ನವದೆಹಲಿ: ಸಮಾಜವಾದಿ ಪಕ್ಷದ (ಎಸ್ಪಿ) ಮುಖ್ಯಸ್ಥ ಅಖಿಲೇಶ್ ಯಾದವ್ ಭಾನುವಾರದಂದು ಉತ್ತರಪ್ರದೇಶ ಘಟಕದ ಮುಖ್ಯಸ್ಥ ಹುದ್ದೆಯನ್ನು ಹೊರತುಪಡಿಸಿ ಪಕ್ಷದ ಎಲ್ಲಾ ಹುದ್ದೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ.
ರಾಮ್ಪುರ ಮತ್ತು ಅಜಂಗಢ ಲೋಕಸಭಾ ಉಪಚುನಾವಣೆಯಲ್ಲಿ ಪಕ್ಷದ ಸೋಲಿನ ಕೆಲವು ದಿನಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಆದರೂ ಪಕ್ಷ ಈ ಕ್ರಮಕ್ಕೆ ಯಾವುದೇ ಕಾರಣ ನೀಡಿಲ್ಲ.
ಇದನ್ನೂ ಓದಿ: Naga Chaitanya: ವಿಚ್ಛೇದನದ ಬಳಿಕ ಈ ನಟಿಯ ಜತೆ ನಾಗ ಚೈತನ್ಯ ಡೇಟಿಂಗ್!?
ಇದೆ ವೇಳೆ ಸಮಾಜವಾದಿ ಪಕ್ಷವು ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್, ಪಕ್ಷದ ಉತ್ತರ ಪ್ರದೇಶ ರಾಜ್ಯ ಅಧ್ಯಕ್ಷರನ್ನು ಹೊರತುಪಡಿಸಿ ಎಲ್ಲಾ ಪಕ್ಷದ ಹುದ್ದೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಿದ್ದಾರೆ ಎಂದು ಧೃಡಪಡಿಸಿದೆ.
ಇತ್ತೀಚೆಗಷ್ಟೇ ನಡೆದ ಉತ್ತರ ಪ್ರದೇಶದ ಉಪಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ರಾಂಪುರ ಮತ್ತು ಅಜಂಗಢ ಲೋಕಸಭಾ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಸ್ಪಿ ಈ ನಿರ್ಧಾರವನ್ನು ಕೈಗೊಂಡಿದೆ ಎನ್ನಲಾಗುತ್ತಿದೆ.
ಇದನ್ನೂ ಓದಿ: ಗೊಂಬೆಯಂತಿದ್ದ ನಟಿ ಪಾಲಿಗೆ ವಿಲನ್ ಆದ ವೈದ್ಯರು! ದಂತ ಚಿಕಿತ್ಸೆ ಪಡೆದ ಯುವನಟಿಗೆ ಇಂದೆಂಥ ಸ್ಥಿತಿ?
ರಾಂಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಘನಶ್ಯಾಮ್ ಸಿಂಗ್ ಲೋಧಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಮೊಹಮ್ಮದ್ ಅಸೀಂ ರಾಜಾ ಅವರನ್ನು ಸೋಲಿಸಿದರೆ, ಅಜಂಗಢ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ದಿನೇಶ್ ಲಾಲ್ ಯಾದವ್ ನಿರಾಹುವಾ ಗೆಲುವು ಸಾಧಿಸಿದ್ದಾರೆ.ಎರಡೂ ಸ್ಥಾನಗಳನ್ನು ಸಮಾಜವಾದಿ ಪಕ್ಷದ ಭದ್ರಕೋಟೆ ಎಂದು ಪರಿಗಣಿಸಲಾಗಿತ್ತು.
ಅಜಮ್ಗಢ್ ಮತ್ತು ರಾಂಪುರ ಸ್ಥಾನಗಳಿಗೆ ಕ್ರಮವಾಗಿ ಅಖಿಲೇಶ್ ಯಾದವ್ ಮತ್ತು ಅಜಮ್ ಖಾನ್ ರಾಜೀನಾಮೆಯಿಂದಾಗಿದೆ ತೆರವಾಗಿತ್ತು.ಈ ವರ್ಷದ ಆರಂಭದಲ್ಲಿ ನಡೆದ ಚುನಾವಣೆಯಲ್ಲಿ ಉತ್ತರ ಪ್ರದೇಶ ವಿಧಾನಸಭೆಗೆ ಆಯ್ಕೆಯಾದ ನಂತರ ಇಬ್ಬರೂ ನಾಯಕರು ಲೋಕಸಭೆಗೆ ರಾಜೀನಾಮೆ ನೀಡಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.