ಚಾಮರಾಜನಗರ : ಲಾಡು ಜೊತೆ ಹಣದ ಬ್ಯಾಗನ್ನು ಕೊಟ್ಟು ತೀವ್ರ ಚರ್ಚೆಗೆ ಕಾರಣವಾಗಿದ್ದ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದ ಪ್ರಕರಣ ಸುಖಾಂತ್ಯ ಕಂಡಿದ್ದು ಹಣ ಮತ್ತೆ ಪ್ರಾಧಿಕಾರದ ಬೊಕ್ಕಸ ಸೇರಿದೆ.
ನರಸಿಂಹ ಎಂಬ ಬೆಂಗಳೂರು ಮೂಲದ ವ್ಯಕ್ತಿ ಮಾದಪ್ಪನ ಹಣವನ್ನು ತಂದು ವಾಪಸ್ಸು ನೀಡಿರುವ ಭಕ್ತ. ಗುರುವಾರ ಭೀಮನ ಅಮಾವಾಸ್ಯೆ ಆದದ್ದರಿಂದ ಭಕ್ತರ ದಂಡೇ ಹರಿದುಬಂದಿತ್ತು. ಈ ವೇಳೆ ಕರ್ತವ್ಯ ನಿರ್ವಹಿಸುತ್ತಿದ್ದ ನೌಕರರೊಬ್ಬರು ಭಕ್ತರಿಗೆ ವಿಶೇಷ ದರ ಟಿಕೇಟ್ ನೀಡಿ ಲಾಡು ಪ್ರಸಾದದ ಜೊತೆ 2.91 ಲಕ್ಷ ಹಣವನ್ನು ಕೊಟ್ಟಿದ್ದರು. ಹಣ ಕಳೆದಿದ್ದ ಸಂಬಂಧ ಮಲೆಮಹದೇಶ್ವರ ಬೆಟ್ಟ ಪೊಲೀಸರಿಗೆ ದೂರು ಕೊಡಲಾಗಿತ್ತು. ಜೊತೆಗೆ, ನಷ್ಟವಾದ ಹಣವನ್ನು ನೌಕರನೇ ತುಂಬುವಂತೆ ಪ್ರಾಧಿಕಾರದ ಅಧಿಕಾರಿಗಳು ತಾಕೀತು ಮಾಡಿದ್ದರು.
ಇದನ್ನೂ ಓದಿ : PSI Recruitment scam : ಪಿಎಸ್ಐ ಅಕ್ರಮ ಪ್ರಕರಣ : ಮತ್ತೊಬ್ಬ ಪಿಎಸ್ಐ ಸಿಐಡಿ ಬಲೆಗೆ
ಕಣ್ತಪ್ಪಿನಿಂದ ಆಗಿದ್ದರಿಂದ ಯಾವುದೇ ಪ್ರಕರಣ ದಾಖಲಿಸಿಕೊಳ್ಳದೇ ಕಾರ್ಯಾಚರಣೆ ಕೈಗೊಂಡ ಪೊಲೀಸರು ಸಿಸಿಟಿವಿ ಮೂಲಕ ಗುರುತು ಪತ್ತೆಹಚ್ಚಿ ಭಕ್ತನನ್ನು ಸಂಪರ್ಕಿಸಿ ಹಣವನ್ನು ವಾಪಾಸ್ ಮಾಡಿಸಿದ್ದಾರೆ. ಸದ್ಯ, ಲಾಡು ಜೊತೆ ಹೋಗಿದ್ದ ದುಡ್ಡು ವಾಪಾಸ್ ಆಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.