ನವದೆಹಲಿ: 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಸರಾಸರಿಯಾಗಿ ಮಹಿಳೆಯರು ಪುರುಷರಿಗಿಂತ ಹೆಚ್ಚು ಸೆಕ್ಸ್ ಪಾಲುದಾರರನ್ನು ಹೊಂದಿದ್ದಾರೆ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ ಹೇಳಿದೆ.
1.1 ಲಕ್ಷ ಮಹಿಳೆಯರು ಮತ್ತು 1 ಲಕ್ಷ ಪುರುಷರಲ್ಲಿ ನಡೆಸಿದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯು ಅನೇಕ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪುರುಷರಿಗಿಂತ ಸರಾಸರಿ ಮಹಿಳೆಯರ ಸೆಕ್ಸ್ ಪಾಲುದಾರರ ಸಂಖ್ಯೆ ಅಧಿಕ ಪ್ರಮಾಣದಲ್ಲಿದೆ ಎಂದು ಸಮೀಕ್ಷೆ ಉಲ್ಲೇಖಿಸಿದೆ.
ಈ ರಾಜ್ಯಗಳಲ್ಲಿ ವಿಶೇಷವಾಗಿ ರಾಜಸ್ಥಾನ, ಹರಿಯಾಣ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಧ್ಯಪ್ರದೇಶ, ಅಸ್ಸಾಂ, ಕೇರಳ, ಲಕ್ಷದ್ವೀಪ, ಪುದುಚೇರಿ ಮತ್ತು ತಮಿಳುನಾಡು ಸೇರಿವೆ.
ಇದನ್ನೂ ಓದಿ: Rajinikanth as Governor: ರಾಜ್ಯಪಾಲರಾಗಿ ನೇಮಕವಾಗಲಿದ್ದಾರಾ ರಜನಿಕಾಂತ್?
ರಾಜಸ್ಥಾನದಲ್ಲಿನ ಮಹಿಳೆಯರು ಸರಾಸರಿ 3.1 ಸೆಕ್ಸ್ ಪಾಲುದಾರರನ್ನು ಹೊಂದಿದ್ದರೆ, ಪುರುಷರು ಶೇ. 1.8 ರಷ್ಟು ಪಾಲುದಾರರನ್ನು ಹೊಂದಿದ್ದಾರೆ ಎನ್ನಲಾಗಿದೆ.ಆ ಮೂಲಕ ಮಹಿಳೆಯರು ಅಧಿಕ ಪ್ರಮಾಣದಲ್ಲಿ ಸೆಕ್ಸ್ ಪಾಲುದಾರರನ್ನು ಹೊಂದಿರುವ ರಾಜ್ಯ ಎನ್ನುವ ಹೆಗ್ಗಳಿಕೆಗೆ ಪಾತ್ರವಾಗಿದೆ.
2019-21ರ ಅವಧಿಯಲ್ಲಿ ನಡೆಸಿದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ-5 ಯ ಪ್ರಕಾರ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿಂದ ದೇಶದ 707 ಜಿಲ್ಲೆಗಳನ್ನು ಸಮೀಕ್ಷೆ ನಡೆಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.