Praveen Nettar Murder Case: 'ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ?'

ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. #ಸರ್ವ_ಜನಾಂಗದ_ಶಾಂತಿಯ_ತೋಟ ಹ್ಯಾಶ್ ಟ್ಯಾಗ್ ಬಳಸಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಎಚ್‍ಡಿಕೆ, ‘ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ ಮೈಮರೆತಿದ್ದು ಯಾಕೆ?’ ಎಂದು ಪ್ರಶ್ನಿಸಿದೆ.

Written by - Puttaraj K Alur | Last Updated : Jul 27, 2022, 02:29 PM IST
  • ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರ ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗೆ ಸಾವಿನ ದವಡೆಗೆ ದೂಡುತ್ತಿವೆ
  • ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತ ಎಂದ ಎಚ್‍ಡಿಕೆ
  • ಹಿಂಸೆಗೆ ಜಾತಿ-ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲವೆಂದು ಕುಮಾರಸ್ವಾಮಿ ಬೇಸರ
Praveen Nettar Murder Case: 'ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ?' title=
Praveen Nettar Murder Case

ಬೆಂಗಳೂರು: ರಾಜ್ಯದಲ್ಲಿ ಯುವಕರ ಕೊಲೆಗಳ ಸರಣಿಯೇ ಮುಂದುವರಿದಿದ್ದು, ಇನ್ನೊಂದು ಜೀವ ಹೋಗಿದೆ. ಈ ಹತ್ಯಾಕಾಂಡಕ್ಕೆ ಕೊನೆಯೇ ಇಲ್ಲವೇ? ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ. #ಸರ್ವ_ಜನಾಂಗದ_ಶಾಂತಿಯ_ತೋಟ ಹ್ಯಾಶ್ ಟ್ಯಾಗ್ ಬಳಸಿ ಬುಧವಾರ ಸರಣಿ ಟ್ವೀಟ್ ಮಾಡಿರುವ ಎಚ್‍ಡಿಕೆ, ‘ಕೊಲೆ ಅದ ಮೇಲೆ ನಡೆಯುವ ಹೇಳಿಕೆಗಳ ಭರಾಟೆ, ಕೂಗಾಟದಿಂದ ಪ್ರಯೋಜನ ಏನು? ಶಿವಮೊಗ್ಗದಲ್ಲಿ ಹರ್ಷ ಕೊಲೆ ಅದ ಮೇಲೆ ಬಿಜೆಪಿ ಸರ್ಕಾರ ಮೈಮರೆತಿದ್ದು ಯಾಕೆ?’ ಎಂದು ಪ್ರಶ್ನಿಸಿದೆ.

‘ಪ್ರತಿ ಕೊಲೆ ಅದ ಮೇಲೆಯೂ ಮೈ ಕೊಡವಿಕೊಂಡು ಎದ್ದೇಳುವ ಬಿಜೆಪಿ ಸರ್ಕಾರ, ಕೊಲೆಯೇ ಆಗದಂತೆ ತಡೆಯುವ ಪ್ರಯತ್ನ ಮಾಡುತ್ತಿಲ್ಲ ಏಕೆ? ಕೊಲೆಗಳೆಂದರೆ ಕೆಲವರಿಗೇಕೆ ಇಷ್ಟೊಂದು ಇಷ್ಟ? ಚುನಾವಣೆ ಹತ್ತಿರ ಆದಂತೆಲ್ಲ ನೆತ್ತರ ಓಕುಳಿ ಹರಿಯುತ್ತಿದೆ! ಈ ನೆತ್ತರ ಮೇಲೆ ರಾಜಕೀಯ ಆಟ ವಿಜೃಂಭಿಸುತ್ತಿದೆ. ಈ ಮೊದಲು ಕೊಲೆಯಾಗಿದ್ದ ಮಸೂದ್ ಕೂಡ ಬಡವ, ಈಗ ಕೊಲೆಯಾದ ಪ್ರವೀಣ್ ನೆಟ್ಟಾರು ಕೂಡ ಬಡ ಕುಟುಂಬದವರೇ. ಶ್ರಮಜೀವಿಗಳ ಕುಟುಂಬದ ಮಕ್ಕಳೇ ಸಾವಿಗೆ ತುತ್ತಾಗುತ್ತಿದ್ದಾರೆ! ರಾಜಕಾರಣಿಗಳು, ಸಂಘಟನೆಗಳ ಮುಖಂಡರ ಮಕ್ಕಳು ಇಂಥ ಗಲಾಟೆಗಳಲ್ಲಿ ಕಾಣೋದೇ ಇಲ್ಲ!’ವೆಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಬೆಂಬಲಿಸುವ ಮತಾಂಧ ಶಕ್ತಿಗಳಿಂದಲೇ ಬಿಜೆಪಿ ಕಾರ್ಯಕರ್ತನ ಹತ್ಯೆ: ಬಿಜೆಪಿ ಆರೋಪ

