ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಧಾರಾಕಾರ ಮಳೆ, ಜನಜೀವನ ಅಸ್ತವ್ಯಸ್ತ

  • Zee Media Bureau
  • Jun 30, 2022, 06:29 PM IST

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾತ್ರಿಯಿಂದ ಧಾರಾಕಾರ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ.. ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿರುವ ಕಾರಣ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ. ರಾಷ್ಟ್ರೀಯ ಹೆದ್ದಾರಿ ಮತ್ತು ಪ್ರಮುಖ ರಸ್ತೆಗಳಲ್ಲೇ ನೀರು ನಿಂತಿದ್ದು, ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿಯಾಗುತ್ತಿವೆ. ಭಾರೀ ಮಳೆಯ ಕಾರಣ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ.

Trending News