ʼಮಹಾʼ ಬಿಕ್ಕಟ್ಟು: ಮುಂಬೈಗೆ ತೆರಳಿದ ಶಿವಸೇನಾ ನಾಯಕ ಏಕನಾಥ್ ಶಿಂಧೆ! ಉಪಸಭಾಪತಿ ಭೇಟಿ ಸಾಧ್ಯತೆ

ಇನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಲು ಶಿಂಧೆ ಮತ್ತು ಇತರ ಶಾಸಕರು ಬಿಜೆಪಿ ಸೇರುವ ಸಾಧ್ಯತೆಯೂ ಇದೆ. ಈ ಹಿನ್ನೆಲೆಯಲ್ಲಿ ಇಂದು ಮುಂಬೈಗೆ ಶಿವಸೇನೆ ನಾಯಕ ಏಕನಾಥ್‌ ಶಿಂಧೆ ತೆರಳಿದ್ದಾರೆ ಎನ್ನಲಾಗಿದೆ. 

Written by - Bhavishya Shetty | Last Updated : Jun 24, 2022, 01:33 PM IST
  • ಮುಂಬೈಗೆ ತೆರಳಿದ ಶಿವಸೇನೆ ನಾಯಕ ಏಕನಾಥ್ ಶಿಂಧೆ
  • ಉಪಸಭಾಪತಿಯನ್ನು ಭೇಟಿ ಮಾಡುವ ಸಾಧ್ಯತೆ
  • ಮಹಾರಾಷ್ಟ್ರದಲ್ಲಿ ನಡೆಯುತ್ತಿದೆ ರಾಜಕೀಯ ಗದ್ದಲ
ʼಮಹಾʼ ಬಿಕ್ಕಟ್ಟು: ಮುಂಬೈಗೆ ತೆರಳಿದ ಶಿವಸೇನಾ ನಾಯಕ ಏಕನಾಥ್ ಶಿಂಧೆ! ಉಪಸಭಾಪತಿ ಭೇಟಿ ಸಾಧ್ಯತೆ title=
Maharashtra Political Crisis

ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಗದ್ದಲದ ನಡುವೆ ದೊಡ್ಡ ಸುದ್ದಿಯೊಂದು ಹೊರಬಿದ್ದಿದೆ. ಮೂಲಗಳ ಪ್ರಕಾರ, ಶಿವಸೇನೆ ನಾಯಕ ಏಕನಾಥ್ ಶಿಂಧೆ ಗುವಾಹಟಿಯಿಂದ ಮುಂಬೈಗೆ ತೆರಳಿದ್ದಾರೆ. ಮುಂಬೈನಲ್ಲಿ ಉಪಸಭಾಪತಿಯನ್ನು ಭೇಟಿ ಮಾಡುವ ಸಾಧ್ಯತೆಯಿದೆ.  

ಶುಕ್ರವಾರದಂದು ಶಿವಸೇನೆ ವಿರುದ್ಧ ಸಿಡಿದೆದ್ದ ಏಕನಾಥ್ ಶಿಂಧೆ ಮತ್ತು ಅವರ ಬೆಂಬಲಿಗಶಾಸಕರು ಸೂರತ್‌ನಿಂದ ಅಸ್ಸಾಂನ ಗುವಾಹಟಿಗೆ ಶಿಫ್ಟ್ ಆಗಿದ್ದಾರೆ. ಏಕನಾಥ್ ಶಿಂಧೆ ಜೊತೆ 40 ಮಂದಿ ಶಾಸಕರಿದ್ದು,  ಈ ಪೈಕಿ 34 ಮಂದಿ ಶಿವಸೇನೆ ಮತ್ತು 6 ಮಂದಿ ಪಕ್ಷೇತರರು ಎನ್ನಲಾಗಿದೆ. ಎಲ್ಲಾ 40 ಶಾಸಕರು ವಿಶೇಷ ವಿಮಾನದ ಮೂಲಕ ಗುವಾಹಟಿಗೆ ಬಂದಿಳಿದಿದ್ದಾರೆ.  

