Viral News: ಮೋಜು-ಮಸ್ತಿಯ ತಾಣವಾದ ಶ್ರೀಲಂಕಾ ಅಧ್ಯಕ್ಷರ ನಿವಾಸ..!

ಶ್ರೀಲಂಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಭಾನುವಾರವೂ ಮುಂದುವರೆದಿದೆ. ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಮತ್ತು ಪ್ರಧಾನಿ ರನಿಲ್ ವಿಕ್ರಮಸಿಂಘೆ ನಿವಾಸಗಳನ್ನು ಪ್ರತಿಭಟನಾಕಾರರು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ.

Written by - Puttaraj K Alur | Last Updated : Jul 10, 2022, 04:35 PM IST
  • ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಜನಾಕ್ರೋಶ ಭುಗಿಲೆದ್ದಿದೆ
  • ರೆನಿಲ್‌ ವಿಕ್ರಮ ಸಿಂಘೆ & ಗೋಟಬಯ ರಾಜಪಕ್ಷೆ ನಿವಾಸಕ್ಕೆ ಮುತ್ತಿಗೆ ಹಾಕಿ ಪ್ರತಿಭಟನೆ
  • ಮೋಜು-ಮಸ್ತಿಯ ತಾಣವಾಗಿ ಬದಲಾದ ಶ್ರೀಲಂಕಾ ಅಧ‍್ಯಕ್ಷರ ನಿವಾಸ
Viral News: ಮೋಜು-ಮಸ್ತಿಯ ತಾಣವಾದ ಶ್ರೀಲಂಕಾ ಅಧ್ಯಕ್ಷರ ನಿವಾಸ..! title=
ಶ್ರೀಲಂಕಾದಲ್ಲಿ ತೀವ್ರ ಆರ್ಥಿಕ ಬಿಕ್ಕಟ್ಟು

ನವದೆಹಲಿ: ತೀವ್ರ ಆರ್ಥಿಕ ಬಿಕ್ಕಟ್ಟಿನಿಂದ ಕಂಗೆಟ್ಟಿರುವ ಶ್ರೀಲಂಕಾದಲ್ಲಿ ಇದೀಗ ಸಾರ್ವಜನಿಕರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ದೇಶದ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ಹಳಿತಪ್ಪಿದ್ದು, ಲಂಕಾದಲ್ಲಿ ಜನಾಕ್ರೋಶ ಭುಗಿಲೆದ್ದಿದೆ.

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿದ ರೆನಿಲ್‌ ವಿಕ್ರಮ ಸಿಂಘೆ ಸಿಂಹಳ ರಾಷ್ಟ್ರದಿಂದ ಎಸ್ಕೇಪ್ ಆಗಿದ್ದಾರೆ. ದ್ವೀಪ ರಾಷ್ಟ್ರದ ಜನರ ಆಕ್ರೋಶ ಸ್ಫೋಟಗೊಂಡಿದ್ದು, ಕೊಲೊಂಬೋದಲ್ಲಿರುವ ರೆನಿಲ್‌ ವಿಕ್ರಮ ಸಿಂಘೆ ನಿವಾಸಕ್ಕೆ ಉದ್ರಿಕ್ತರು ಬೆಂಕಿ ಹಚ್ಚಿದ್ದಾರೆ. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರವಾಯು ಪ್ರಯೋಗಿಸಿದರೂ ಪ್ರಯೋಜನವಾಗಿಲ್ಲ. ಈ ವೇಳೆ ಶ್ರೀಲಂಕಾದ ಖಾಕಿಪಡೆ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷನೆ ಸಹ ನಡೆದಿದೆ.

ಇದನ್ನೂ ಓದಿ: Sri Lanka Crisis : ಶ್ರೀಲಂಕಾದ ಅಧ್ಯಕ್ಷರ ನಿವಾಸಕ್ಕೆ ಮುತ್ತಿಗೆ.. ರಾಜಪಕ್ಸ ಪಲಾಯನ!

ಸಿಂಹಳ ರಾಷ್ಟ್ರದ ಜನರ ಆಕ್ರೋಶ ಏಕಾಏಕಿ ಸ್ಫೋಟಗೊಂಡ ಪರಿಣಾಮ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೊಲೊಂಬೋದಲ್ಲಿರುವ ಅಧ್ಯಕ್ಷ ಗೋಟಬಯ ರಾಜಪಕ್ಷೆ ನಿವಾಸಕ್ಕೂ ಸಾವಿರಾರು ಮಂದಿ ಪ್ರತಿಭಟನಾಕಾರರು ನುಗ್ಗಿ ದಾಂಧಲೆ ನಡೆಸಿರುವ ಬಗ್ಗೆ ವರದಿಯಾಗಿದೆ. ರಾಜಪಕ್ಷೆ ನಿವಾಸದಲ್ಲಿದ್ದ ಅಪಾರ ನಗದು ಸೇರಿ ಬೆಲೆ ಬಾಳುವ ವಸ್ತುಗಳನ್ನು ದೋಚಿ ಅನೇಕರು ಪರಾರಿಯಾಗಿದ್ದಾರಂತೆ. ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಗೊಟಬಯ ರಾಜಪಕ್ಷೆಯವರು ನೌಕಾಪಡೆಯ ಹಡಗು ಏರಿ ಪರಾರಿಯಾಗಿದ್ದಾರಂತೆ. ದ್ವೀಪರಾಷ್ಟ್ರದ ಜನರ ಪ್ರತಿಭಟನೆಗೆ ಹಾಲಿ-ಮಾಜಿ ಕ್ರಿಕೆಟಿಗರು ಮತ್ತು ಪ್ರಮುಖ ಗಣ್ಯವ್ಯಕ್ತಿಗಳು ಕೂಡ ಸಾಥ್ ನೀಡಿದ್ದಾರೆ.

