ಬೆಂಗಳೂರು: ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ ಬಿಜೆಪಿ ಸರ್ಕಾರ ತಕ್ಷಣ ರದ್ದುಪಡಿಸಬೇಕೆಂದುವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. #JaiJawan_JaiKisan ಹ್ಯಾಶ್ ಟ್ಯಾಗ್ ಬಳಸಿ ಶುಕ್ರವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು. ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ?’ ಎಂದು ಪ್ರಶ್ನಿಸಿದ್ದಾರೆ.
ವರ್ಷಕ್ಕೆ ಎರಡು ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ @narendramodi ಅವರೇ, ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ ಎರಡು ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? 2/6#JaiJawan_JaiKisan
— Siddaramaiah (@siddaramaiah) June 17, 2022
‘ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಪ್ರಧಾನಿ ಮೋದಿಯವರೇ ಉದ್ಯೋಗಾವಕಾಶದ ಬಾಗಿಲುಗಳನ್ನು ಒಂದೊಂದಾಗಿ ಮುಚ್ಚುತ್ತಾ ಇರುವ ನಿಮಗೆ ಪ್ರತಿವರ್ಷ 2 ಕೋಟಿ ನಿರುದ್ಯೋಗಿಗಳನ್ನು ಸೃಷ್ಟಿಸುವ ಗುಪ್ತಾ ಅಜೆಂಡಾ ಏನಾದರೂ ಇದೆಯೇ? ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ?’ ಎಂದು ಟ್ವೀಟ್ ಮಾಡಿದ್ದಾರೆ.
ದೇಶದ ಯುವಜನರನ್ನು ನಿರುದ್ಯೋಗದ ಕೂಪಕ್ಕೆ ತಳ್ಳುವ ಮತ್ತು ದೇಶದ ಭದ್ರತೆಗೆ ಅಪಾಯಕಾರಿಯಾಗಬಲ್ಲ ಅಗ್ನಿಪಥ್ ಎಂಬ ಯೋಜನೆಯನ್ನು ಕೇಂದ್ರದ @BJP4India ಸರ್ಕಾರ ತಕ್ಷಣ ರದ್ದುಪಡಿಸಿ ಈಗಿನ ಸೇನಾ ನೇಮಕಾತಿ ಯೋಜನೆಯಡಿಯಲ್ಲಿಯೇ ಸೈನಿಕರ ನೇಮಕಾತಿ ನಡೆಯಬೇಕು.
ರೈತರನ್ನು ಬಲಿಗೊಟ್ಟಾಯಿತು, ಈಗ ಸೈನಿಕರ ಸರದಿಯೇ? 1/6#JaiJawan_JaiKisan— Siddaramaiah (@siddaramaiah) June 17, 2022
ಇದನ್ನೂ ಓದಿ: 'ನ್ಯಾಷನಲ್ ಹೆರಾಲ್ಡ್' ಬಿಜೆಪಿಯ ದ್ವೇಷ ರಾಜಕಾರಣದ ಫಲವೇ ಹೊರತು ಅದರಲ್ಲಿ ಸತ್ಯವಿಲ್ಲ-ಕಾಂಗ್ರೆಸ್
‘ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ ಬಿಜೆಪಿ ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ ಪ್ರಧಾನಿ ನರೇಂದ್ರ ಮೋದಿಯವರೇ’ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಉದ್ಯೋಗದ ಅಭದ್ರತೆ, ಭವಿಷ್ಯದ ಬಗೆಗಿನ ಭಯ ಮತ್ತು ವೃತ್ತಿ ಬಗೆಗಿನ ಅತೃಪ್ತಿಯನ್ನು ಹುಟ್ಟುಹಾಕಲಿರುವ ಅಗ್ನಿಪಥ್ ಯೋಜನೆಯಡಿ ನೇಮಕಗೊಂಡ ಸೈನಿಕರು ತಮ್ಮ ವೃತ್ತಿಯಲ್ಲಿ ಪೂರ್ಣಪ್ರಮಾಣದಲ್ಲಿ ತೊಡಗಲು ಸಾಧ್ಯವೇ? ಶತ್ರುಗಳ ಜೊತೆ ಕಾದಾಡಲಿರುವ ಸೈನಿಕರ ಈ ಮನಸ್ಥಿತಿ ಅಪಾಯಕಾರಿಯಲ್ಲವೇ? 3/6#JaiJawan_JaiKisan
— Siddaramaiah (@siddaramaiah) June 17, 2022
‘ಹೊಸಸೇನಾ ನೇಮಕಾತಿ ಅಗ್ನಿಪಥ್ ಕೇವಲ ಸೇನಾ ನೇಮಕಾತಿಗಷ್ಟೇ ಸೀಮಿತವಾಗಲಾರದು. ಸೈನಿಕರ ಅನ್ನ ಕಸಿಯಲು ಹೊರಟಿರುವ ಈ ದೇಶದ್ರೋಹಿ, ಜನವಿರೋಧಿ ಬಿಜೆಪಿ ಸರ್ಕಾರ ಮುಂದಿನ ದಿನಗಳಲ್ಲಿ ಇತರ ಸರ್ಕಾರಿ ಉದ್ಯೋಗಗಳ ಮೇಲೆಯೂ ಸವಾರಿ ಮಾಡಲು ಹೊರಡುವುದು ಖಚಿತ. ಎಚ್ಚೆತ್ತುಕೊಳ್ಳಲು ಇದು ಸಕಾಲ!’ವೆಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: ಎಸಿಬಿ ಅಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ರಾಜ್ಯದ 80 ಕಡೆ ಏಕಕಾಲಕ್ಕೆ ದಾಳಿ
ದೇಶಕ್ಕಾಗಿ ಪ್ರಾಣತ್ಯಾಗ ಮಾಡಲು ಸಿದ್ಧರಾಗುವ ಸೈನಿಕರಿಗೆ ಉದ್ಯೋಗದ ಭದ್ರತೆ, ನ್ಯಾಯಬದ್ಧ ಸಂಬಳ, ಪಿಂಚಣಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲಾಗದಷ್ಟು ಕೇಂದ್ರದ @BJP4India ಸರ್ಕಾರ ದಿವಾಳಿಯಾಗಿದೆಯೇ? ನಿಮ್ಮ ದಿವಾಳಿತನ ಮುಚ್ಚಿಡಲು ದೇಶದ ಭದ್ರತೆಯ ಜೊತೆ ಚೆಲ್ಲಾಟವಾಡಲು ಹೋಗಬೇಡಿ @narendramodi. 4/6#JaiJawan_JaiKisan
— Siddaramaiah (@siddaramaiah) June 17, 2022
‘ರೈತರ ಬದುಕು ನಾಶ ಮಾಡಲು ಕರಾಳ ಕೃಷಿ ಕಾಯ್ದೆಗಳನ್ನು ತಂದಿದ್ದ ಕೇಂದ್ರದ ಬಿಜೆಪಿ ಸರ್ಕಾರಕ್ಕೆ ದೇಶದ ಜನ ಪಾಠ ಕಲಿಸಿದ್ದಾರೆ. ಈಗ ಯುವಜನರ ಬದುಕು ನಾಶದ ಜೊತೆಯಲ್ಲಿ ಸೈನಿಕರ ಬದುಕಿನ ಜೊತೆ ಚೆಲ್ಲಾಟವಾಡುತ್ತಿರುವವರಿಗೂ ಪಾಠ ಕಲಿಸಲು ದೇಶದ ಜನತೆ ಮುಂದಾಗಬೇಕು’ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.