ತುಮಕೂರು: ಕರ್ನಾಟಕ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶ ಸೋಮವಾರ ಪ್ರಕಟವಾದ ನಂತರ ವಿಜಯೋತ್ಸವದಲ್ಲಿ ತೊಡಗಿದ್ದ ಕಾರ್ಯಕರ್ತರ ಮೇಲೆ ಆಸಿಡ್ ದಾಳಿ ನಡೆಸಿದ ಧಾರುಣ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ನಗರದ ಕಾಂಗ್ರೆಸ್ ಅಭ್ಯರ್ಥಿ ಇನಾಯತುಲ್ಲಾ ಖಾನ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಜಯಶಾಲಿಯಾದ ಹಿನ್ನೆಲೆಯಲ್ಲಿ ಅವರ ಬೆಂಬಲಿಗರೆಲ್ಲಾ ಸೇರಿ ವಿಜಯೋತ್ಸವ ಮೆರವಣಿಗೆ ನಡೆಸುತ್ತಿದ್ದರು. ಈ ಸಂದರ್ಭದಲ್ಲಿ ಕಿಡಿಗೇಡಿಗಳು ಆಸಿಡ್ ದಾಳಿ ನಡೆಸಿದ್ದು, ಕನಿಷ್ಠ 8 ಮಂದಿ ಗಾಯಗೊಂಡಿದ್ದಾರೆ ಎಂದು ಎಎನ್ಐ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಘಟನೆಯಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪೊಲೀಸರು ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಹುಡುಕಾಟ ಆರಂಭಿಸಿದ್ದಾರೆ.
Karnataka: Eight people injured in an acid attack on the victory procession of winning Congress candidate Inayatullah Khan in Tumkur. #KarnatakaLocalBodyElections pic.twitter.com/EKnHMo8Vy6
— ANI (@ANI) September 3, 2018