ನವದೆಹಲಿ : ಖ್ಯಾತ ಕ್ರೀಡಾಪಟ್ಟು ಪಿಟಿ ಉಷಾ ಮತ್ತು ಅಪ್ರತಿಮ ಸಂಗೀತ ನಿರ್ದೇಶಕ ಇಳಯರಾಜ ಸೇರಿದಂತೆ ನಾಲ್ವರನ್ನು ರಾಜ್ಯಸಭೆಗೆ ನಾಮನಿರ್ದೇಶನ ಮಾಡಲಾಗಿದೆ. ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಮತ್ತು ಸಿನಿಮಾ ನಿರ್ದೇಶಕ ವಿ ವಿಜಯೇಂದ್ರ ಪ್ರಸಾದ್ ಅವರು ಸಂಸತ್ತಿನ ಮೇಲ್ಮನೆಗೆ ನಾಮನಿರ್ದೇಶನಗೊಂಡಿದ್ದಾರೆ.
ಟ್ವಿಟರ್ ಮೂಲಕ ಅಭಿನಂದನೆ ಸಲ್ಲಿಸಿದ ಪ್ರಧಾನಿ ಮೋದಿ!
ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, "ಖ್ಯಾತ ಕ್ರೀಡಾಪಟು ಪಿಟಿ ಉಷಾ ಪ್ರತಿಯೊಬ್ಬ ಭಾರತೀಯರಿಗೂ ಸ್ಫೂರ್ತಿ. ಕ್ರೀಡೆಯಲ್ಲಿ ಅವರ ಸಾಧನೆಗಳು ವ್ಯಾಪಕ. ಹಲವಾರು ವರ್ಷಗಳಿಂದ ಉದಯೋನ್ಮುಖ ಕ್ರೀಡಾಪಟುಗಳಿಗೆ ಮಾರ್ಗದರ್ಶನ ನೀಡುವ ಅವರ ಕೆಲಸವು ಅಷ್ಟೇ ಶ್ಲಾಘನೀಯವಾಗಿದೆ. ರಾಜ್ಯಸಭೆಗೆ ನಾಮನಿರ್ದೇಶನಗೊಂಡಿದ್ದಕ್ಕಾಗಿ ಅವರಿಗೆ ಅಭಿನಂದನೆಗಳು ಎಂದು ಬರೆದುಕೊಡಿದ್ದಾರೆ.
The remarkable PT Usha Ji is an inspiration for every Indian. Her accomplishments in sports are widely known but equally commendable is her work to mentor budding athletes over the last several years. Congratulations to her on being nominated to the Rajya Sabha. @PTUshaOfficial pic.twitter.com/uHkXu52Bgc
— Narendra Modi (@narendramodi) July 6, 2022
ಹಾಗೆ, ಮತ್ತೊಂದು ಟ್ವೀಟ್ ನಲ್ಲಿ ಪಿಎಂ ಮೋದಿ,'ಅತ್ಯುತ್ತಮ ಸಮಾಜ ಸೇವೆಯಲ್ಲಿ ಮುಂಚೂಣಿಯಲ್ಲಿರುವ ವೀರೇಂದ್ರ ಹೆಗ್ಗಡೆಯವರು, ಧರ್ಮಸ್ಥಳದ ದೇವಸ್ಥಾನದಲ್ಲಿ ಧರ್ಮಾಧಿಕಾರಿಯಾಗಿ ಸೇವೆ ಸಲ್ಲಿಸಲು ಮತ್ತು ಆರೋಗ್ಯ, ಶಿಕ್ಷಣ ಮತ್ತು ಸಂಸ್ಕೃತಿಯಲ್ಲಿ ಅವರು ಮಾಡುತ್ತಿರುವ ಮಹತ್ತರವಾದ ಕಾರ್ಯವನ್ನು ನೋಡಲು ನನಗೆ ಎರಡು ಕಣ್ಣು ಸಾಲದು. ಈಗ ಅವರು ಖಂಡಿತವಾಗಿಯೂ ಸಂಸತ್ತಿನ ಕಲಾಪಗಳನ್ನು ಮತ್ತಷ್ಟು ಉಕೃಷ್ಟಗೊಳಿಸಲಿದ್ದಾರೆ ' ಎಂದು ಬರೆದುಕೊಂಡಿದ್ದಾರೆ.
Shri Veerendra Heggade Ji is at the forefront of outstanding community service. I have had the opportunity to pray at the Dharmasthala Temple and also witness the great work he is doing in health, education and culture. He will certainly enrich Parliamentary proceedings. pic.twitter.com/tMTk0BD7Vf
— Narendra Modi (@narendramodi) July 6, 2022
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