ಮಳೆ ಹಾನಿ.. ರಾಜ್ಯ ನಕ್ಷೆಯಿಂದ ಕಲ್ಯಾಣ ಕರ್ನಾಟಕವನ್ನು ಅಳಿಸಲಾಗಿದೆಯೇ?- ಪ್ರಿಯಾಂಕ್ ಖರ್ಗೆ

Priyank Kharge : ಭಾರೀ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದಲ್ಲಿ ರೈತರು ಬೆಳೆದ ಬೆಳೆಗಳು ನಾಶವಾಗಿದ್ದು, ಜನರು ಮೂಲಭೂತ ಸೌಕರ್ಯಗಳಿಲ್ಲದೇ ಹೈರಾಣರಾಗಿದ್ದಾರೆ. ಆದರೂ ಕಲ್ಯಾಣ ಕರ್ನಾಟಕದ ಬಿಜೆಪಿ ಶಾಸಕರು ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು  ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ.

Written by - Chetana Devarmani | Last Updated : Aug 9, 2022, 12:13 PM IST
  • ಭಾರೀ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದಲ್ಲಿ ರೈತರು ಬೆಳೆದ ಬೆಳೆಗಳು ನಾಶವಾಗಿದೆ
  • ಜನರು ಮೂಲಭೂತ ಸೌಕರ್ಯಗಳಿಲ್ಲದೇ ಹೈರಾಣರಾಗಿದ್ದಾರೆ
  • ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅಸಮಾಧಾನ
ಮಳೆ ಹಾನಿ.. ರಾಜ್ಯ ನಕ್ಷೆಯಿಂದ ಕಲ್ಯಾಣ ಕರ್ನಾಟಕವನ್ನು ಅಳಿಸಲಾಗಿದೆಯೇ?- ಪ್ರಿಯಾಂಕ್ ಖರ್ಗೆ  title=
ಪ್ರಿಯಾಂಕ್ ಖರ್ಗೆ

ಬೆಂಗಳೂರು: ಭಾರೀ ಮಳೆಯಿಂದಾಗಿ ಕಲ್ಯಾಣ ಕರ್ನಾಟಕದಲ್ಲಿ ರೈತರು ಬೆಳೆದ ಬೆಳೆಗಳು ನಾಶವಾಗಿದ್ದು, ಜನರು ಮೂಲಭೂತ ಸೌಕರ್ಯಗಳಿಲ್ಲದೇ ಹೈರಾಣರಾಗಿದ್ದಾರೆ. ಆದರೂ ಕಲ್ಯಾಣ ಕರ್ನಾಟಕದ ಬಿಜೆಪಿ ಶಾಸಕರು ಜನರ ಕಷ್ಟಗಳಿಗೆ ಸ್ಪಂದಿಸುತ್ತಿಲ್ಲ ಎಂದು  ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಕಿಡಿಕಾರಿದ್ದಾರೆ. ರಾಜ್ಯ ಸರ್ಕಾರವು ಕಲ್ಯಾಣ ಕರ್ನಾಟಕ ಪ್ರದೇಶವನ್ನು ಕರ್ನಾಟಕದ ನಕ್ಷೆಯಿಂದ ಅಳಿಸಿ ಹಾಕಿದಿಯೇ ಎಂದು ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದ್ದಾರೆ. 

ಇದನ್ನೂ ಓದಿ: ಸುರಿದ ಭಾರೀ ಮಳೆಗೆ ಒಂದೇ ರಾತ್ರಿ 45 ಸಾವಿರ ಕೋಳಿಗಳ ಮಾರಣಹೋಮ

ಮಳೆ ಹಣಿಗೆಯಾಗಿರುವ ರಾಜ್ಯದ ಎಲ್ಲ ಭಾಗಗಳ ರೈತರಿಗೆ ಪರಿಹಾರ ಧನ ನೀಡುವ ರಾಜ್ಯ ಸರ್ಕಾರ ಕೇವಲ ಕಲ್ಯಾಣ ಕರ್ನಾಟಕದ ಜನರನ್ನು ಮರೆತಿರುವುದೇಕೆ? ಆ ಭಾಗಗಳಲ್ಲಿಯೂ ಭಾರಿ ಮಳೆಯಾಗುತ್ತಿದ್ದು  ರೈತರು ಬೆಳೆಗಳನ್ನು ಕಳೆದುಕೊಂಡಿದ್ದಾರೆ. ರಸ್ತೆಗಳು ಮತ್ತು ಮೂಲಸೌಕರ್ಯಗಳಿಗೆ ಭಾರಿ ಹಾನಿಯಾಗಿದೆ ಎಂದಿದ್ದಾರೆ. 

 

 

ಇಷ್ಟೆಲ್ಲ ಅನಾನುಕೂಲ ಆಗಿದ್ದರೂ ಈ ಭಾಗದ ಜನರಿಗೆ ಒಂದು ರೂಪಾಯಿ ಸಹ ಅನುದಾನ ನೀಡಿಲ್ಲ. ಇದೆಲ್ಲವನ್ನು ಕಂಡೂ ಈ ಭಾಗದ ಬಿಜೆಪಿ ಶಾಸಕರು ಮೂಕ ಪ್ರೇಕ್ಷಕರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ. ಸರ್ಕಾರ ಈಗ 21 ಜಿಲ್ಲೆಗಳಿಗೆ ರಾಜ್ಯ ವಿಪತ್ತು ನಿಧಿ ಅಡಿಯಲ್ಲಿ ಒಟ್ಟು 200 ಕೋಟಿ ಪರಿಹಾರ ಅನುದಾನ ಪ್ರಕಟಿಸಿದೆ. ಈ ಬೆನ್ನಲ್ಲೇ ಪ್ರೀಯಾಂಕ್‌ ಖರ್ಗೆ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ: ಸಿದ್ದರಾಮಯ್ಯ ನಿದ್ರೆಯಲ್ಲಿಯೂ ಕೇಸರಿ ಬಣ್ಣವನ್ನು ದ್ವೇಷಿಸುತ್ತಾರೆ: ಕಟೀಲ್

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News