‘ರಾಜ್ಯದಲ್ಲಿ ಕೆಲ ಸಂಘಟನೆಗಳು ಬಡ ಯುವಕರನ್ನು ದಾರಿ ತಪ್ಪಿಸಿ ಸ್ವಾರ್ಥ ಸಾಧನೆಗಾಗಿ ಸಾವಿನ ದವಡೆಗೆ ದೂಡುತ್ತಿವೆ. ಬಡ ಕುಟುಂಬಗಳ ಜೀವನಾಧಾರವಾಗಿರುವ ಯುವಕರನ್ನು ಬಲಿ ತೆಗೆದುಕೊಳ್ಳುತ್ತವೆ. ಈ ಬಗ್ಗೆ ಯುವಕರು, ಪೋಷಕರು ಎಚ್ಚೆತ್ತುಕೊಳ್ಳಬೇಕು. ಹಿಂಸೆಗೆ ಜಾತಿ, ಧರ್ಮ ಎಂಬುದಿಲ್ಲ. ರಕ್ತಪಿಪಾಸುಗಳಿಗೆ ಮಾನವೀಯತೆ ಇಲ್ಲ. ಕೊಲೆಗೆಡುಕ ಶಕ್ತಿಗಳ ಮುಂದೆ ಸರ್ಕಾರ ಕೋಲೆ ಬಸವನಂತೆ ಆಗಿದೆ. ಈ ಕೊಲೆಗಳ ಹಿಂದಿರುವ ಕಾಣದ ಕೈಗಳಿಗೆ ಕೊಳ ಹಾಕಲು ಧೈರ್ಯವಿಲ್ಲ. ಈ ಅಸಹಾಯಕತೆಗೆ ಕಾರಣ ಏನು?’ ಎಂದು ಎಚ್‍ಡಿಕೆ ಪ್ರಶ್ನಿಸಿದ್ದಾರೆ.

‘ಅಂಕೆಯೇ ಇಲ್ಲದ ಹಂತಕರ ಆಟಕ್ಕೆ ಇತಿಶ್ರೀ ಹಾಡಿ, ಹೆಡೆಮುರಿ ಕಟ್ಟಬೇಕು. ಅದು ಬಿಟ್ಟು ಅಬ್ಬರದ ಹೇಳಿಕೆಗಳಿಂದ ಉಪಯೋಗವೇನು? ಪ್ರತಿ ಕೊಲೆಗೂ ಕೋಮು ಬಣ್ಣ ಹಚ್ಚುವ ನಾಯಕರ ರಾಜಕೀಯ ತಲೆಯಲ್ಲಿ ಭಯಂಕರ ದುರುದ್ದೇಶವೇ ಅಡಗಿದೆ. ಕರ್ನಾಟವು ಸರ್ವ ಜನಾಂಗದ ಶಾಂತಿಯ ತೋಟ. ಶಾಂತಿ, ಸೌಹಾರ್ದತೆ, ಸಹಿಷ್ಣುತೆಯ ಬೀಡು. ಭಾವನಾತ್ಮಕ ವಿಷಯಗಳಿಂದ ಬಂಡವಾಳ ಹೂಡಿಕೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹೊಡೆತ ಬಿದ್ದಿದೆ. ಹೊಸ ಕೈಗಾರಿಕೆಗಳು ಬರುತ್ತಿಲ್ಲ’ವೆಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Siddaramaiah : 'ಬಿಜೆಪಿ ಬೆಂಬಲಿಗರು ನನ್ನ ವಿರುದ್ಧ ಅಪಪ್ರಚಾರ : ಇದು ಸಂಪೂರ್ಣ ಸುಳ್ಳು ಸುದ್ದಿ'

‘ಶಾಂತಿ, ಸುವ್ಯಸ್ಥೆ ಸಮಸ್ಯೆಯಿಂದ ಆರ್ಥಿಕ ಹಿಂಜರಿತ ಉಂಟಾಗಿ ಕೈಗಾರಿಕೆಗಳು ವಲಸೆ ಹೋದರೆ ಎದುರಾಗುವ ನಿರುದ್ಯೋಗ ಸಮಸ್ಯೆಗೆ ಯಾರು ಹೊಣೆ ಆಗುತ್ತಾರೆ? ನಿರುದ್ಯೋಗವೇ ಇಂಥ ಘಟನೆಗಳಿಗೆ ಕಾರಣ. ಹತಾಶ ಯುವಕರ ಮನಸ್ಸು ಕೆಡಿಸಲಾಗುತ್ತಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕು’ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News