ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಸಿಎಂ ಬೊಮ್ಮಾಯಿ, ರಾಜ್ಯಪಾಲ ಗೆಹ್ಲೋಟ್ ರಿಂದ ಸ್ವಾಗತ

ಇಂದಿನಿಂದ 2 ದಿನಗಳ ಕಾಲ ರಾಜ್ಯ ಪ್ರವಾಸ ಕೈಗೊಂಡಿರುವ ಪ್ರಧಾನಿ ಮೋದಿ ಬೆಂಗಳೂರಿನ ಯಲಹಂಕ ವಾಯುನೆಲೆಗೆ ಬಂದಿಳಿದಿದ್ದಾರೆ.

Written by - Zee Kannada News Desk | Last Updated : Jun 20, 2022, 01:07 PM IST
  • ಇಂದಿನಿಂದ 2 ದಿನಗಳ ಕಾಲ ಪ್ರಧಾನಿ ಮೋದಿ ರಾಜ್ಯಪ್ರವಾಸ
  • ಸಿಲಿಕಾನ್ ಸಿಟಿ ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ
  • ಪ್ರಧಾನಿ ಮೋದಿಗೆ ಸಿಎಂ ಬೊಮ್ಮಾಯಿ, ರಾಜ್ಯಪಾಲ ಗೆಹ್ಲೋಟ್‍ರಿಂದ ಸ್ವಾಗತ
ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ: ಸಿಎಂ ಬೊಮ್ಮಾಯಿ, ರಾಜ್ಯಪಾಲ ಗೆಹ್ಲೋಟ್ ರಿಂದ ಸ್ವಾಗತ title=
ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಬೆಂಗಳೂರು: ಎರಡು ದಿನಗಳ ರಾಜ್ಯ ಪ್ರವಾಸಕ್ಕೆ ಇಂದು ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು.

IAFನ ವಿಶೇಷ ವಿಮಾನದಲ್ಲಿ ಯಲಹಂಕ ವಾಯುನೆಲೆಗೆ ಪ್ರಧಾನಿ ಮೋದಿ ಬಂದಿಳಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರು ಹೂಗುಚ್ಛ ನೀಡಿ ಸ್ವಾಗತಿಸಿದರು.  

ಇದನ್ನೂ ಓದಿ: PHOTOS: ಬೆಂಗಳೂರಿಗೆ ಬಂದಿಳಿದ ಪ್ರಧಾನಿ ನರೇಂದ್ರ ಮೋದಿ

ಸೋಮವಾರ ಬೆಂಗಳೂರಿನಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿರುವ ಪ್ರಧಾನಿ ಮೋದಿ ನಂತರ ಸಂಜೆ ಮೈಸೂರಿಗೆ ಪ್ರಯಾಣಿಸಲಿದ್ದು, ಪ್ರಸಿದ್ಧ ಚಾಮುಂಡಿ ಬೆಟ್ಟ, ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ಮೈಸೂರಿನಲ್ಲೇ ವಾಸ್ತವ್ಯ ಹೂಡಲಿರುವ ಅವರು ‘ಅಂತಾರಾಷ್ಟ್ರೀಯ ಯೋಗ ದಿನ’ದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News