ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ರಿಷಭ್ ಪಂತ್ ಸೇರಿದಂತೆ ಭಾರತೀಯ ಆಟಗಾರರೊಂದಿಗೆ ಧೋನಿ ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದೆ.
ನವದೆಹಲಿ: ಎಡ್ಜ್ಬಾಸ್ಟನ್ನಲ್ಲಿ ನಡೆದ 2ನೇ ಟಿ20 ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 49 ರನ್ಗಳಿಂದ ಭರ್ಜರಿ ಗೆಲುವು ಸಾಧಿಸಿ ಟೀಂ ಇಂಡಿಯಾ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಗೆಲುವಿನ ನಂತರ ‘ಕೂಲ್ ಕ್ಯಾಪ್ಟನ್’ ಖ್ಯಾತಿಯ ಎಂ.ಎಸ್.ಧೋನಿ ಭಾರತ ತಂಡದ ಡ್ರೆಸ್ಸಿಂಗ್ ರೂಂಗೆ ಭೇಟಿ ನೀಡಿ ಆಟಗಾರರ ಜೊತೆಗೆ ಸಮಾಲೋಚನೆ ನಡೆಸಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ತನ್ನ ಅಧಿಕೃತ ಟ್ವಿಟರ್ ಹ್ಯಾಂಡಲ್ನಲ್ಲಿ ಇಶಾನ್ ಕಿಶನ್, ಯುಜ್ವೇಂದ್ರ ಚಾಹಲ್ ಮತ್ತು ರಿಷಭ್ ಪಂತ್ ಸೇರಿದಂತೆ ಭಾರತೀಯ ಆಟಗಾರರೊಂದಿಗೆ ಧೋನಿ ಮಾತುಕತೆ ನಡೆಸುತ್ತಿರುವ ಫೋಟೋಗಳನ್ನು ಹಂಚಿಕೊಂಡಿದೆ. ಧೋನಿ ಮಾತನಾಡುವಾಗ ಪ್ರತಿಯೊಬ್ಬರೂ ಸೈಲೆಂಡ್ ಆಗಿ ಕೇಳಿಸಿಕೊಳ್ಳುತ್ತಾರೆ ಎಂದು ಬಿಸಿಸಿಐ ಟ್ವಿಟರ್ನಲ್ಲಿ ಬರೆದುಕೊಂಡಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ
ಭಾರತದ ಸ್ಟಾರ್ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಷಭ್ ಪಂತ್ ತಮ್ಮ ಟ್ವಿಟರ್ ಖಾತೆಯಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್.ಧೋನಿ ಜೊತೆಗಿನ ಫೋಟೋವನ್ನು ಹಂಚಿಕೊಂಡಿದ್ದಾರೆ. ಇಂಗ್ಲೆಂಡ್ ವಿರುದ್ಧದ 2ನೇ ಟಿ20 ಪಂದ್ಯದಲ್ಲಿ ರಿಷಭ್ ಓಪನರ್ ಆಗಿ ಕಣಕ್ಕಿಳಿದಿದ್ದರು.
ಇಂಗ್ಲೆಂಡ್ ವಿರುದ್ಧ ಭಾರತ ಗೆಲುವು ಸಾಧಿಸಿದ ಬಳಿಕ ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಅವರು ಟೀಂ ಇಂಡಿಯಾದ ಡ್ರೆಸ್ಸಿಂಗ್ ರೂಂಗೆ ಭೇಟಿ ನೀಡಿದ್ದಾರೆ. ಈ ವೇಳೆ ಯುವ ಆಟಗಾರ ಇಶಾನ್ ಕಿಶನ್ ಸೇರಿದಂತೆ ಇನ್ನುಳಿದ ಆಟಗಾರರ ಜೊತೆಗೆ ಧೋನಿ ಮಾತುಕತೆ ನಡೆಸಿದರು.
