ಬರ್ಮಿಂಗ್ಹ್ಯಾಮ್: ಇಲ್ಲಿನ ಎಡ್ಜ್ಬಾಸ್ಟನ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು ಮೂರನೇ ದಿನದಾಂತ್ಯಕ್ಕೆ 257 ರನ್ ಗಳ ಮುನ್ನಡೆ ಸಾಧಿಸಿದೆ.ಮೊದಲ ಇನಿಂಗ್ಸ್ ನಲ್ಲಿ ಭಾರತ ತಂಡವು 416 ರನ್ ಗಳಿಗೆ ಆಲೌಟ್ ಆದ ನಂತರ ಇಂಗ್ಲೆಂಡ್ ತಂಡವು ಮೊದಲ ಇನಿಂಗ್ಸ್ ನಲ್ಲಿ 284 ರನ್ ಗಳಿಗೆ ಆಲೌಟ್ ಆಯಿತು.
ಒಂದು ಹಂತದಲ್ಲಿ ಇಂಗ್ಲೆಂಡ್ ತಂಡದ ಪರವಾಗಿ ಬೇರ್ ಸ್ಟೋ ಕೇವಲ 140 ಎಸೆತಗಳಲ್ಲಿ 106 ಗಳಿಸುವ ಮೂಲಕ ಅಪಾಯಕಾರಿಯಾಗುವ ಸೂಚನೆ ನೀಡಿದ್ದರು, ಆದರೆ ಈ ಸಂದರ್ಭದಲ್ಲಿ ಮೊಹಮ್ಮದ್ ಶಮಿ ಬೌಲಿಂಗ್ ನಲ್ಲಿ ಕೊಹ್ಲಿಗೆ ಕ್ಯಾಚ್ ನೀಡಿ ನಿರ್ಗಮಿಸಿದ ನಂತರ ಭಾರತ ತಂಡವು ಪಂದ್ಯದ ಮೇಲೆ ಹಿಡಿತವನ್ನು ಸಾಧಿಸಿತು.
That's Stumps on Day 3 of the Edgbaston Test! @cheteshwar1 (50*) & @RishabhPant17 (30*) remain unbeaten as #TeamIndia stretch their lead to 257 runs. 👌 👌 #ENGvIND
See you tomorrow for Day 4 action.
Scorecard ▶️ https://t.co/xOyMtKrYxM pic.twitter.com/PpQfil24Jj
— BCCI (@BCCI) July 3, 2022
ಭಾರತ ತಂಡದ ಪರವಾಗಿ ಮಾರಕ ಬೌಲಿಂಗ್ ದಾಳಿ ನಡೆಸಿದ ಸಿರಾಜ್ ಹಾಗೂ ಬುಮ್ರಾ ಕ್ರಮವಾಗಿ ನಾಲ್ಕು ಹಾಗೂ ಮೂರು ವಿಕೆಟ್ ಗಳನ್ನು ಕಬಳಿಸುವ ಮೂಲಕ ಇಂಗ್ಲೆಂಡ್ ತಂಡವನ್ನು 284 ರನ್ ಗಳಿಗೆ ಆಲೌಟ್ ಮಾಡಿದರು.
ಇದನ್ನೂ ಓದಿ : Rahul Narvekar : ಮಹಾರಾಷ್ಟ್ರ ವಿಧಾನಸಭೆಯ ನೂತನ ಸ್ಪೀಕರ್ ಆಗಿ ರಾಹುಲ್ ನಾರ್ವೇಕರ್ ಆಯ್ಕೆ!
ಮೊದಲ ಇನಿಂಗ್ಸ್ ನಲ್ಲಿ ಮುನ್ನಡೆ ಸಾಧಿಸಿದ ನಂತರ ಎರಡನೇ ಇನಿಂಗ್ಸ್ ಆರಂಭಿಸಿದ ಭಾರತ ತಂಡಕ್ಕೆ ಆರಂಭದಲ್ಲಿಯೇ ಆಘಾತ ಎದುರಾಯಿತು.ತಂಡದ ಮೊತ್ತ ನಾಲ್ಕು ರನ್ ಆಗುವಷ್ಟರಲ್ಲಿ ಶುಭ್ಮನ್ ಗಿಲ್ ಅವರ ವಿಕೆಟ್ ಕಳೆದುಕೊಂಡಿತು.ಈಗ ಮೂರನೇ ದಿನದಾಂತ್ಯಕ್ಕೆ ಚೇತೆಶ್ವರ್ ಪೂಜಾರ(50) ಹಾಗೂ ರಿಶಬ್ ಪಂತ್ (30) ಅಜೇಯ ರಾಗಿ ಕ್ರಿಸ್ ನಲ್ಲಿದ್ದಾರೆ.ಈಗ ಭಾರತ ತಂಡವು ಮೂರು ವಿಕೆಟ್ ಗಳ ನಷ್ಟಕ್ಕೆ 125 ರನ್ ಗಳಿಸುವ ಮೂಲಕ ಒಟ್ಟಾರೆಯಾಗಿ 257 ರನ್ ಗಳ ಮುನ್ನಡೆಯನ್ನು ಸಾಧಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