸಂಚಾರಿ ದಳದ ಪೊಲೀಸರಿಂದ ದಾಳಿ
  • ಜೂನ್ 18ರವರೆಗೆ ನ್ಯಾಯಾಂಗ ಬಂಧನಕ್ಕೆ ಆರೋಪಿಗಳು
Chikkamagaluru: ಆನೆದಂತ ಮಾರಾಟಕ್ಕೆ ಯತ್ನ, ಐವರ ಬಂಧನ title=
ಆನೆದಂತ ಮಾರಾಟಕ್ಕೆ ಯತ್ನಿಸಿದ್ದ ಐವರ ಬಂಧನ

ಚಿಕ್ಕಮಗಳೂರು: ಆನೆದಂತ ಮಾರಾಟಕ್ಕೆ ಯತ್ನಿಸಿದ್ದ ಐವರನ್ನು ಚಿಕ್ಕಮಗಳೂರಿನ ಅಲ್ಲಂಪುರದ ಬಳಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಕತ್ಲೆಕಾನ್ ತೋಟದ ಮೇಸ್ತ್ರಿ ಆರ್.ಶಿವಕುಮಾರ್, ಮಸ್ಕಲ್ ಮರಡಿಯ ಕೆಲಸಗಾರ ಸುಂದರೇಶ್, ತರಿಕೆರೆ ತಾಲೂಕಿನ ನಂದಿಬಟ್ಟಲಿನ ಪಿ.ಮಹಾಂತೇಶ್, ಭದ್ರಾವತಿ ತಾಲೂಕಿನ ಹೊಳೆಹೊನ್ನೂರಿನ ವೆಲ್ಡರ್ ನೂರ್ ಅಹ್ಮದ್, ಚಿತ್ರದುರ್ಗ ತಾಲೂಕಿನ ಪಳಿಕೆಹಳ್ಳಿಯ ಅಂಜನಪ್ಪ ಬಂಧಿತ ಆರೋಪಿಗಳಾಗಿದ್ದಾರೆ.

ಇದನ್ನೂ ಓದಿ: ಬಿಎಂಟಿಸಿ ಚಾಲಕರ ಮೇಲೆ ಕರಿನೆರಳು .! ಖಾಸಗೀಕರಣದತ್ತ ಹೆಜ್ಜೆ ಹಾಕುತ್ತಿದೆಯಾ ಬಿಎಂಟಿಸಿ..?

ಆರೋಪಿಗಳು ಅಲ್ಲಂಪುರ ಪೆಟ್ರೋಲ್ ಬಂಕ್ ಬಳಿ 2 ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸಿದ್ದರು. ಈ ವೇಳೆ ದಾಳಿ ನಡೆಸಿದ ಚಿಕ್ಕಮಗಳೂರು ಅರಣ್ಯ ಸಂಚಾರಿ ದಳದ ಪೊಲೀಸರು ಆನೆದಂತ, ಓಮ್ನಿ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ವಶಪಡಿಸಿಕೊಳ್ಳಲಾಗಿರುವ ಆನೆ ದಂತಗಳನ್ನು ಭದ್ರಾ ವನ್ಯಜೀವಿ ವಲಯದಲ್ಲಿ ತಂದಿರುವ ಬಗ್ಗೆ ಮಾಹಿತಿ ಲಭಿಸಿದೆ. ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಜೂನ್ 18ರವರೆಗೆ ನ್ಯಾಯಾಂಗ ಬಂಧನಕ್ಕೊಳಪಡಿಸಿ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್‍ಸಿ ಕೋರ್ಟ್ ಆದೇಶ ನೀಡಿದೆ.

ಇದನ್ನೂ ಓದಿ: ರಾಜ್ಯಸಭೆ ಚುನಾವಣೆ ಗೆಲ್ಲಲು ಕಮಲ ಪಡೆ ರಣತಂತ್ರ! ಇಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News