ಮೈಸೂರು: ಮೈಸೂರಿನ ಕಲಾ ಮಂದಿರದಲ್ಲಿ ಇಂದು ನಡೆದ ಸಮಾರಂಭದಲ್ಲಿ "ಸಿದ್ದರಾಮಯ್ಯ ಆಡಳಿತ: ನೀತಿ ನಿರ್ಧಾರಗಳು" ಪುಸ್ತಕವನ್ನು ಲೋಕಾರ್ಪಣೆಗೊಳಿಸಿದ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿಗಳು ಮಾಜಿ ಸಿಎಂ ಸಿದ್ಧರಾಮಯ್ಯನವರನ್ನು ಶ್ಲಾಘಿಸಿದರು.
ಕರ್ನಾಟಕ ರಾಜಕೀಯದಲ್ಲಿ ಡಿ ದೇವರಾಜ ಅರಸುರನ್ನು ದೂರವಿಟ್ಟು ಚರ್ಚಿಸಲು ಸಾಧ್ಯವಿಲ್ಲ.ಅವರ ನಂತರ ಸಿದ್ದರಾಮಯ್ಯನವರು ದೇವರಾಜ ಅರಸುರಂತೆಯೇ ಕಂಡು ಬಂದಿದ್ದಾರೆ.ಜನರ ನಾಡಿ ಮಿಡಿತವನ್ನು ಅರಿತ ಸಿದ್ದರಾಮಯ್ಯ ಜನಪರ ಯೋಜನೆಗಳನ್ನು ಜಾರಿಗೊಳಿಸಿದರು ಎಂದು ಹೇಳಿದರು.
ಇದನ್ನೂ ಓದಿ : BY Vijayendra : ಪಿಎಸ್ಐ ಹಗರಣ ಕಾಂಗ್ರೆಸ್ ಪಕ್ಷದ ಕೂಸು : ಬಿವೈ ವಿಜಯೇಂದ್ರ
ಇನ್ನೂ ಮುಂದುವರೆದು "ಸಿದ್ದರಾಮಯ್ಯನವರು ಗೊಡ್ಡು ಸಂಪ್ರದಾಯಗಳಿಗೆ ಇತಿಶ್ರೀ ಹಾಡಿದಂತವರು, ಈ ಹಿಂದೆ ಚಾಮರಾಜನಗರಕ್ಕೆ ಹೋದರೆ ಅಧಿಕಾರ ಕಳೆದುಕೊಳ್ಳುತ್ತಾರೆಂಬ ನಂಬಿಕೆಯಿತ್ತು.ಆದರೆ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಹಲವಾರು ಬಾರಿ ಚಾಮರಾಜನಗರಕ್ಕೆ ಭೇಟಿ ನೀಡಿ ಐದು ವರ್ಷಗಳ ಆಳ್ವಿಕೆ ಪೂರ್ಣಗೊಳಿಸಿದರು.ಆ ಮೂಲಕ ಚಾಮರಾಜನಗರ ಜಿಲ್ಲೆಯ ಬಗ್ಗೆ ಇದ್ದ ಮೌಢ್ಯವನ್ನು ಹೋಗಲಾಡಿಸಿದರು ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಸ್ನೇಹಜೀವಿಯಾಗಿದ್ದು ಅವರಿಗೆ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ಆಡಳಿತ ನೀಡಿದರು ಎಂದು ಶ್ರೀಗಳು ಹೇಳಿದರು.
ಇದನ್ನೂ ಓದಿ: ಮುಂದಿನ ಚುನಾವಣೆಯಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಬಲ ಮಾರ್ಗದರ್ಶನ ಇರಲಿದೆ : ಸಿಎಂ ಬೊಮ್ಮಾಯಿ
ಇದೆ ವೇಳೆ ಸಿದ್ಧರಾಮೊತ್ಸವದ ಕುರಿತಾಗಿ ಪ್ರಸ್ತಾಪಿಸುತ್ತಾ 'ಮೈಸೂರಿನಲ್ಲಿ ನಡೆದಿರುವ ಪುಸ್ತಕ ಬಿಡುಗಡೆ ಸಮಾರಂಭ ಸಿದ್ದರಾಮೋತ್ಸವಕ್ಕೆ ಮುನ್ನುಡಿ ಬರೆದಂತಾಗಿದೆ.ಪುಸ್ತಕ ಬಿಡುಗಡೆ ಸಮಾರಂಭ ಯಶಸ್ವಿಯಾದಂತೆ ದಾವಣಗೆರೆಯಲ್ಲಿ ಹಮ್ಮಿಕೊಂಡಿರುವ ಸಿದ್ದರಾಮೋತ್ಸವವೂ ಯಶಸ್ವಿಯಾಗಲಿದೆ ಎಂದು ಅವರು ಶುಭ ಹಾರೈಸಿದರು.
ಈ ವೇಳೆ ಕಾರ್ಯಕ್ರಮದಲ್ಲಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಶ್ರೀ ಸೋಮನಾಥ ಸ್ವಾಮೀಜಿ, ಶ್ರೀ ಶಿವಾನಂದಪುರಿ ಸ್ವಾಮೀಜಿ, ಮಾಜಿ ಸಚಿವರಾದ ಡಾ. ಎಚ್.ಸಿ. ಮಹಾದೇವಪ್ಪ, ಬಿ.ಎಲ್. ಶಂಕರ್ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಹಾಜರಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.