ನವದೆಹಲಿ : ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ(ಸಿಜೆಐ) ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಪ್ರಸ್ತುತ ಎನ್ವಿ ರಮಣ ಅವರು ನಿವೃತ್ತಿ ಹೊಂದಿದ್ದ ಕರಣ ಇವರನ್ನು ನೇಮಕ ಮಾಡಲಾಗಿದೆ. ನ್ಯಾಯಮೂರ್ತಿ ಲಲಿತ್ ಅವರು ಆಗಸ್ಟ್ 27 ರಂದು ಅಧಿಕಾರ ವಹಿಸಿಕೊಳ್ಳಲಿದ್ದಾರೆ.
ಇದನ್ನೂ ಓದಿ : Nupur Sharma Case : ನೂಪುರ್ ಶರ್ಮಾಗೆ ಬಿಗ್ ರಿಲೀಫ್ ನೀಡಿದ ಸುಪ್ರೀಂ ಕೋರ್ಟ್!
"ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ರ ಮೂಲಕ ನೀಡಲಾದ ಅಧಿಕಾರಗಳ ಅನುಷ್ಠಾನದಲ್ಲಿ, 27 ರಿಂದ ಜಾರಿಗೆ ಬರುವಂತೆ ಸುಪ್ರೀಂ ಕೋರ್ಟ್ನ ನ್ಯಾಯಾಧೀಶರಾದ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ರಾಷ್ಟ್ರಪತಿಗಳು ಸಂತೋಷ ವ್ಯಕ್ತಪಡಿಸಿದ್ದಾರೆ ಎಂದು ಕಾನೂನು ಸಚಿವಾಲಯದ ಅಧಿಸೂಚನೆ ತಿಳಿಸಿದೆ.
ನ್ಯಾಯಮೂರ್ತಿ ಲಲಿತ್ ಅವರು ಕೇವಲ ಮೂರು ತಿಂಗಳಿಗಿಂತ ಕಡಿಮೆ ಅವಧಿಗೆ ಸಿಜೆಐ ಆಗಿ ಕಾರ್ಯನಿರ್ವಹಿಸಿಸಲಿದ್ದಾರೆ. ನವೆಂಬರ್ 8 ರಂದು ಅವರು 65 ನೇ ವರ್ಷಕ್ಕೆ ಕಾಲಿಡಲಿದ್ದಾರೆ, ಹೀಗಾಗಿ ನಿವೃತ್ತಿಹೊಂದಲಿದ್ದಾರೆ.
ಇದನ್ನೂ ಓದಿ : Nitish Kumar : 8ನೇ ಬಾರಿಗೆ ಬಿಹಾರ ಸಿಎಂ ಆಗಿ ನಿತೀಶ್ ಕುಮಾರ್ ಪ್ರಮಾಣ ವಚನ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.