ಬೆಂಗಳೂರು: 2 ದಿನಗಳ ಹಿಂದೆಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ತಾಯಿ-ಮಗಳ ಶವ ಪತ್ತೆಯಾಗಿದೆ. ದಂತ ವೈದ್ಯೆಯಾಗಿರುವ ಶೈಮಾ (39) ಮಗಳು ಆರಾಧನ (10) ಮೃತ ದುರ್ದೈವಿಗಳು. ಕೌಟುಂಬಿಕ ಕಲಹ ಶಂಕೆ ಹಿನ್ನೆಲೆ ಎರಡು ದಿನಗಳ ಹಿಂದೆ ಸೂಸೈಡ್ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.
ಇದನ್ನೂ ಓದಿ: ಎಸ್ ಪಿ ಜಿಲ್ಲಾಧ್ಯಕ್ಷರ ಕಾರನ್ನು 500 ಮೀ ದೂರಕ್ಕೆ ಎಳೆದೊಯ್ದ ಟ್ರಕ್: ಭಯಾನಕ ವಿಡಿಯೋ ವೈರಲ್
ಬೆಂಗಳೂರಿನ ಕಾವೇರಿ ನಗರದಲ್ಲಿ ಈ ಘಟನೆ ನಡೆದಿದೆ. ವಿಷಯ ತಿಳಿದು ಮನೆಗೆ ದೌಡಾಯಿಸಿ ಪೊಲೀಸರು ಪರಿಶೀಲನೆ ನಡೆಸಿದ್ದು, ತಾಯಿ-ಮಗಳ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಅಲ್ಲದೆ ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: ಮಗನನ್ನು ಡ್ರಗ್ಸ್ ಪ್ರಕರಣದಲ್ಲಿ ಸಿಲುಕಿಸುವುದಾಗಿ ಬೆದರಿಕೆ: 6 ಕೋಟಿ ಸುಲಿಗೆ ಮಾಡಿದ ಕಿರಾತಕರು
ಕೊಡಗಿನ ವಿರಾಜಪೇಟೆ ಮೂಲದ ಮೃತ ಶೈಮಾ ಕಳೆದ 10 ವರ್ಷದ ಹಿಂದೆ ದಂತ ವೈದ್ಯ ತರಬೇತಿ ವೇಳೆ ಕೋಲಾರ ಮೂಲದ ನಾರಾಯಣ್ ರನ್ನು ಪ್ರೀತಿಸಿ ಎರಡು ಕುಟುಂಬದವರನ್ನು ಒಪ್ಪಿಸಿ ಮದುವೆಯಾಗಿದ್ದರು. ಪತಿ ಸಹ ವೈದ್ಯನಾಗಿದ್ದು, ಮನೆಯ ಸಮೀಪದಲ್ಲಿ ಕ್ಲಿನಿಕ್ ಇಟ್ಟುಕೊಂಡಿದ್ದರು. 2 ದಿನಗಳ ಹಿಂದೆ ಮನೆಯಲ್ಲಿ ಯಾರು ಇಲ್ಲದಿರುವಾಗ ಶೈಮಾ ಹಾಗೂ ಮಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿಲ್ಲ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.