ಇಶಾನ್ ಕಿಶನ್ಗೆ 2ನೇ ಟಿ20 ಪಂದ್ಯದಲ್ಲಿ ಆಡುವ ಅವಕಾಶ ಸಿಕ್ಕಿರಲಿಲ್ಲ. ಅವರ ಸ್ಥಾನದಲ್ಲಿ ರಿಷಭ್ ಪಂತ್ಗೆ ಓಪನರ್ ಆಗಿ ಆಡುವ ಅವಕಾಶ ಸಿಕ್ಕಿತ್ತು. ಇಶಾನ್ ಕಿಶನ್ ಮೊದಲ ಪಂದ್ಯದಲ್ಲಿ ಕೇವಲ 8 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ ಇಶಾನ್ ಕಿಶನ್ಗೆ ಧೋನಿ ಕೆಲವು ಉಪಯುಕ್ತ ಟಿಪ್ಸ್ ನೀಡಿದರು. ಕಳೆದ ವರ್ಷದ ಟಿ20 ವಿಶ್ವಕಪ್ನಲ್ಲಿ ಧೋನಿ ಭಾರತ ತಂಡಕ್ಕೆ ಮೆಂಟರ್ ಆಗಿ ಕಾರ್ಯನಿರ್ವಹಿಸಿದ್ದರು.
ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ಸೋಲಿಗೆ ಭಾರತ ಸೇಡು ತೀರಿಸಿಕೊಂಡಿದೆ. 2ನೇ ಟಿ20 ಪಂದ್ಯದಲ್ಲಿ ಭಾರತ 49 ರನ್ಗಳ ಭರ್ಜರಿ ಜಯ ಸಾಧಿಸಿತ್ತು. ಈ ಪಂದ್ಯದಲ್ಲಿ ಜಸ್ಪ್ರೀತ್ ಬುಮ್ರಾ ಮತ್ತು ಭುವನೇಶ್ವರ್ ಕುಮಾರ್ ಬಿರುಸಿನ ಆಟ ಪ್ರದರ್ಶಿಸಿದರು. ಜಸ್ಪ್ರೀತ್ ಬುಮ್ರಾ 3 ಮತ್ತು ಭುವನೇಶ್ವರ್ ಕುಮಾರ್ 2 ವಿಕೆಟ್ ಪಡೆದು ಮಿಂಚಿದರು.
ಈ ವಾರದ ಆರಂಭದಲ್ಲಿ ಎಂ.ಎಸ್.ಧೋನಿ ಅವರು ತಮ್ಮ ಪತ್ನಿ ಸಾಕ್ಷಿಯೊಂದಿಗೆ ಇಂಗ್ಲೆಂಡ್ಗೆ ಆಗಮಿಸಿದ್ದರು. ಈ ಜೋಡಿಯು ಜುಲೈ 4ರಂದು ತಮ್ಮ 12ನೇ ವಿವಾಹ ವಾರ್ಷಿಕೋತ್ಸವವನ್ನು ಅದ್ದೂರಿಯಾಗಿ ಆಚರಿಸಿ ಸಂಭ್ರಮಿಸಿತು. ಲೆಜೆಂಡರಿ ವಿಕೆಟ್-ಕೀಪರ್ ಬ್ಯಾಟ್ಸ್ಮನ್ ಜುಲೈ 7ರಂದು ತಮ್ಮ 41ನೇ ಹುಟ್ಟುಹಬ್ಬ ಆಚರಿಸಿಕೊಂಡರು. ‘ಕೂಲ್ ಕ್ಯಾಪ್ಟನ್’ ಆಗಿ ಧೋನಿ ಟೀಂ ಇಂಡಿಯಾಗೆ ವಿಶ್ವಕಪ್, ಟಿ-20 ವಿಶ್ವಕಪ್ ಮತ್ತು ಚಾಂಪಿಯನ್ಸ್ ಟ್ರೋಫಿ ಗೆದ್ದುಕೊಟ್ಟಿದ್ದಾರೆ. ಇದಲ್ಲದೆ ಧೋನಿ ನಾಯಕತ್ವದಲ್ಲಿ ಭಾರತ ತಂಡವು ಅನೇಕ ಸರಣಿಗಳಲ್ಲಿ ಗೆಲುವು ಸಾಧಿಸಿದೆ.