ಉದ್ದವ್ ಠಾಕ್ರೆ ನೇತೃತ್ವದ ಮೈತ್ರಿಕೂಟ ಸರ್ಕಾರ ಪತನಗೊಂಡಿರುವ ಬೆನ್ನಲ್ಲೇ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರು ಉಪಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಇದಕ್ಕೂ ಮುನ್ನ ಫಡ್ನವಿಸ್ ಅವರು ಸರ್ಕಾರದಲ್ಲಿ ಇರುವುದಿಲ್ಲ ಎಂದು ಘೋಷಿಸಿದ ಕೆಲವೇ ನಿಮಿಷಗಳಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರು, ಫಡ್ನವಿಸ್ ಅವರು ಶಿಂಧೆ ನೇತೃತ್ವದ ಹೊಸ ಮಹಾರಾಷ್ಟ್ರ ಸಂಪುಟದ ಭಾಗವಾಗಲಿದ್ದಾರೆ ಎಂದು ಹೇಳಿದರು.
ಮಹಾರಾಷ್ಟ್ರದ ಮಾಜಿ ಸಿಎಂ ಉದ್ಧವ್ ಠಾಕ್ರೆ ಅವರು ಎಂವಿಎ ಮೈತ್ರಿ ವಿರುದ್ಧದ ಸದನ ಪರೀಕ್ಷೆಗೆ ಮುಂಚಿತವಾಗಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಒಂದು ದಿನದ ನಂತರ ಈ ಬೆಳವಣಿಗೆಗಳು ನಡೆದಿವೆ.
ಈ ಹಿಂದೆ ಫಡ್ನವಿಸ್ ಮುಖ್ಯಮಂತ್ರಿಯಾಗಲಿದ್ದು, ಶಿಂಧೆ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಊಹಿಸಲಾಗಿತ್ತು.
ಶಿಂಧೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ ರಾಜ್ಯದ ನೂತನ ಉಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಂಜೆ 7:30ಕ್ಕೆ ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರ ಸಮ್ಮುಖದಲ್ಲಿ ಶಿಂಧೆ ಅವರು ರಾಜ್ಯದ ಉನ್ನತ ಹುದ್ದೆಗೆ ಪ್ರಮಾಣ ವಚನ ಸ್ವೀಕರಿಸಿದರು.