ನವದೆಹಲಿ: ದೆಹಲಿಯಲ್ಲಿ ನಡೆಯಲಿರುವ ಸಮಾರಂಭಕ್ಕೆ ರಾಹುಲ್ ಗಾಂಧಿಯವರನ್ನು ಆಹ್ವಾನಿಸಲು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಸಿದ್ಧವಾಗಿದೆ ಎಂದು ಮೂಲಗಳು ಹೇಳಿವೆ.
ಈ ಕಾರ್ಯಕ್ರಮವು ಸೆಪ್ಟೆಂಬರ್ 17 ಮತ್ತು 19 ರ ನಡುವೆ ನಡೆಯಲಿದೆ.ಇದರ ಜೊತೆಗೆ,ಎಡಪಕ್ಷದ ಸೀತಾರಾಮ್ ಯೆಚ್ಯುರಿಯಂತಹ ಹಲವಾರು ವಿರೋಧ ಪಕ್ಷದ ನಾಯಕರನ್ನು ಸಹಿತ ಆಹ್ವಾನಿಸಲಾಗುತ್ತದೆ ಎನ್ನಲಾಗಿದೆ.
"ಭವಿಷ್ಯದ ಭಾರತ"ವನ್ನು ಗಮನದಲ್ಲಿಟ್ಟುಕೊಂಡು ಈ ನಾಯಕರನ್ನು ಆಹ್ವಾನಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.ಜೂನ್ ತಿಂಗಳಲ್ಲಿ ಮಾಜಿ ರಾಷ್ಟ್ರಪತಿ ಮತ್ತು ಕಾಂಗ್ರೆಸ್ ನಾಯಕ ಪ್ರಣಬ್ ಮುಖರ್ಜಿ ಅವರು ಆರ್ಎಸ್ಎಸ್ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.