ಬೆಂಗಳೂರು: ‘ಜೈ ಭೀಮ್ʼ ಮತ್ತು ‘ಜನ ಗಣ ಮನ’ ಸಿನಿಮಾಗಳು ನನ್ನ ಮನ ಕಲಕಿವೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಭಾರತೀಯ ನ್ಯಾಯಾಂಗ ವ್ಯವಸ್ಥೆ ವಿಚಾರವಾಗಿ ಸೋಮವಾರ ಸರಣಿ ಟ್ವೀಟ್ ಮಾಡಿರುವ ಎಚ್ಡಿಕೆ; ನ್ಯಾಯದ ವಿಚಾರದಲ್ಲಿ ಬಡವರಿಗೆ ಆಗುತ್ತಿರುವ ಅನ್ಯಾಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
‘ಕೋವಿಡ್ ಸೋಂಕಿನಿಂದ 1 ವಾರ ಮನೆಯಲ್ಲೇ ಚಿಕಿತ್ಸೆ ಪಡೆದ ನಾನು, ಓದು & ಸಿನಿಮಾ ವೀಕ್ಷಣೆಯಲ್ಲಿಯೇ ಸಮಯ ಕಳೆದೆ. ಈ ಬಿಡುವಿನಲ್ಲಿ 2 ಸಿನಿಮಾಗಳನ್ನು ವೀಕ್ಷಿಸಿದೆ. ಸೂಕ್ಷ್ಮ ಕಥಾಹಂದರದ ‘ಜೈ ಭೀಮ್ʼ ಮತ್ತು ‘ಜನ ಗಣ ಮನ’ ಸಿನಿಮಾಗಳೆರಡೂ ನನ್ನ ಮನ ಕಲಕಿವೆ, ಮತ್ತೂ ತೀವ್ರ ತಳಮಳಕ್ಕೆ ಕಾರಣವೂ ಆಗಿವೆ’ ಎಂದು ಹೇಳಿದ್ದಾರೆ.
‘ಸುಪ್ರೀಂಕೋರ್ಟ್ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು, ವಿಚಾರಣಾಧೀನ ಕೈದಿಗಳ ದುಸ್ಥಿತಿಯ ಬಗ್ಗೆ ಜೈಪುರದಲ್ಲಿ ನೀಡಿದ್ದ ಹೇಳಿಕೆ & ‘ಜೈ ಭೀಮ್ʼ ಚಿತ್ರದಲ್ಲಿ ಅದೇ ಕೈದಿಗಳ ಸುತ್ತ ಬಿಚ್ಚಿಕೊಳ್ಳುವ ಕಠೋರ ಕಹಿಸತ್ಯಗಳ ಬಗ್ಗೆ ಇಡೀ ಭಾರತವೇ ಆಲೋಚಿಸಬೇಕು. ನಾನು ಆಲೋಚಿಸುತ್ತಿದ್ದೇನೆ. ಬದಲಾವಣೆಗೆ ಖಂಡಿತಾ ಪ್ರಯತ್ನಿಸುವೆ’ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್'ನ ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳಾದ ರಮಣ ಅವರು; ವಿಚಾರಣಾಧೀನ ಕೈದಿಗಳ ದುಸ್ಥಿತಿಯ ಬಗ್ಗೆ ಜೈಪುರದಲ್ಲಿ ನೀಡಿದ್ದ ಹೇಳಿಕೆ & ʼಜೈ ಭೀಮ್ʼ ಚಿತ್ರದಲ್ಲಿ ಅದೇ ಕೈದಿಗಳ ಸುತ್ತ ಬಿಚ್ಚಿಕೊಳ್ಳುವ ಕಠೋರ ಕಹಿಸತ್ಯಗಳ ಬಗ್ಗೆ ಇಡೀ ಭಾರತವೇ ಆಲೋಚಿಸಬೇಕು. ನಾನು ಆಲೋಚಿಸುತ್ತಿದ್ದೇನೆ. ಬದಲಾವಣೆಗೆ ಖಂಡಿತಾ ಪ್ರಯತ್ನಿಸುವೆ.2/9
— H D Kumaraswamy (@hd_kumaraswamy) July 18, 2022
ಇದನ್ನೂ ಓದಿ: ಆಹಾರ ಪದಾರ್ಥಗಳ ಮೇಲಿನ GSTಗೆ ವಿರೋಧ: ಸಿಎಂಗೆ ಪತ್ರ ಬರೆದ ಸಿದ್ದರಾಮಯ್ಯ
