ಭಾರತದ ಜಾವೆಲಿನ್ ಎಸೆತಗಾರ ಮತ್ತು ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಜುಲೈ 28 ರಿಂದ ಪ್ರಾರಂಭವಾಗುವ ಬರ್ಮಿಂಗ್ಹ್ಯಾಮ್ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಭಾಗವಹಿಸುವುದು ಅನುಮಾನವಾಗಿದೆ. ನೀರಜ್ ಅವರ ಫಿಟ್ನೆಸ್ ಪರಿಪೂರ್ಣವಾಗಿ ಇಲ್ಲದಿರುವ ಕಾರಣ, ಈ ಬಾರಿಯ ಕಾಮನ್ವೆಲ್ತ್ ಕ್ರೀಡಾಕೂಟದಿಂದ ಹೊರಗುಳಿಯುತ್ತಾರೆ ಎಂದು ಹೇಳಲಾಗುತ್ತಿದೆ.
ಇದನ್ನೂ ಓದಿ: ನೀವು ಬಳಸುವ ಟೀ ಸೊಪ್ಪು ಅಸಲಿಯೋ? ನಕಲಿಯೋ? ನೀರಿನಿಂದ ಈ ರೀತಿ ಪತ್ತೆ ಹಚ್ಚಿ
ನೀರಜ್ ಚೋಪ್ರಾ ಇತ್ತೀಚೆಗೆ ಒರೆಗಾನ್ನಲ್ಲಿ ನಡೆದ ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ಶಿಪ್ 2022 ನಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ. ಇದು ಭಾರತದ ಪಾಲಿಗೆ ಅವಿಸ್ಮರಣೀಯ ಸಂಗತಿಯಾಗಿದ್ದು, ಮೊಟ್ಟ ಮೊದಲ ಬಾರಿಗೆ ಭಾರತಕ್ಕೆ ಬೆಳ್ಳಿ ಪದಕ ಬಂದಿದೆ.
ಟೋಕಿಯೊ ಒಲಿಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅಂತಿಮವಾಗಿ ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕ ಗೆದ್ದಿದ್ದಾರೆ. 19 ವರ್ಷಗಳ ಬಳಿಕ ಭಾರತಕ್ಕೆ ಪದಕ ಬಂದಿದೆ. ಪುರುಷರ ಜಾವೆಲಿನ್ ಥ್ರೋ ಫೈನಲ್ನಲ್ಲಿ ನೀರಜ್ ನಾಲ್ಕನೇ ಪ್ರಯತ್ನದಲ್ಲಿ 88.13 ಮೀಟರ್ ದೂರಕ್ಕೆ ಜಾವೆಲಿನ್ ಎಸೆದಿದ್ದು, ಎರಡನೇ ಸ್ಥಾನ ಪಡೆದರು.
ಇದನ್ನೂ ಓದಿ: ಅಶ್ಲೀಲ ಫೋಟೋಶೂಟ್ ತಂದಿತಾ ಸಂಕಷ್ಟ? ರಣವೀರ್ ಸಿಂಗ್ ವಿರುದ್ಧ ದೂರು!
ಚೋಪ್ರಾ ಅವರು ವಿಶ್ವ ಚಾಂಪಿಯನ್ಶಿಪ್ನಲ್ಲಿ ಬೆಳ್ಳಿ ಪದಕವನ್ನು ಪಡೆದ ಭಾರತದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ. ಏಸ್ ಲಾಂಗ್ ಜಂಪರ್ ಅಂಜು ಬಾಬಿ ಜಾರ್ಜ್ 2003 ರಲ್ಲಿ ಪ್ಯಾರಿಸ್ ವರ್ಲ್ಡ್ಸ್ನಲ್ಲಿ ನಡೆದ ವಿಶ್ವ ಚಾಂಪಿಯನ್ಶಿಪ್ನಲ್ಲಿ ಕಂಚು ಗೆದ್ದಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.