ಇದನ್ನೂ ಓದಿ: Oukitel WP19- ಫುಲ್ ಚಾರ್ಜ್‌ನಲ್ಲಿ 7 ದಿನಗಳವರೆಗೆ ಕಾರ್ಯನಿರ್ವಹಿಸುತ್ತಂತೆ ಈ ಸ್ಮಾರ್ಟ್‌ಫೋನ್

ಗುವಾಹಟಿಗೆ ತೆರಳುವ ಮುನ್ನ ಏಕನಾಥ್ ಶಿಂಧೆ ಸೂರತ್ ವಿಮಾನ ನಿಲ್ದಾಣದಲ್ಲಿ ಹೇಳಿಕೆಯೊಂದನ್ನು ನೀಡಿದ್ದು ಭಾರೀ ಸಂಚಲನ ಮೂಡಿಸಿದೆ. "ನಾವು ಬಾಳಾಸಾಹೇಬ್ ಠಾಕ್ರೆಯವರ ಶಿವಸೇನೆಯನ್ನು ಬಿಟ್ಟಿಲ್ಲ, ಬಿಡುವುದೂ ಇಲ್ಲ. ಬಾಳಾಸಾಹೇಬ್ ಠಾಕ್ರೆ ಅವರ ಹಿಂದುತ್ವವನ್ನು ಅನುಸರಿಸಿಕೊಂಡು ಮುಂದುವರೆಯುತ್ತೇವೆ" ಎಂದಿದದ್ದಾರೆ. 

ಇನ್ನು ಮಹಾ ವಿಕಾಸ್ ಅಘಾಡಿ (ಎಂವಿಎ) ಸರ್ಕಾರವನ್ನು ಉರುಳಿಸಲು ಶಿಂಧೆ ಮತ್ತು ಇತರ ಶಾಸಕರು ಬಿಜೆಪಿ ಸೇರುವ ಸಾಧ್ಯತೆಯೂ ಇದೆ. ಈ ಹಿನ್ನೆಲೆಯಲ್ಲಿ ಇಂದು ಮುಂಬೈಗೆ ಶಿವಸೇನೆ ನಾಯಕ ಏಕನಾಥ್‌ ಶಿಂಧೆ ತೆರಳಿದ್ದಾರೆ ಎನ್ನಲಾಗಿದೆ. 

ಇನ್ನೊಂದೆಡೆ ಮುಂಬೈನಲ್ಲಿರುವ ಶಿವಸೇನೆ ಶಾಸಕರನ್ನು ತಮ್ಮೊಂದಿಗೆ ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಏಕನಾಥ್ ಶಿಂಧೆ ಸತತ ಪ್ರಯತ್ನ ನಡೆಸುತ್ತಿದ್ದಾರೆ ಎನ್ನಲಾಗಿತ್ತು. ಇದೀಗ ಶಿಂಧೆ ಮುಂಬೈ ಪ್ರವಾಸ ಭಾರೀ ಕುತೂಹಲಕ್ಕೆ ಕಾರಣವಾಗಿದೆ. 

ಇದನ್ನೂ ಓದಿ: ಗುವಾಹಟಿ ತಲುಪಿದ ಶಿವಸೇನೆ ʼಸಿಪಾಯಿʼಯ ಕೈಯಲ್ಲಿದೆ ಪೋಸ್ಟರ್‌: ʼಮಹಾʼ ಬಿಕ್ಕಟ್ಟಿನ ಭವಿಷ್ಯವೇನು?

ಸಿಎಂ ಉದ್ಧವ್ ಠಾಕ್ರೆ ಬೆಂಬಲಿಗ ಶಾಸಕರನ್ನು ಕೂಡಾ ಮುಂಬೈನ ಹೋಟೆಲ್‌ನಲ್ಲಿ ಇರಿಸಲಾಗಿದೆ. ಮಾತ್ರವಲ್ಲ, ಏಕನಾಥ್ ಶಿಂಧೆ ಅವರ ಪ್ರತಿಯೊಂದು ಕ್ರಮದ ಮೇಲೆ ಸಿಎಂ ಠಾಕ್ರೆ ನಿಗಾವಹಿಸಿದ್ದಾರೆ ಎನ್ನಲಾಗಿದೆ. 

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News