‘ಭಾರತೀಯ ನ್ಯಾಯ ವ್ಯವಸ್ಥೆ ಬಡವರು ದಲಿತರು, ಅಶಕ್ತರಿಗೆ ಗಗನ ಕುಸುಮವಾ? ಓರ್ವ ಸಿರಿವಂತ ಅಪರಾಧಿಗೆ ಕೆಲ ಗಂಟೆಗಳಲ್ಲೇ ಜಾಮೀನು ಸಿಕ್ಕಿದರೆ, ಅದೇ ಬಡ ಅಪರಾಧಿಗಳ (ಅನೇಕ ಪ್ರಕರಣಗಳಲ್ಲಿ ಮುಗ್ಧರು) ಅರ್ಜಿಗಳಿಗೆ ಮೋಕ್ಷವೇ ಕಾಣುವುದಿಲ್ಲ. ಸರಳುಗಳ ಹಿಂದಿನ ನರಕವನ್ನು ‘ಜೈ ಭೀಮ್ʼ ನೈಜವಾಗಿ ತೋರಿಸಿದೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
‘ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದು ಇದನ್ನೇ. ವಿಚಾರಣೆಯೇ ಇಲ್ಲದೆ ಕೈದಿಗಳ ದೀರ್ಘಾವಧಿ ಸೆರೆ ಪ್ರಶ್ನಾರ್ಹ. ನಮ್ಮ ದೇಶದಲ್ಲಿ ಸೆರೆವಾಸದಲ್ಲಿರುವ 6.10 ಲಕ್ಷ ಕೈದಿಗಳಲ್ಲಿ ಶೇ.80ರಷ್ಟು ಜನ ವಿಚಾರಣಾಧೀನ ಕೈದಿಗಳೇ!! ಇವರೆಲ್ಲರೂ ವಿಚಾರಣೆ ಪೂರ್ಣಗೊಳ್ಳದೇ ಕಂಬಿಗಳ ಹಿಂದೆ ಜೀವಶ್ಚವಗಳಂತೆ ಬದುಕುತ್ತಿದ್ದಾರೆ’ ಎಂದು ಹೇಳಿದ್ದಾರೆ.
ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗಳು ಹೇಳಿದ್ದು ಇದನ್ನೇ. ವಿಚಾರಣೆಯೇ ಇಲ್ಲದೆ ಕೈದಿಗಳ ದೀರ್ಘಾವಧಿ ಸೆರೆ ಪ್ರಶ್ನಾರ್ಹ.ನಮ್ಮ ದೇಶದಲ್ಲಿ ಸೆರೆವಾಸದಲ್ಲಿರುವ 6.10 ಲಕ್ಷ ಕೈದಿಗಳಲ್ಲಿ ಶೇ.80ರಷ್ಟು ಜನ ವಿಚಾರಣಾಧೀನ ಕೈದಿಗಳೇ!! ಇವರೆಲ್ಲರೂ ವಿಚಾರಣೆ ಪೂರ್ಣಗೊಳ್ಳದೇ ಕಂಬಿಗಳ ಹಿಂದೆ ಜೀವಶ್ಚವಗಳಂತೆ ಬದುಕುತ್ತಿದ್ದಾರೆ.4/9
— H D Kumaraswamy (@hd_kumaraswamy) July 18, 2022
‘2017ರಲ್ಲಿ ಛತ್ತೀಸಗಢದಲ್ಲಿ CRPF ಜವಾನರ ಮೇಲೆ ನಡೆದ ದಾಳಿ ಪ್ರಕರಣದಲ್ಲಿ 121 ಬುಡಕಟ್ಟು ಜನರನ್ನು ಬಂಧಿಸಲಾಗಿತ್ತು. 5 ವರ್ಷ ಅವರು ಜೈಲುಗಳಲ್ಲಿ ನರಕ ಅನುಭವಿಸಿದರು. ಕೊನೆಗೆ ಅವರ ಪಾತ್ರದ ಬಗ್ಗೆ ಸಾಕ್ಷ್ಯ ಇಲ್ಲವೆಂದು ಎನ್ಐಎ ಕೋರ್ಟ್ ತೀರ್ಪು ನೀಡಿ, ಆ ಮುಗ್ಧರನ್ನು ಖುಲಾಸೆಗೊಳಿಸಿದೆ. ಇದು ಸಮಾಧಾನದ ಸಂಗತಿ. ಹಾಗಾದರೆ 5 ವರ್ಷಗಳ ಅವರ ಸೆರೆವಾಸಕ್ಕೆ ಉತ್ತರದಾಯಿಗಳು ಯಾರು? ಅವರ ಕುಟುಂಬ ಸದಸ್ಯರು ಅನುಭವಿಸಿದ ಕಷ್ಟಕ್ಕೆ ಪರಿಹಾರವೇನು?’ ಎಂದು ಎಚ್ಡಿಕೆ ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: ‘ನಾ ಖಾನೆದುಂಗಾ’ ಎನ್ನುತ್ತಿದ್ದ ಪ್ರಧಾನಿ ಮೋದಿ ‘ನಾ ಬಾತ್ ಕರೂಂಗಾ’ ಎಂಬಂತೆ ಮೌನ ವಹಿಸಿದ್ದಾರೆ: ಕಾಂಗ್ರೆಸ್
