ಬೆಂಗಳೂರು: ಶಿಕ್ಷಕ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಗುಡ್ ನ್ಯೂಸ್ ನೀಡಿದ್ದಾರೆ. ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಅವರು, ‘ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ. ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ’ ಎಂದು ಹೇಳಿದ್ದಾರೆ.
‘ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು 1ವರ್ಷ ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಕಳೆದ ವರ್ಷ ಕೋವಿಡ್-19 ಸಂದರ್ಭದಲ್ಲಿ ಭೌತಿಕ ತರಗತಿಗಳ ಆರಂಭ ಹಾಗೂ ಕಲಿಕಾ ನಷ್ಟ ಸರಿದೂಗಿಸಲು ಈ ವರ್ಷ ಕಲಿಕಾ ಚೇತರಿಕೆ ಕಾರ್ಯಕ್ರಮ ರೂಪಿಸಲಾಯಿತು’ ಎಂದು ಹೇಳಿದ್ದಾರೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಜವಾಬ್ದಾರಿ ವಹಿಸಿಕೊಂಡು ಒಂದು ವರ್ಷ ಪೂರ್ಣಗೊಂಡಿದೆ. ಈ ಅವಧಿಯಲ್ಲಿ ಸುಧಾರಣೆ, ಬದಲಾವಣೆ, ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ.
ಕಳೆದ ವರ್ಷ ಕೋವಿಡ್-19 ಸಂದರ್ಭದಲ್ಲಿ ಭೌತಿಕ ತರಗತಿಗಳ ಆರಂಭ ಹಾಗೂ ಕಲಿಕಾ ನಷ್ಟ ಸರಿದೂಗಿಸಲು ಈ ವರ್ಷ ಕಲಿಕಾ ಚೇತರಿಕೆ ಕಾರ್ಯಕ್ರಮ ರೂಪಿಸಲಾಯಿತು. (1/3) pic.twitter.com/8u0U1uLgZ5— B.C Nagesh (@BCNagesh_bjp) August 8, 2022
ಇದನ್ನೂ ಓದಿ: "ಹುಟ್ಟಿದ ಕೂಡಲೇ ಪಂಚೆ ಕಟ್ಟಿ ಸ್ವಾತಂತ್ಯ ಸಂಗ್ರಾಮಕ್ಕೆ ಧುಮುಕಿದರಾ ಮಿಸ್ಟರ್ ಸಿದ್ದರಾಮಯ್ಯ?"
‘ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಬದಲಾವಣೆ ತರಲಿರುವ ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನ, 15 ಸಾವಿರ ಶಿಕ್ಷಕರ ನೇಮಕ, ಶಾಲಾ- ಕಾಲೇಜುಗಳ 8,101 ಕೊಠಡಿಗಳ ನಿರ್ಮಾಣ, ಶಿಕ್ಷಕರ ಮುಂಬಡ್ತಿ ಹಾಗೂ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು ಹಾಗೂ ಬಿಸಿಯೂಟ ಕಾರ್ಯಕರ್ತರ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಲಾಗಿದೆ’ ಎಂದು ಶಿಕ್ಷಣ ಸಚಿವರು ಮಾಹಿತಿ ನೀಡಿದ್ದಾರೆ.
ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ಸುಧಾರಣೆ, ಬದಲಾವಣೆ ತರಲಿರುವ 'ರಾಷ್ಟ್ರೀಯ ಶಿಕ್ಷಣ ನೀತಿ-2020' ಅನುಷ್ಠಾನ, 15 ಸಾವಿರ ಶಿಕ್ಷಕರ ನೇಮಕ, ಶಾಲಾ- ಕಾಲೇಜುಗಳ 8,101 ಕೊಠಡಿಗಳ ನಿರ್ಮಾಣ, ಶಿಕ್ಷಕರ ಮುಂಬಡ್ತಿ ಹಾಗೂ ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರು ಹಾಗೂ ಬಿಸಿಯೂಟ ಕಾರ್ಯಕರ್ತರ ಗೌರವ ಸಂಭಾವನೆಯನ್ನು ಹೆಚ್ಚಳ ಮಾಡಲಾಗಿದೆ. (2/3) pic.twitter.com/CKVHx8fmz5
— B.C Nagesh (@BCNagesh_bjp) August 8, 2022
‘ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ. ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ. ಮಾದರಿ ಶಾಲೆ, ಸ್ಪೋಕನ್ ಇಂಗ್ಲೀಷ್ ತರಗತಿ, ನೈತಿಕ ವಿಜ್ಞಾನ ತರಗತಿ ಸೇರಿದಂತೆ ಇನ್ನಿತರ ಶೈಕ್ಷಣಿಕ ಅಭಿವೃದ್ಧಿ ಉಪಕ್ರಮಗಳನ್ನು ಮುಂದಿನ ದಿನಗಳಲ್ಲಿ ಅನುಷ್ಠಾನಗೊಳಿಸುವ ಗುರಿ ಇದೆ’ ಎಂದು ಬಿ.ಸಿ.ನಾಗೇಶ್ ಟ್ವೀಟ್ ಮಾಡಿದ್ದಾರೆ.
ಶಿಕ್ಷಕರ ನೇಮಕ ಪರೀಕ್ಷೆ ಫಲಿತಾಂಶ ಇದೇ ತಿಂಗಳಲ್ಲಿ ಪ್ರಕಟಿಸಲಾಗುತ್ತದೆ. ನವೆಂಬರ್ ತಿಂಗಳಲ್ಲಿ ಟಿಇಟಿ ಪರೀಕ್ಷೆ ನಡೆಸಲಾಗುತ್ತದೆ.
ಮಾದರಿ ಶಾಲೆ, ಸ್ಪೋಕನ್ ಇಂಗ್ಲೀಷ್ ತರಗತಿ, ನೈತಿಕ ವಿಜ್ಞಾನ ತರಗತಿ ಸೇರಿದಂತೆ ಇನ್ನಿತರ ಶೈಕ್ಷಣಿಕ ಅಭಿವೃದ್ಧಿ ಉಪಕ್ರಮಗಳನ್ನು ಮುಂದಿನ ದಿನಗಳಲ್ಲಿ ಅನುಷ್ಠಾನಗೊಳಿಸುವ ಗುರಿ ಇದೆ. (3/3)@BJP4Karnataka pic.twitter.com/F9er9hxLun
— B.C Nagesh (@BCNagesh_bjp) August 8, 2022
ಇದನ್ನೂ ಓದಿ: ಸಿದ್ದರಾಮಯ್ಯ ನಿದ್ರೆಯಲ್ಲಿಯೂ ಕೇಸರಿ ಬಣ್ಣವನ್ನು ದ್ವೇಷಿಸುತ್ತಾರೆ: ಕಟೀಲ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.