"ನಮ್ಮ ಕ್ಲಿನಿಕ್” ಗಳಲ್ಲಿ ಕರ್ತವ್ಯ ನಿರ್ವಹಿಸಲು ಅರ್ಜಿಗಳ ಆಹ್ವಾನ

ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಸೂಚನೆಯಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೊದಲನೇ ಹಂತದಲ್ಲಿ ಸ್ಥಾಪಿಸಲಾಗುವ “ನಮ್ಮ ಕ್ಲಿನಿಕ್” ಗಳಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞನರು ಹಾಗೂ ನಾಲ್ಕನೇ ದರ್ಜೆ ನೌಕರರು ಸೇರಿದಂತೆ ತಲಾ 8 ಹುದ್ದೆಗಳಿಗೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಆಯ್ಕೆ ಪ್ರಕ್ರಿಯೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Written by - Manjunath Hosahalli | Edited by - Manjunath N | Last Updated : Jul 21, 2022, 11:55 PM IST
  • ವಿದ್ಯಾರ್ಹತೆಯ ಮೂಲ ದಾಖಲೆಗಳು, ಒಂದು ಸ್ವಯಂ ದೃಢೀಕೃತ ನಕಲು ಪ್ರತಿ ಮತ್ತು 2 ಭಾವಚಿತ್ರದೊಂದಿಗೆ ಮೇಲೆ ಸೂಚಿಸಿರುವ ಸ್ಥಳ ಮತ್ತು ದಿನಾಂಕದಂದು ವಾಕ್ ಇನ್ ಆಯ್ಕೆ ಪ್ರಕ್ರಿಯೆಗೆ ಹಾಜರಾಗಬಹುದು
"ನಮ್ಮ ಕ್ಲಿನಿಕ್” ಗಳಲ್ಲಿ ಕರ್ತವ್ಯ ನಿರ್ವಹಿಸಲು ಅರ್ಜಿಗಳ ಆಹ್ವಾನ title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿಯಲ್ಲಿ ಕರ್ನಾಟಕ ಸರ್ಕಾರದ ಸೂಚನೆಯಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೊದಲನೇ ಹಂತದಲ್ಲಿ ಸ್ಥಾಪಿಸಲಾಗುವ “ನಮ್ಮ ಕ್ಲಿನಿಕ್” ಗಳಲ್ಲಿ ಕರ್ತವ್ಯ ನಿರ್ವಹಿಸಲು ವೈದ್ಯಾಧಿಕಾರಿಗಳು, ಶುಶ್ರೂಷಕಿ/ಶುಶ್ರೂಷಕರು, ಪ್ರಯೋಗಶಾಲಾ ತಂತ್ರಜ್ಞನರು ಹಾಗೂ ನಾಲ್ಕನೇ ದರ್ಜೆ ನೌಕರರು ಸೇರಿದಂತೆ ತಲಾ 8 ಹುದ್ದೆಗಳಿಗೆ ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ 01 ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ವಾಕ್ ಇನ್ ಆಯ್ಕೆ ಪ್ರಕ್ರಿಯೆ ಮೂಲಕ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಇದನ್ನೂ ಓದಿ:ಮಾತ್ರೆ, ಇನ್ಸುಲಿನ್ ಬೇಕಿಲ್ಲ ಈ ಮೂರು ವಸ್ತುಗಳು ಮುಕ್ತಿ ನೀಡುತ್ತವೆ ಡಯಾಬಿಟೀಸ್ ನಿಂದ

ಅರ್ಹತಾ ಮಾನದಂಡಗಳು:

1. ವಯೋಮಿತಿ: ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಕನಿಷ್ಠ 18 ವರ್ಷಗಳು ತುಂಬಿರಬೇಕು ಹಾಗೂ ಈ ಕೆಳಗೆ ನಮೂದಿಸಿರುವ ವಯೋಮಿತಿಯನ್ನು ಮೀರಿರಬಾರದು.

     • ಸಾಮಾನ್ಯ ವರ್ಗ- 35 ವರ್ಷ
     • 2ಎ, 2ಬಿ, 3ಎ, 3ಬಿ- 38 ವರ್ಷ
     • ಪ.ಜಾತಿ, ಪ.ಪಂಗಡ, ವರ್ಗ-1,- 40 ವರ್ಷ

2. ಅಭ್ಯರ್ಥಿಗಳಿಗೆ ಕನ್ನಡ ಭಾಷಾ ಜ್ಞಾನದ ಅವಶ್ಯಕತೆ ಕಡ್ಡಾಯವಾಗಿರುತ್ತದೆ.

ಇದನ್ನೂ ಓದಿ: ಹಲ್ಲುಜ್ಜುವ ಬ್ರಷ್‌ ಅನ್ನು ಎಷ್ಟು ದಿನಗಳಿಗೊಮ್ಮೆ ಬದಲಾಯಿಸಬೇಕು?

ಆಸಕ್ತರು ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಇರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯೊಂದಿಗೆ ಸಂಬಂಧಿಸಿದ ವಿದ್ಯಾರ್ಹತೆಯ ಮೂಲ ದಾಖಲೆಗಳು, ಒಂದು ಸ್ವಯಂ ದೃಢೀಕೃತ ನಕಲು ಪ್ರತಿ ಮತ್ತು 2 ಭಾವಚಿತ್ರದೊಂದಿಗೆ ಮೇಲೆ ಸೂಚಿಸಿರುವ ಸ್ಥಳ ಮತ್ತು ದಿನಾಂಕದಂದು ವಾಕ್ ಇನ್ ಆಯ್ಕೆ ಪ್ರಕ್ರಿಯೆಗೆ ಹಾಜರಾಗಬಹುದು. ಹೆಚ್ಚಿನ ವಿವರಗಳಿಗಾಗಿ ದೂರವಾಣಿ ಸಂಖ್ಯೆ: 080-22975516, Email id: choph515@gmail.com ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವೆಬ್‌ಸೈಟ್ www.bbmp.gov.in ಅನ್ನು ಸಂಪರ್ಕಿಸಲು ಮುಖ್ಯ ಆರೋಗ್ಯಾಧಿಕಾರಿಯಾದ ಡಾ. ಬಾಲಸುಂದರ್ ರವರು ತಿಳಿಸಿರುತ್ತಾರೆ‌.

ಹೆಚ್ಚಿನ ಮಾಹಿತಿಗಾಗಿ ಪತ್ರಕಾ ಪ್ರಕಟಣೆಯ ಪ್ರತಿಯನ್ನು‌ ಲಗತ್ತಿಸಿದೆ.

ಹೆಚ್ಚಿನ ಸಂಪರ್ಕಕ್ಕಾಗಿ:
ಬಾಲಸುಂದರ್, ಮುಖ್ಯ ಆರೋಗ್ಯಾಧಿಕಾರಿ(ಸಾ.ಆ), ಬಿಬಿಎಂಪಿ.
ಮೊ.ಸಂ: 9480688300

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News