Presidential Election : ಕಾಂಗ್ರೆಸ್ ಹಿರಿಯ ನಾಯಕ ಫಾರೂಕ್ ಅಬ್ದುಲ್ಲಾ ಅವರು ಸಮ್ಮಿಶ್ರ ವಿರೋಧ ಪಕ್ಷದ ಪರವಾಗಿ ರಾಷ್ಟ್ರಪತಿ ಅಭ್ಯರ್ಥಿಯಾಗಿ ಪರಿಗಣಿಸಿರುವ ನನ್ನ ಹೆಸರನ್ನು ಗೌರವಯುತವಾಗಿ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ್ದಾರೆ.
ಫಾರೂಕ್ ಅಬ್ದುಲ್ಲಾ ಹೇಳಿದ್ದೇನು?
ಈ ಕುರಿತು ಮಾತನಾಡಿದ ಲೋಕಸಭೆ ಸಂಸದ, ಕಾಂಗ್ರೆಸ್ ಹಿರಿಯ ನಾಯಕ ಅಬ್ದುಲ್ಲಾ, ತಮ್ಮ ಹೆಸರನ್ನು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಜಂಟಿ ವಿರೋಧ ಪಕ್ಷದ ಸಂಭಾವ್ಯ ಅಭ್ಯರ್ಥಿಯಾಗಿ ಪ್ರಸ್ತಾಪಿಸಿರುವುದು ನನಗೆ ಗೌರವ ತಂದಿದೆ. ಆದರೆ, ಸಾಕಷ್ಟು ಚರ್ಚೆಯ ನಂತರ ನನ್ನ ಹೆಸರನ್ನು ಹಿಂತೆಗೆದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : Agnipath Scheme : 'ಅಗ್ನಿವೀರರಿಗೆ ಸರ್ಕಾರಿ ಈ ಉದ್ಯೋಗಗಳಲ್ಲಿ ಶೇ.10 ರಷ್ಟು ಮೀಸಲಾತಿ'
ಚುನಾವಣೆಗೆ ಏಕೆ ಸ್ಪರ್ಧಿಸಬಾರದು?
ನನ್ನ ಮುಂದೆ ಸಾಕಷ್ಟು ಸಕ್ರಿಯ ರಾಜಕಾರಣದ ಕೆಲಸಗಳಿವೆ. ಜಮ್ಮು ಮತ್ತು ಕಾಶ್ಮೀರ ಮತ್ತು ದೇಶದ ಸೇವೆಗೆ ಒಳ್ಳೆಯ ಕೊಡುಗೆ ನೀಡಲು ನಾನು ಎದುರು ನೋಡುತ್ತಿದ್ದೇನೆ. ಆದ್ದರಿಂದ, ನಾನು ಗೌರವಯುತವಾಗಿ ನನ್ನ ಹೆಸರನ್ನು ಪರಿಗಣನೆಯಿಂದ ಹಿಂತೆಗೆದುಕೊಳ್ಳುತ್ತೇನೆ ಮತ್ತು ಸಮ್ಮಿಶ್ರ ವಿರೋಧ ಪಕ್ಷದ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸಲು ಎದುರು ನೋಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.
I withdraw my name from consideration as a possible joint opposition candidate for the President of India. I believe that Jammu & Kashmir is passing through a critical juncture & my efforts are required to help navigate these uncertain times: NC chief Farooq Abdullah
(File pic) pic.twitter.com/yPyJNqmi1P
— ANI (@ANI) June 18, 2022
ಶರದ್ ಪವಾರ್ ಕೂಡ ನಿರಾಕರಿಸಿದ್ದಾರೆ?
ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಕೂಡ ರಾಷ್ಟ್ರಪತಿ ಹುದ್ದೆಗೆ ಸ್ಪರ್ಧಿಸುವ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ (ಟಿಎಂಸಿ), ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಮತ್ತು ಶಿವಸೇನೆ ಸೇರಿದಂತೆ 17 ವಿರೋಧ ಪಕ್ಷಗಳ ಪ್ರತಿನಿಧಿಗಳು ನವದೆಹಲಿಯಲ್ಲಿ ನಡೆದ ಸಭೆಯಲ್ಲಿ ಶರದ್ ಪವಾರ್ ಅವರ ಹೆಸರನ್ನು ಪ್ರಸ್ತಾಪಿಸಿದರು. ಸಭೆಯ ನಂತರ, ರಾಷ್ಟ್ರಪತಿ ಚುನಾವಣೆಗೆ ನನ್ನ ಹೆಸರನ್ನು ಅಭ್ಯರ್ಥಿಯಾಗಿ ಸೂಚಿಸಿದ್ದಕ್ಕಾಗಿ ವಿರೋಧ ಪಕ್ಷಗಳ ನಾಯಕರನ್ನು ನಾನು ಪ್ರಾಮಾಣಿಕವಾಗಿ ಪ್ರಶಂಸಿಸುತ್ತೇನೆ ಎಂದು ಪವಾರ್ ಟ್ವೀಟ್ ಮಾಡಿದ್ದಾರೆ. ನಾನು ಈ ಪ್ರಸ್ತಾಪವನ್ನು ವಿನಮ್ರವಾಗಿ ನಿರಾಕರಿಸಿದ್ದೇನೆ ಎಂದು ಹೇಳಿದ್ದಾರೆ.
ಇದನ್ನೂ ಓದಿ : Home Ministry : ಅಗ್ನಿಪಥ್ ವಿರೋಧದ ನಡುವೆ ಗೃಹ ಸಚಿವಾಲಯದಿಂದ ಮಹತ್ವದ ಘೋಷಣೆ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.