ಕೆಟ್ಟ ಆಹಾರ ಪದ್ಧತಿ ಮತ್ತು ಅನಿಯಮಿತ ಜೀವನಶೈಲಿಯು ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣವಾಗುತ್ತದೆ. ಹಾಗಾಗಿ ಯಾವಾಗಲೂ ಕೊಲೆಸ್ಟ್ರಾಲ್ ಮಟ್ಟವನ್ನು ಪರಿಶೀಲಿಸುತ್ತಿರಬೇಕು.
How to control cholesterol : ಕೊಲೆಸ್ಟ್ರಾಲ್ ತುಂಬಾ ಗಂಭೀರವಾದ ಕಾಯಿಲೆಗಳಿಗೆ ಸಂಬಂಧಿಸಿದೆ. ಹೃದಯಾಘಾತ, ಪಾರ್ಶ್ವವಾಯು, ಅಧಿಕ ರಕ್ತದೊತ್ತಡ ಮತ್ತು ಇತರ ಅನೇಕ ಆರೋಗ್ಯ ಸಮಸ್ಯೆಗಳಿಗೆ ಅಧಿಕ ಕೊಲೆಸ್ಟ್ರಾಲ್ ಮುಖ್ಯ ಕಾರಣವಾಗಿದೆ. ಕೆಟ್ಟ ಆಹಾರ ಪದ್ಧತಿ ಮತ್ತು ಅನಿಯಮಿತ ಜೀವನಶೈಲಿಯು ಕೊಲೆಸ್ಟ್ರಾಲ್ ಹೆಚ್ಚಾಗಲು ಕಾರಣವಾಗುತ್ತದೆ. ಹಾಗಾಗಿ ಯಾವಾಗಲೂ ಕೊಲೆಸ್ಟ್ರಾಲ್ ಮಟ್ಟವನ್ನು ಪರಿಶೀಲಿಸುತ್ತಿರಬೇಕು. ಅದರಿಂದ ಉಂಟಾಗುವ ತೊಂದರೆಗಳ ಮೇಲೆ ನಿಗಾ ಇಡಬೇಕು .
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಿಸುವುದರಿಂದ ಹೃದಯಾಘಾತ, ಪಾರ್ಶ್ವವಾಯು ಮತ್ತು ಎಲ್ಲಾ ರೀತಿಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಆದ್ದರಿಂದ ದೇಹದಲ್ಲಿ ಹೆಚ್ಚುತ್ತಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು, ನಿಮ್ಮ ಜೀವನಶೈಲಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಅನೇಕ ಜನರು ಈ ಸ್ಥಿತಿಯನ್ನು ನಿಭಾಯಿಸಲು ಔಷಧಿಗಳನ್ನು ಬಳಸುತ್ತಾರೆ, ಕೆಲವರು ಮನೆಮದ್ದುಗಳನ್ನು ಆಶ್ರಯಿಸುತ್ತಾರೆ.
ಸೂರ್ಯಕಾಂತಿ ಬೀಜಗಳು ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡುತ್ತದೆ. ಸೂರ್ಯಕಾಂತಿ ಬೀಜಗಳು ದೇಹದಲ್ಲಿ ಹೆಚ್ಚುತ್ತಿರುವ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುವಲ್ಲಿ ಬಹು ದೊಡ್ಡ ಪಾತ್ರ ವಹಿಸುತ್ತದೆ.
ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸೂರ್ಯಕಾಂತಿ ಬೀಜಗಳು ಸಹಕಾರಿ ಎಂದು ಹೇಳಲಾಗುತ್ತದೆ. ಈ ಬೀಜಗಳು ಉತ್ಕರ್ಷಣ ನಿರೋಧಕಗಳು ಮತ್ತು ಫಾಲಿ ಸ್ಯಾಚ್ಯುರೆ ಟೆಡ್ ಕೊಬ್ಬುಗಳನ್ನು ಹೊಂದಿರುತ್ತವೆ. ಇದು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ ಮತ್ತು ಎಲ್ಲಾ ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ.
ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸೂರ್ಯಕಾಂತಿ ಬೀಜಗಳನ್ನು ಬೆಳಿಗ್ಗೆ ಅಗಿಯಬಹುದು. ಪ್ರತಿದಿನ ಬೆರಳೆಣಿಕೆಯಷ್ಟು ಸೂರ್ಯಕಾಂತಿ ಬೀಜಗಳನ್ನು ಸೇವಿಸಬಹುದು. ಓಟ್ಸ್, ಗಂಜಿ ಅಥವಾ ಸಲಾಡ್ಗಳಿಗೆ ಈ ಬೀಜಗಳನ್ನು ಸೇರಿಸುವ ಮೂಲಕ ತಿನ್ನಬಹುದು. ಇದಲ್ಲದೆ, ಈ ಬೀಜಗಳನ್ನು ಹುರಿದು ಕೂಡಾ ತಿನ್ನಬಹುದು.