‘ಆತುರಗೆಟ್ಟ ಆರೋಪ ಪಟ್ಟಿ, ವಿವೇಚನೆ ಇಲ್ಲದ ಬಂಧನ, ಜಾಮೀನು ಪಡೆಯಲು ಹೆಣಗಾಟದ ಕರಾಳತೆಯ ಮೇಲೆ ‘ಜೈ ಭೀಮ್ʼ ಬೆಳಕು ಚೆಲ್ಲಿದೆ. ಮುಖ್ಯ ನ್ಯಾಯಮೂರ್ತಿಗಳು ಇದನ್ನೇ ಹೇಳಿ ಕಳವಳ ವ್ಯಕ್ತಪಡಪಡಿಸಿದ್ದಾರೆ. ಅವರ ದನಿ ದೇಶಕ್ಕೇ ಕೇಳಿಸಿದೆ. ಹಾಗಾದರೆ, ನಾವು ಬದಲಾಗುವುದು ಯಾವಾಗ? ಸುಧಾರಣೆಗಳು ಎಂದು? ನಾನು ಪ್ರಾಮಾಣಿಕವಾಗಿ ಪ್ರಯತ್ನಿಸುವೆ. ಸಂವಿಧಾನ ನಮಗೆ ಶ್ರೇಷ್ಠ ನ್ಯಾಯಾಂಗವನ್ನು ಕೊಟ್ಟಿದೆ. ಕಷ್ಟ ಎದುರಾದಾಗ ಬಿಲಿನಿಯರ್ʼನಿಂದ ಕಟ್ಟಕಡೆಯ ಬಡಪ್ರಜೆವರೆಗೂ ಎಲ್ಲರೂ ಕೋರ್ಟ್ ಕಡೆ ನೋಡುತ್ತಾರೆ. ಎಲ್ಲರೂ ಇಲ್ಲಿ ಸಮಾನರು. ಅದು ಹಕ್ಕು ಹೌದು. ತಮಿಳುನಾಡಿನ ಕಡಲೂರಿನಲ್ಲಿ ನಡೆದ ನೈಜ ಘಟನೆ ಆಧರಿಸಿದ ‘ಜೈ ಭೀಮ್’ ಚಿತ್ರ ಮನುಷ್ಯತ್ವಕ್ಕೇ ಸವಾಲೆಸೆಯುವ ಅನೇಕ ಪ್ರಶ್ನೆಗಳನ್ನು ಎತ್ತಿದೆ’ ಎಂದು ಹೇಳಿದ್ದಾರೆ.
ಸಂವಿಧಾನ ನಮಗೆ ಶ್ರೇಷ್ಠ ನ್ಯಾಯಾಂಗವನ್ನು ಕೊಟ್ಟಿದೆ. ಕಷ್ಟ ಎದುರಾದಾಗ ಬಿಲಿನಿಯರ್ʼನಿಂದ ಕಟ್ಟಕಡೆಯ ಬಡಪ್ರಜೆವರೆಗೂ ಎಲ್ಲರೂ ಕೋರ್ಟ್ ಕಡೆ ನೋಡುತ್ತಾರೆ. ಎಲ್ಲರೂ ಇಲ್ಲಿ ಸಮಾನರು. ಅದು ಹಕ್ಕು ಹೌದು. ತಮಿಳುನಾಡಿನ ಕಡಲೂರಿನಲ್ಲಿ ನಡೆದ ನೈಜ ಘಟನೆ ಆಧರಿಸಿದ 'ಜೈ ಭೀಮ್' ಚಿತ್ರ ಮನುಷ್ಯತ್ವಕ್ಕೇ ಸವಾಲೆಸೆಯುವ ಅನೇಕ ಪ್ರಶ್ನೆಗಳನ್ನು ಎತ್ತಿದೆ.8/9
— H D Kumaraswamy (@hd_kumaraswamy) July 18, 2022
‘ಜನ ಗಣ ಮನʼ ಚಿತ್ರ ಇವತ್ತಿನ ರಾಜಕೀಯ ಕಪಟತೆ, ಕುಟಿಲತೆ, ಲಂಪಟತೆಯನ್ನು ಮನೋಜ್ಞವಾಗಿ ತೆರೆದಿಟ್ಟಿದೆ. ರಾಜಕೀಯದ ಕಪಿಮುಷ್ಠಿಗೆ ಸಿಲುಕಿ ನರಳುವ ವ್ಯವಸ್ಥೆಯ ಅಸಹಾಯಕ ಮುಖದ ದರ್ಶನ ಮಾಡಿಸಿದೆ. ವ್ಯವಸ್ಥೆಗೆ ಕನ್ನಡಿಯಂತಿರುವ ಸಿನಿಮಾಗಳು ಆವೇಶಕ್ಕೆ, ಆಲೋಚನೆಗೆ ದೂಡುತ್ತವೆ. ಎರಡೂ ಚಿತ್ರಗಳ ನಿರ್ದೇಶಕರು ಅಭಿನಂದನಾರ್ಹರು’ ಎಂದು ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.