ಮೋಜು-ಮಸ್ತಿಯ ತಾಣವಾದ ಅಧ್ಯಕ್ಷರ ನಿವಾಸ

ತೀವ್ರ ಆರ್ಥಿಕ ಬಿಕ್ಕಟ್ಟಿನ ನಡುವೆ ಶ್ರೀಲಂಕಾದ ನೂರಾರು ಜನರು ಅಧ್ಯಕ್ಷ ಗೊಟಬಯ ರಾಜಪಕ್ಷೆ ನಿವಾಸಕ್ಕೆ ಮುತ್ತಿಗೆ ಹಾಕಿದ್ದಾರೆ. ಶನಿವಾರ ರಾತ್ರಿಯಿಂದಲೇ ನಿವಾಸದ ಮೂಲೆ ಮೂಲೆ ಜಾಲಾಡಿರುವ ಜನರು ಅಪಾರ ಪ್ರಮಾಣದ ನಗದು ಸೇರಿ ಬೆಲೆ ಬಾಳುವ ವಸ್ತುಗಳನ್ನು ಲೂಟಿ ಮಾಡಿದ್ದಾರೆಂದು ವರದಿಯಾಗಿದೆ. ಭಾನುವಾರವೂ ಶ್ರೀಲಂಕಾ ಅಧ್ಯಕ್ಷರ ನಿವಾಸದಲ್ಲಿಯೇ ಉಳಿದುಕೊಂಡಿರುವ ಅನೇಕ ಪ್ರತಿಭಟನಕಾರರು ಮೋಜು-ಮಸ್ತಿ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ. ಅಧ‍್ಯಕ್ಷರ ನಿವಾಸದಲ್ಲಿನ ಮತ್ತನೆ ಹಾಸಿಗೆ, ಸ್ವಿಮ್ಮಿಂಗ್ ಫೂಲ್ ಸೇರಿದಂತೆ ಎಲ್ಲಾ ಕಡೆ ಪ್ರತಿಭಟನಾಕಾರರು ಮೋಜು-ಮಸ್ತಿ ಮಾಡುತ್ತಿರುವ ಫೋಟೋ ಮತ್ತು ವಿಡಿಯೋಗಳು ವೈರಲ್ ಆಗಿವೆ.  

ಇದನ್ನೂ ಓದಿ: ಶ್ರೀಲಂಕಾ ಸರ್ಕಾರದ ವಿರುದ್ಧ ಕ್ರಿಕೆಟರ್ ಸನತ್ ಜಯಸೂರ್ಯ ಪ್ರತಿಭಟನೆ

ನಿಲ್ಲದ ಜನರ ಆಕ್ರೋಶ!

ಶ್ರೀಲಂಕಾದಲ್ಲಿ ನಡೆಯುತ್ತಿರುವ ಪ್ರತಿಭಟನೆ ಭಾನುವಾರವೂ ಮುಂದುವರೆದಿದೆ. ಅಧ್ಯಕ್ಷ ಗೋಟಾಬಯ ರಾಜಪಕ್ಸೆ ಮತ್ತು ಪ್ರಧಾನಿ ರನಿಲ್ ವಿಕ್ರಮಸಿಂಘೆ ನಿವಾಸಗಳನ್ನು ಪ್ರತಿಭಟನಾಕಾರರು ತಮ್ಮ ಹಿಡಿತಕ್ಕೆ ತೆಗೆದುಕೊಂಡಿದ್ದಾರೆ. ರಾಷ್ಟ್ರದ ಪ್ರಕ್ಷುಬ್ಧತೆಯ ನಡುವೆ ಪ್ರಸ್ತುತ ರಾಷ್ಟ್ರಪತಿ ಎಲ್ಲಿದ್ದಾರೆ ಎಂಬ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ.

7 ದಶಕಗಳಲ್ಲಿಯೇ ತೀವ್ರ ಆರ್ಥಿಕ ಬಿಕ್ಕಟ್ಟು

ಶ್ರೀಲಂಕಾ ತೀವ್ರ ಆರ್ಥಿಕ ಪ್ರಕ್ಷುಬ್ಧತೆಯನ್ನು ಎದುರಿಸುತ್ತಿದೆ. 22 ಮಿಲಿಯನ್ ಜನಸಂಖ್ಯೆ ಹೊಂದಿರುವ ದೇಶವು ಕಳೆದ 7 ದಶಕಗಳಲ್ಲಿಯೇ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದೆ. ಶ್ರೀಲಂಕಾದಲ್ಲಿ ವಿದೇಶಿ ವಿನಿಮಯದ ಕೊರತೆಯಿದೆ, ಇದರಿಂದಾಗಿ ಇಂಧನ ಮತ್ತು ಇತರ ಅಗತ್ಯ ವಸ್ತುಗಳ ಅಗತ್ಯ ಆಮದುಗಳಿಗೆ ಪಾವತಿಸಲು ಸಾಧ್ಯವಾಗುತ್ತಿಲ್ಲ. ಈ ನಡುವೆ ಸಾರ್ವಜನಿಕರು ಬೀದಿ ಪಾಲಾಗಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News